ಶೇ.90ರಷ್ಟು ಹೆಣ್ಣು ಮಕ್ಕಳು ದೌರ್ಜನ್ಯಕ್ಕೆ ಈಡಾಗುವರು; ಅವಶ್ಯಕ ಕಾನೂನು ತಿಳಿದುಕೊಳ್ಳಬೇಕು; ನ್ಯಾಯಾಧೀಶ ನಿಂಗೌಡ ಪಾಟೀಲ ಸಲಹೆ

ಹಾವೇರಿ: ಶೇ.90ರಷ್ಟು ಹೆಣ್ಣು ಮಕ್ಕಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಮಕ್ಕಳು ಪೋಕ್ಸೋ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳು ಸೇರಿದಂತೆ ಅವಶ್ಯಕ ಕಾನೂನುಗಳನ್ನು ತಿಳಿದುಕೊಳ್ಳುವುದು, ಜಾಗೃತರಾಗಿರುವುದು ಅಗತ್ಯವಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಿಂಗೌಡ ಪಾಟೀಲ ಸಲಹೆ ನೀಡಿದರು.
ನಗರದ ಮುನ್ಸಿಪಲ್ ಹೈಸ್ಕೂಲ್‌ನಲ್ಲಿ ಮಂಗಳವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಾಲಾ ಶಿಕ್ಷಣ ಇಲಾಖೆ ಹಾಗೂ ಮುನ್ಸಿಪಲ್ ಪ್ರೌಢಶಾಲೆ ಸಹಯೋಗದಲ್ಲಿ ಆಯೋಜಿಸಿದ್ದ ‘ಮಾನವ ಕಳ್ಳ ಸಾಗಾಣಿಕೆ ತಡೆ, ಪೋಕ್ಸೋ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ಕುರಿತು ಕಾನೂನು ಅರಿವು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ಪೋಕ್ಸೋ ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಮನೆ, ಶಾಲೆ ಹಾಗೂ ಹೊರಗೆ ಎಲ್ಲಾದರೂ 18 ವರ್ಷದೊಳಗಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಪೋಕ್ಸೋ ಕಾಯ್ದೆ ಜಾರಿಗೆ ತರಲಾಗಿದೆ. ಇದು ಕಠಿಣ ಕಾಯ್ದೆಯಾಗಿದ್ದು, ಮಕ್ಕಳ ಹಿತ ಕಾಯುವ ಕಾಯ್ದೆಯಾಗಿದೆ. ಈ ಕಾಯ್ದೆ ಗಂಡು ಮತ್ತು ಹೆಣ್ಣು ಇಬ್ಬರಿಗೂ ಅನ್ವಯಿಸುತ್ತದೆ. ಶೇ.90ರಷ್ಟು ಹೆಣ್ಣು ಮಕ್ಕಳು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ವರ್ಷದಲ್ಲಿ ಎರಡು ಬಾರಿ ನ್ಯಾಯಾಲಯಕ್ಕೆ ಭೇಟಿ ನೀಡಿ ಪೋಕ್ಸೋ ಪ್ರಕರಣಗಳ ಕುರಿತು ತಿಳಿದುಕೊಳ್ಳಬೇಕು ಹಾಗೂ ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲರೂ ಕೈಜೋಡಿಸಬೇಕು ಎಂದರು.
ಹಿರಿಯ ದಿವಾಣಿ ನ್ಯಾಯಾಧೀಶ ಮತ್ತು ಸಿಜೆಎಂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ರಭಾರ ಸದಸ್ಯ ಕಾರ್ಯದರ್ಶಿ ಪ್ರಕಾಶ ವಿ. ಮಾತನಾಡಿ, ಹುಟ್ಟಿನಿಂದ ಮರಣದವರೆಗೆ ಕಾನೂನಿನ ಚೌಕಟ್ಟಿನಲ್ಲೇ ಬದುಕಲಾಗುತ್ತದೆ. ಸಾವಿರಕ್ಕೂ ಅಧಿಕ ಕಾನೂನುಗಳಿದ್ದು, ಕಾನೂನು ತಿಳಿದುಕೊಂಡರೆ ನಮ್ಮನ್ನು ರಕ್ಷಣೆ ಮಾಡುತ್ತದೆ ಎಂದರು.
ಸಣ್ಣ ಸಣ್ಣ ಕಾರಣಗಳಿಗೆ ನ್ಯಾಯಾಲಯಗಳಲ್ಲಿ ಪ್ರಕರಣಗಳು ನಸಡೆಯುತ್ತವೆ. ಆಸ್ತಿ-ಹಣದ ವ್ಯಾಮೋಹದಿಂದ ಹಿರಿಯರನ್ನು ಕಡೆಗಣಿಸಲಾಗುತ್ತಿದೆ. ಆದರೆ ಹಿರಿಯರು ಜೀವಮಾನೆವಲ್ಲ ದುಡಿದು ಮಕ್ಕಳಿಗೆ ಆಸ್ತಿ ಮಾಡುತ್ತಾರೆ. ಇದನ್ನು ಮಕ್ಕಳು ಅರಿತುಕೊಂಡು ಹಿರಿಯರನ್ನು ಗೌರವದಿಂದ ಕಾಣಬೇಕು ಹಾಗೂ ಕೂಡುಕುಟುಂಬಕ್ಕೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲ ಎನ್.ಎನ್.ಡಿಳ್ಳೆಪ್ಪನವರ ಮಾನವ ಕಳ್ಳ ಸಾಗಾಣಿಕೆ ಕುರಿತು ಉಪನ್ಯಾಸ ನೀಡಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶ ಸುರೇಶ ಹುಗ್ಗಿ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದಾರ್ತಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನ್ನಪೂರ್ಣ ಸಂಗಳದ, ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ, ಮುನ್ಸಿಪಲ್ ಪ್ರೌಢಶಾಲೆ ಮುಖ್ಯೋಪಾಧ್ಯಾಯೆ ಶೋಭಾ ಜಾಗಟಗೇರಿ, ಇತರರು ಉಪಸ್ಥಿತರಿದ್ದರು.
ಒಳ್ಳೆಯ, ಕೆಟ್ಟ ಸ್ಪರ್ಶ ತಿಳಿಸಿ
ಪ್ರೌಢಾವಸ್ಥೆಯಲ್ಲಿರುವ ಹೆಣ್ಣು ಮಕ್ಕಳು ಸೂಕ್ಷ್ಮತೆಗಳನ್ನು ಗಮನಿಸಬೇಕು, ಒಳ್ಳೆಯ ಸ್ಪರ್ಶ ಹಾಗೂ ಕೆಟ್ಟ ಸ್ಪರ್ಶಗಳ ಬಗ್ಗೆ ತಿಳುವಳಿಕೆ ಇರಬೇಕು. ಕಾನೂನುಗಳನ್ನು ದೌರ್ಜನ್ಯ ತಡೆಗೆ ಜಾರಿಗೆ ತರಲಾಗಿದೆ. ಹಾಗಾಗಿ, ಕಾನೂನುಗಳ ಸದುಪಯೋಗವಾಗಬೇಕೇ ಹೊರತು ದುರುಪಯೋಗವಾಗಬಾರದು ಎಂದು ನ್ಯಾಯಾಧೀಶರಾದ ನಿಂಗೌಡ ಪಾಟೀಲ ಸಲಹೆ ನೀಡಿದರು.

Share This Article

Skin care: ಕಣ್ಣುಗಳ ಕೆಳಗಿರುವ ಚರ್ಮ ಸುಕ್ಕುಗಟ್ಟಿದೆಯೇ? ಹೀಗೆ ಮಾಡಿ..

ಕಣ್ಣುಗಳು(Skin care) ಸೂಕ್ಷ್ಮ ಅಂಗಗಳಾಗಿದ್ದು, ಅವುಗಳ ಕೆಳಗಿರುವ ಚರ್ಮವು ಸಹ ಸೂಕ್ಷ್ಮವಾಗಿರುತ್ತದೆ. ಬಿಸಿಲು, ಪೌಷ್ಠಿಕ ಆಹಾರದ…

Health Tips : ಮೆಟ್ಟಿಲು ಹತ್ತುವಾಗ ಸುಸ್ತಾಗುತ್ತದಾ..! ಈ ಸಲಹೆಗಳನ್ನು ಅನುಸರಿಸಿ

ಬೆಂಗಳೂರು: ಮೆಟ್ಟಿಲು ಹತ್ತುವಾಗ ಉಸಿರಾಟದ ತೊಂದರೆ ಸಾಮಾನ್ಯ. ಈ ಸಮಸ್ಯೆಯು ವಯಸ್ಸಾದಂತೆ ಹೆಚ್ಚಾಗುತ್ತಿದೆ, ಆದರೆ ಇತ್ತೀಚಿನ…