More

  ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ‌ ರಾಜಿನಾಮೆ; ಹದಿನೇಳರ ಬದಲು ಇಂದೇ ರಾಜೀನಾಮೆ ಸಲ್ಲಿಕೆ

  ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿ‌ ಇಂದು ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದರು.

  ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜಿನಾಮೆ ಸಲ್ಲಿಸಿದರು. ಈ ಮೊದಲು ಜೂ.17ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುವುದಾಗಿ ಹೇಳಿದ್ದರು. ಆದರೆ, ಅದಕ್ಕೂ ಎರಡು ದಿನ ಮೊದಲೇ ರಾಜೀನಾಮೆ ಕೊಟ್ಟಿದ್ದಾರೆ.

  ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ, ಶಾಸಕರಾದ ಜಿ.ಟಿ ದೇವೇಗೌಡ, ಮುನಿರಾಜು, ಡಾ.ಚಂದ್ರು ಲಮಾಣಿ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ, ಮಾರುತಿ ಮೂಳೆ, ಬೋಜೆಗೌಡ, ಇತರರು ಹಾಜರಿದ್ದರು.

  See also  ವಿಚಾರಣೆ ವೇಳೆ ಆಸನ ಬದಲಿಸಿದ್ದಕ್ಕೆ ನನ್ನನ್ನು ಕೆಟ್ಟದಾಗಿ ಟ್ರೋಲ್ ಮಾಡಲಾಗಿತ್ತು: ಸಿಜೆಐ ಡಿ.ವೈ. ಚಂದ್ರಚೂಡ್

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts