More

    ಹಾವೇರಿ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆ; ಸಿಡಿಲು ಬಡಿದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು

    ಹಾವೇರಿ: ಇಂದು ಸಂಜೆಯಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು 15 ವರ್ಷದ ಬಾಲಕ ಸಾವಿಗೀಡಾಗಿರುವ ಘಟನೆ ಶಿಗ್ಗಾವಿ ತಾಲೂಕಿನ ನೀರಲಕಟ್ಟಿ ಗ್ರಾಮದ ಬಳಿ ನಡೆದಿದೆ.

    ಮೃತ ಬಾಲಕನನ್ನು ಮಹಾಂತೇಶ ಜಟ್ಟೆಪ್ಪನವರ್ ಎಂದು ಗುರುತಿಸಲಾಗಿದೆ. ಶಿಗ್ಗಾವಿ ತಾಲೂಕಿನ ಚಂದಾಪುರ ಗ್ರಾಮದ ನಿವಾಸಿಯಾಗಿದ್ದು, ಜಮೀನಿಗೆ ತೆರಳುತ್ತಿದ್ದಾಗ ಸಿಡಿಲು ಬಡಿದಿದೆ. ಸವಣೂರು ತಾಲೂಕಿನ ಮಂತ್ರೋಡಿ ಗ್ರಾಮದಲ್ಲಿ ಗಾಳಿಗೆ 30ಕ್ಕೂ ಅಧಿಕ ಮನೆಗಳ ಮೇಲ್ಛಾವಣಿಗಳು ಹಾರಿಹೋಗಿವೆ.

    ಈ ಸಂದರ್ಭದಲ್ಲಿ ಜನರು ಮನೆಗಳಿಂದ ಹೊರಬಂದು ಪ್ರಾಣ ಉಳಿಸಿಕೊಂಡಿದ್ದು, ಕೆಲವರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. 20ಕ್ಕೂ ಹೆಚ್ಚು ತೆಂಗಿನ ಮರಗಳು, ಕೆಲವು ವಿದ್ಯುತ್ ಕಂಬಗಳು ಸಹ ಧರೆಗುರುಳಿದ್ದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ.

    ಘಟನಾ ಸ್ಥಳಕ್ಕೆ ಕಂದಾಯ ನಿರೀಕ್ಷಕ ಡಿ.ಎಂ ಪಾಟೀಲ, ಗ್ರಾಮ ಲೆಕ್ಕಾಧಿಕಾರಿ ಸಂಗಮೇಶ ಗುದಗಿ, ಪಿಡಿಓ ಭೋಜರಾಜ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮನೆ ಹಾನಿಗೊಳಗಾದ ಸಂತ್ರಸ್ತರಿಗೆ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಂಜಿ ಕೇಂದ್ರದಲ್ಲಿ ಆಶ್ರಯ ನೀಡಲಾಗಿದೆ.

    ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

    ಕುಡಿದ ಮತ್ತಿನಲ್ಲಿ ಪ್ರೇಯಸಿಯನ್ನೇ ಕೊಂದ ಪ್ರಿಯಕರ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts