ಹಾವೇರಿ: ಬಾಕಿ 20 ಸಾವಿರ ರೂ. ವರದಕ್ಷಿಣೆ ಹಣ ತರುವಂತೆ ಪತ್ನಿಗೆ ಹಲ್ಲೆಗೈದು ಸೀರೆಯಿಂದ ನೇಣುಹಾಕಿ ಕೊಲೆಗೈದಿದ್ದ ಆಕೆಯ ಪತಿಗೆ ಜೀವಾವಧಿ ಶಿಕ್ಷೆ ಹಾಗೂ ನಾಲ್ಕು ಸಾವಿರ ರೂ. ದಂಡ ವಿಧಿಸಿ ಹಾವೇರಿ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಿ.ಎಲ್.ಲಕ್ಷ್ಮೀನಾರಾಯಣ ಮಂಗಳವಾರ ತೀರ್ಪು ನೀಡಿದ್ದಾರೆ.
ತಾಲೂಕಿನ ಕರ್ಜಗಿ ಗ್ರಾಮದ ಮಹೇಶ ರಾಮಚಂದ್ರಪ್ಪ ಗಂಗಮ್ಮನವರ ಜೀವಾವಧಿ ಶಿಕ್ಷೆಗೀಡಾದವ.
ಒಂಭತ್ತು ವರ್ಷಗಳ ಹಿಂದೆ ನಿರ್ಮಲಾ ಹಾಗೂ ಮಹೇಶ ಮದುವೆಯಾಗಿದ್ದರು. ಮದುವೆ ಸಂದರ್ಭದಲ್ಲಿ ನಿರ್ಮಲಾ ಪಾಲಕರು 50 ಗ್ರಾಂ ಬಂಗಾರ ಹಾಗೂ ಐದು ಸಾವಿರ ರೂ. ವರದಕ್ಷಿಣೆ ಕೊಟ್ಟಿದ್ದರು. ಬಾಕಿ 20 ಸಾವಿರ ರೂ. ನಂತರ ಕೊಡುವುದಾಗಿ ಹೇಳಿದ್ದರು. ಬಾಕಿ ಹಣ ತರುವಂತೆ ಮಹೇಶ ನಿರ್ಮಲಾಳಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ. 2020ರ ಮಾರ್ಚ್ 9ರಂದು ಕರ್ಜಗಿ ಗ್ರಾಮದ ತನ್ನ ಮನೆಯಲ್ಲಿ ನಿರ್ಮಲಾಳಿಗೆ ಥಳಿಸಿದ್ದ. ನಂತರ ಸೀರೆಯಿಂದ ನೇಣು ಹಾಕಿ ಕೊಲೆ ಮಾಡಿದ್ದ ಎಂದು ಆರೋಪಿಸಿ ಹಾವೇರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಠಾಣೆಯ ಅಂದಿನ ಇನ್‌ಸ್ಪೆಕ್ಟರ್ ಟಿ.ಮಂಜಣ್ಣ ಅವರು ಪ್ರಕರಣದ ತನಿಖೆ ನಡೆಸಿ, ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಆರೋಪಿತನ ಮೇಲಿದ್ದ ಆಪಾದನೆಗಳು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿತನಿಗೆ ಜೀವಾವಧಿ ಶಿಕ್ಷೆ ಹಾಗೂ ನಾಲ್ಕು ಸಾವಿರ ರೂ. ದಂಡ ವಿಧಿಸಿ ನ್ಯಾಯಾಧೀಶರು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕಿ ಸರೋಜಾ ಕೂಡಲಗಿಮಠ ವಾದ ಮಂಡಿಸಿದ್ದರು.
ಪತ್ನಿ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ !; ಬಾಕಿ ವರದಕ್ಷಿಣೆಗಾಗಿ ಹಲ್ಲೆಗೈದು, ಕೊಂದಿದ್ದ ಪ್ರಕರಣ
You Might Also Like
ಮಧ್ಯಾಹ್ನ, ರಾತ್ರಿ ಊಟದಲ್ಲಿ ಜಾಸ್ತಿ ಉಪ್ಪು ಸೇವಿಸಿದ್ರೆ ಕ್ಯಾನ್ಸರ್ ಬರೋದು ಪಕ್ಕಾ! ಇರಲಿ ಎಚ್ಚರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳಿಗೆ ಬಾಳೆಹಣ್ಣು ಕೊಡುವ ಮುನ್ನ ಈ ವಿಚಾರಗಳು ನಿಮಗೆ ಗೊತ್ತಿರಲಿ ಇಲ್ಲದಿದ್ರೆ ಆರೋಗ್ಯ ಕೆಡಬಹುದು ಎಚ್ಚರ!
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ತೂಕ ಕಳೆದುಕೊಂಡಿದ್ದೀರಾ? ಲಘುವಾಗಿ ಪರಿಗಣಿಸಬೇಡಿ, ನಿಮಗೆ ಈ ಆರೋಗ್ಯ ಸಮಸ್ಯೆಗಳಿರಬಹುದು!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…