More

    ಲೋಕಸಭೆ ಚುನಾವಣೆ ಹಿನ್ನೆಲೆ ಅಧಿಕಾರಿಗಳ ಮಾಹಿತಿ ಸಂಗ್ರಹಿಸಿ; ಎಡಿಸಿ ಪೂಜಾರ ವೀರಮಲ್ಲಪ್ಪ ಸೂಚನೆ

    ಹಾವೇರಿ: ಮುಂಬರುವ ಲೋಕಸಭಾ ಚುನಾವಣೆಯ ಮತಗಟ್ಟೆ ಹಾಗೂ ಚುನಾವಣಾ ವಿವಿಧ ಕಾರ್ಯಗಳ ನಿರ್ವಹಣೆಗಾಗಿ ಅಧಿಕಾರಿ ಸಿಬ್ಬಂದಿಯ ಮಾಹಿತಿಯನ್ನು ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್‌ಐಸಿ)ದ ಹಾವೇರಿ ಘಟಕ ಅಭಿವೃದ್ಧಿ ಪಡಿಸಿರುವ ಚುನಾವಣಾ ಮಾಹಿತಿ ವ್ಯವಸ್ಥೆಯ ತಂತ್ರಾಂಶದಲ್ಲಿ (ಇಎಂಎಸ್) ದಾಖಲಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ ನೀಡಿದರು.
    ಇಲ್ಲಿನ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಚುನಾವಣೆ ಸುಸೂತ್ರವಾಗಿ ನಡೆಯಲು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಯ ನಿಖರವಾದ ಮಾಹಿತಿ ಅಗತ್ಯವಾಗಿದೆ. ಎಚ್.ಆರ್.ಎಂ.ಎಸ್.ನಲ್ಲಿರುವ ಸಿಬ್ಬಂದಿಯ ವಿವರವನ್ನು ಕಾಲೋಚಿತಗೊಳಿಸಿ, ಸದರಿ ಮಾಹಿತಿಯನ್ನು ಎಲೆಕ್ಷನ್ ಮ್ಯಾನೇಜ್‌ಮೆಂಟ್ ಸಿಸ್ಟಂ ಆ್ಯಪ್‌ನಲ್ಲಿ ದಾಖಲಿಸಬೇಕು ಎಂದು ಸೂಚಿಸಿದರು.
    ಚುನಾವಣಾ ಕಾರ್ಯಕ್ರಮಗಳು ಯಶಸ್ವಿಯಾಗಲು ಮತಪೆಟ್ಟಿಗೆಗಳು, ಮತಗಟ್ಟೆಗಳು ಹಾಗೂ ಮತಗಟ್ಟೆ ಕೇಂದ್ರದ ಅಧಿಕಾರಿಗಳು, ಸಹಾಯಕ ಅಧಿಕಾರಿಗಳು ಹಾಗೂ ಚುನಾವಣಾ ಕಾರ್ಯದ ವಿವಿಧ ಸಮಿತಿಗಳ ಸದಸ್ಯರ ಪಾತ್ರ ಬಹುಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಗಳಲ್ಲಿ ಕೆಲಸ ಮಾಡುವ ಎಲ್ಲ ನೌಕರರ ಮಾಹಿತಿ ಕಡ್ಡಾಯವಾಗಿ ನೀಡಬೇಕು. ಇಲಾಖಾ ಅಧಿಕಾರಿಗಳ ಹಂತದಲ್ಲಿ ಚುನಾವಣಾ ಕಾರ್ಯಕ್ಕೆ ವಿನಾಯಿತಿ ನೀಡಲು ಅವಕಾಶವಿಲ್ಲ. ಕಾರಣ ವಿಕಲಚೇತನರು, ತೀವ್ರತರ ಕಾಯಿಲೆಗಳಿಂದ ಬಳಲುತ್ತಿರುವವರು, 59 ವರ್ಷ ಮೇಲ್ಪಟ್ಟವರ ಮಾಹಿತಿಯನ್ನು ದಾಖಲಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.
    ಉಪನ್ಯಾಸಕ ಅರವಿಂದ ಐರಣಿ ಮಾತನಾಡಿ, ಹಾವೇರಿ ಎನ್‌ಐಸಿ ಅಧಿಕಾರಿಗಳು ಚುನಾವಣಾ ನಿರ್ವಹಣಾ ವ್ಯವಸ್ಥೆಯ ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು, ಎಚ್.ಆರ್.ಎಂ.ಎಸ್. ತಂತ್ರಾಂಶದಲ್ಲಿರುವ ಅಧಿಕಾರಿ, ಸಿಬ್ಬಂದಿಯ ಮಾಹಿತಿಯನ್ನು ಪುನರ್ ಪರಿಶೀಲಿಸಬೇಕು. ಹೆಸರು, ಹುದ್ದೆ, ಕೆಲಸದ ಸ್ಥಳ, ಲಿಂಗ, ವೇತನ ಶ್ರೇಣಿ, ಮತದಾನ ಇರುವ ಕ್ಷೇತ್ರ, ಮತಗಟ್ಟೆ ಸಂಖ್ಯೆ, ಎಪಿಕ್ ಕಾರ್ಡ್ ನಂಬರ್, ಮತದಾರರ ಪಟ್ಟಿಯ ಪಾರ್ಟ್ ನಂಬರ್, ಕ್ರಮ ಸಂಖ್ಯೆ, ಸೇರಿ ಇತರ ಮಾಹಿತಿ ದಾಖಲಿಸಬೇಕು. ಮಾಹಿತಿ ಅತ್ಯಂತ ಗೌಪ್ಯವಾಗಿರಬೇಕು. ಸೋರಿಕೆಯಾಗಬಾರದು ಎಂದರು.
    ಚುನಾವಣಾ ಶಿರಸ್ತೇದಾರ ಎ.ಖಾನ್, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.
    6,819 ಸಿಬ್ಬಂದಿ ಅಗತ್ಯ
    ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ 10,809 ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮತಗಟ್ಟೆಗಳ ಕಾರ್ಯ ನಿರ್ವಹಣೆಗೆ 6,819 ಸಿಬ್ಬಂದಿಯ ಅಗತ್ಯವಿದೆ. ಉಳಿದಂತೆ ಚೆಕ್‌ಪೋಸ್ಟ್, ಫ್ಲೈಯಿಂಗ್ ಸ್ಕ್ವಾಡ್, ಎಸ್.ಎಸ್.ಟಿ. ಟಿಮ್ ಸೇರಿದಂತೆ ನೀತಿ ಸಂಹಿತೆ ನಿಗಾ ನಿರ್ವಹಣೆ ಹಾಗೂ ವಿವಿಧ ಸಮಿತಿಗಳ ಕಾರ್ಯ ನಿರ್ವಹಣೆಗೆ ಸಿಬ್ಬಂದಿ ಅಗತ್ಯವಿದೆ ಎಂದು ಎಡಿಸಿ ವೀರಮಲ್ಲಪ್ಪ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts