ಹಾವೇರಿ: ನಗರದಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಒಟ್ಟಾರೆ ಹಾವೇರಿ ನಗರದ ಸರ್ವಾಂಗೀಣ ಅಭಿವೃದ್ಧಿ ಹಾಗೂ ನವ ಹಾವೇರಿ ನಿಮಾರ್ಣಕ್ಕೆ 100 ಕೋಟಿ ರೂ., ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಲಾಗುವುದು ಎಂದು ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ನಗರದ ಜಿಲ್ಲಾ ಗುರುಭವನದಲ್ಲಿ ಭಾನುವಾರ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಕೆಯುಐಡಿಎಫ್ಸಿ ಹಾಗೂ ಹಾವೇರಿ ನಗರಸಭೆ ಸಹಯೋಗದಲ್ಲಿ 49.19 ಕೋಟಿ ರೂ., ಮೊತ್ತದ ವಿವಿಧ ಕಾಮಗಾರಿಗಳ ಭೂಮಿ ಪೂಜೆ ಹಾಗೂ 1.02 ಕೋಟಿ ರೂ., ಮೊತ್ತದ ಕಾಮಗಾರಿಗೆ ಚಾಲನೆಯ ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಗರದಲ್ಲಿ ಉತ್ತಮ ರಸ್ತೆ, ರಿಂಗ್ ರೋಡ್ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಭೂ ವೀರಾಪುರ ಸಮೀಪದ 10 ಎಕರೆ ಜಮೀನು ಖರೀದಿಸುವ ಮೂಲಕ ಆಶ್ರಯ ಸಮಿತಿ ಹಸ್ತಾಂತರಿಸಲಾಗಿತ್ತು. ಅಲ್ಲಿ 1112 ಮನೆಗಳ ನಿಮಾರ್ಣ ಮಾಡಲಾಗುತ್ತಿದೆ. ಈಗಾಗಲೇ 558 ಫಲಾನುಭವಿಗೆ ಹಂಚಿಕೆ ಮಾಡಲಾಗಿದೆ. ಬರುವ ಮಾರ್ಚ್ ತಿಂಗಳೊಳಗೆ ಮನೆಗಳ ನಿಮಾರ್ಣ ಕಾಮಗಾರಿ ರ್ಪೂಣಗೊಳ್ಳಲಿದೆ. ನಾಗೇಂದ್ರನಮಟ್ಟಿ ಜಿ+1 ಮನೆಗಳನ್ನು 300 ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುವುದು ಎಂದರು.
ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಮಿರ್ಕ ಇಲಾಖೆಯಲ್ಲಿ ನೋಂದಣಿಯಾದ ಕಾಮಿರ್ಕರ ಮಕ್ಕಳು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಆರು ವಿದ್ಯಾಥಿರ್ಗಳಿಗೆ ಲ್ಯಾಪ್ಟಾಪ್ ವಿತರಣೆ ಮಾಡಲಾಯಿತು.
ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಹಿರೇಮಠ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಮೈದೂರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾ ನಿರ್ದೇಶಕ ಮಮತಾ ಹೊಸಗೌಡ್ರ, ನಗರಸಭೆ ಸದಸ್ಯರಾದ ಮಂಜುನಾಥ ಬಿಷ್ಟಣ್ಣವರ, ರೇಣುಕಾ ಪುತ್ರನ್, ಕೆ.ಸಿ.ಸಿ.ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಎಂ.ವಿ. ಗಾಜಿಗೌಡ್ರ ಮತ್ತಿತರರಿದ್ದರು.
ಉಪ ವಿಭಾಗಾಧಿಕಾರಿ ಹಾಗೂ ಹಾವೇರಿ ನಗರಸಭೆ ಪ್ರಭಾರ ಆಯುಕ್ತ ಚೆನ್ನಪ್ಪ ಸ್ವಾಗತಿಸಿದರು. ಶಿಕ್ಷಕ ನಾಗರಾಜ ನಡುವಿನಮಠ ನಿರೂಪಿಸಿದರು. ತಹಸೀಲ್ದಾರ್ ಶರಣಮ್ಮ ವಂದಿಸಿದರು.
ನವ ಹಾವೇರಿ ಸಿದ್ಧಪಡಿಸಲು 100 ಕೋಟಿ ರೂ. ಅನುದಾನ

You Might Also Like
ಕೂಡಲೇ ಇವುಗಳನ್ನು ತಿನ್ನುವುದನ್ನು ನಿಲ್ಲಿಸದಿದ್ರೆ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗೋದು ಗ್ಯಾರಂಟಿ! Sperm Count
Sperm Count : ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು…
ಕ್ಯಾರೆಟ್ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್ ವಿಧಾನ | Recipe
ಕ್ಯಾರೆಟ್ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…
ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…