More

    ಪ್ರಥಮ ಪಿಯುಸಿ ಪ್ರವೇಶಾವಕಾಶಕ್ಕೆ ಅರ್ಜಿ ಆಹ್ವಾನ

    ಹಾವೇರಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮುರಾರ್ಜಿ ದೇಸಾಯಿ ಪದವಿಪೂರ್ವ ಕಾಲೇಜುಗಳಲ್ಲಿ 2024-25ನೇ ಸಾಲಿನ ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
    ಪ್ರಥಮ ಪಿಯುಸಿ ತರಗತಿಯ ಪಿಸಿಎಂಬಿ ಹಾಗೂ ಪಿಸಿಎಂಸಿ ಸಂಯೋಜನೆಗಳಿಗೆ ವಿದ್ಯಾರ್ಥಿಗಳನ್ನು ಮೆರಿಟ್ ಹಾಗೂ ವರ್ಗ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಯಾವುದೇ ವಸತಿ ಶಾಲೆಯ ವಿದ್ಯಾರ್ಥಿಗಳು 2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡಿ ಉತ್ತೀರ್ಣರಾದವರು ಹತ್ತಿರದ ಯಾವುದೇ ಮುರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಲ್ಲಿ ಪ್ರಥಮ ಪಿಯುಸಿ ತರಗತಿ ದಾಖಲಾತಿಗೆ ಮೇ 17ರ ಒಳಗಾಗಿ ಅರ್ಜಿ ಸಲ್ಲಿಸಬಹುದು.
    ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಾಗೂ ಹಿಂದುಳಿದ ವರ್ಗದ ಪ್ರ.ವರ್ಗ-1ರ ವಿದ್ಯಾರ್ಥಿಗಳ ಪಾಲಕರ ವಾರ್ಷಿಕ ಆದಾಯ 2.50 ಲಕ್ಷ ರೂ. ಒಳಗಿರಬೇಕು. ಹಿಂದುಳಿದ ವರ್ಗದ 2ಎ, 2ಬಿ, 3ಎ ಮತ್ತು 3ಬಿ ಗುಂಪಿಗೆ ಸೇರಿದ ವಿದ್ಯಾರ್ಥಿಗಳ ಪಾಲಕರ ವಾರ್ಷಿಕ ಆದಾಯ ಒಂದು ಲಕ್ಷ ರೂ. ಒಳಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಸವಣೂರ ಮುರಾರ್ಜಿ ದೇಸಾಯಿ ಪದವಿಪೂರ್ವ ವಿಜ್ಞಾನ ವಸತಿ ಕಾಲೇಜಿನ ಪ್ರಾಂಶುಪಾಲರು ಹಾಗೂ ಜಿಲ್ಲಾ ಸಮನ್ವಯಾಧಿಕಾರಿ ಗುರುಬಸಮ್ಮ, ಹಾನಗಲ್ಲ ತಾಲೂಕು ಹಳ್ಳಿಬೈಲ್ ಮುರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜ್ (ಉನ್ನತೀಕರಿಸಿದ) ಪ್ರಾಂಶುಪಾಲ ಎಸ್.ಚವಟಿ ಹಾಗೂ ಶಿಗ್ಗಾಂವಿ ತಾಲೂಕು ಬಾಡ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ಕಾಲೇಜ್‌ನ ಮೃತ್ಯುಂಜಯ ಮಠದ ಅವರನ್ನು ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts