More

    ಯಾಲಕ್ಕಿ ನಾಡಲ್ಲಿ ಇಂದು ಮೋದಿ ಘರ್ಜನೆ; 3 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ

    ಹಾವೇರಿ: ಪ್ರಧಾನಿಯಾದ ಬಳಿಕ ಮೇ 6ರಂದು ಸಂಜೆ 4 ಗಂಟೆಗೆ ಮೊದಲ ಬಾರಿಗೆ ಹಾವೇರಿಗೆ ಆಗಮಿಸುತ್ತಿರುವ ನರೇಂದ್ರ ಮೋದಿ ಅವರು ಚುನಾವಣಾ ರ‌್ಯಾಲಿಯಲ್ಲಿ ಘರ್ಜಿಸಲಿದ್ದಾರೆ. ಅವರ ಸ್ವಾಗತಕ್ಕಾಗಿ ಯಾಲಕ್ಕಿ ನಾಡು ಸಜ್ಜಾಗಿದೆ. ಜನವರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆದಿದ್ದ ಅಜ್ಜಯ್ಯನ ಗುಡಿ ಬಳಿಯ ಸ್ಥಳದಲ್ಲಿ ಬೃಹತ್ ಜರ್ಮನ್ ಟೆಂಟ್ ಅಳವಡಿಸಲಾಗಿದ್ದು, ಮೂರು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ.
    ಮೋದಿ ರ‌್ಯಾಲಿಯಲ್ಲಿ ಹಾವೇರಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರ, ಹುಬ್ಬಳ್ಳಿ-ಧಾರವಾಡ ಹಾಗೂ ಗದಗ ಜಿಲ್ಲೆಯ ಒಟ್ಟು 13 ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರು, ಸಾರ್ವಜನಿಕರು ಭಾಗವಹಿಸಲಿದ್ದಾರೆ. 4 ಗಂಟೆಗೆ ಸಭಾ ಕಾರ್ಯಕ್ರಮ ಆರಂಭವಾಗಲಿದೆ. 5 ಗಂಟೆಗೆ ಮೋದಿ ಹಾವೇರಿಗೆ ಆಗಮಿಸಲಿದ್ದು, 5.10ರಿಂದ 6.10ರವರೆಗೆ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಪಾಲ್ಗೊಳ್ಳಲಿದ್ದಾರೆ.
    ವೇದಿಕೆ ಮೇಲೆ ಪ್ರಧಾನಿ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ ಉದಾಸಿ, ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಹಾವೇರಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, 13 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು ಸೇರಿ ಒಟ್ಟು 30 ಜನ ವೇದಿಕೆ ಹಂಚಿಕೊಳ್ಳಲಿದ್ದಾರೆ. ಬೃಹತ್ ವೇದಿಕೆಯಲ್ಲಿ ದೊಡ್ಡ ಎಲ್‌ಇಡಿ ಪರದೆ ಅಳವಡಿಸಲಾಗಿದೆ. ವೇದಿಕೆ ಮುಂಭಾಗದಲ್ಲಿ ಅಲ್ಲಲ್ಲಿ ಎಲ್‌ಇಡಿ ಪರದೆ ಅಳವಡಿಸಲಾಗಿದೆ. ರ‌್ಯಾಲಿ ಹಿನ್ನೆಲೆಯಲ್ಲಿ ನಗರದ ಪಿಬಿ ರಸ್ತೆಯಲ್ಲಿ ಕೇಸರಿ ತೋರಣ ಕಂಗೊಳಿಸುತ್ತಿದೆ.
    ಸಮ್ಮೇಳನದ ಸ್ಥಳಕ್ಕೆ ಶುಕ್ರವಾರ ಸಿಐಡಿ ಡಿಜಿ ಕೆ.ವಿ.ಶರತ್ಚಂದ್ರ, ದಾವಣಗೆರೆ ಪೂರ್ವ ವಲಯದ ಐಜಿಪಿ ತ್ಯಾಗರಾಜನ್, ಎಸ್‌ಪಿ ಡಾ.ಶಿವಕುಮಾರ ಗುಣಾರೆ ಹಾಗೂ ಸಿಬ್ಬಂದಿ ಭದ್ರತೆ ಕುರಿತು ಪರಿಶೀಲನೆ ನಡೆಸಿದರು.
    ಭದ್ರತೆಗೆ 1,500 ಸಿಬ್ಬಂದಿ
    ಪ್ರಧಾನಿ ಮೋದಿ ಕಾರ್ಯಕ್ರಮದ ಭದ್ರತೆ ಹಿನ್ನೆಲೆಯಲ್ಲಿ ಎಸ್‌ಪಿಜಿ ಪಡೆ ನಗರದಲ್ಲಿ ಮೂರು ದಿನಗಳಿಂದ ಬೀಡು ಬಿಟ್ಟಿದೆ. ಎಸ್‌ಪಿಜಿ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸರು ವಿಶೇಷ ಭದ್ರತೆ ಕೈಗೊಂಡಿದ್ದಾರೆ. ಭದ್ರತೆಗಾಗಿ 400 ಪ್ಯಾರಾ ಮಿಲಿಟರಿ ಸೇರಿದಂತೆ 1,500 ಪೊಲೀಸ್ ಅಧಿಕಾರಿ, ಸಿಬ್ಬಂದಿ ನೇಮಿಸಲಾಗಿದೆ ಎಂದು ಎಸ್‌ಪಿ ಶಿವಕುಮಾರ ಗುಣಾರೆ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts