More

    ಹಾವೇರಿಯಲ್ಲಿ ರೈತ ಹುತಾತ್ಮ ದಿನಾಚರಣೆ 21ರಂದು; ವಾಸುದೇವ ಮೇಟಿ

    ಹಾವೇರಿ: ನರಗುಂದ, ನವಲಗುಂದ ರೈತ ಬಂಡಾಯ ನಡೆದು 43 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಜು.21ರಂದು ನಗರದಲ್ಲಿ ರೈತ ಹುತಾತ್ಮ ದಿನಾಚರಣೆ ಹಾಗೂ ರಾಜ್ಯಮಟ್ಟದ ಬೃಹತ್ ರೈತರ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ವಾಸುದೇವ ಮೇಟಿ ಹೇಳಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ನರಗುಂದದಲ್ಲಿ ಹುತಾತ್ಮ ದಿನ ಆಚರಿಸಲಾಗಿತ್ತು. ಈ ವರ್ಷ ಹಾವೇರಿಯಲ್ಲಿ ಹುತಾತ್ಮ ದಿನದ ಅಂಗವಾಗಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಹಾವೇರಿ ಗೋಲಿಬಾರ್‌ನಲ್ಲಿ ಮೃತಪಟ್ಟಿರುವ ಸಿದ್ದಪ್ಪ ಚೂರಿ ಹಾಗೂ ಪುಟ್ಟಪ್ಪ ಹೊನ್ನತ್ತಿ ಅವರ ಹೊಸಮನಿ ಸಿದ್ದಪ್ಪ ವೃತ್ತದಲ್ಲಿನ ವೀರಗಲ್ಲಿಗೆ ಪೂಜೆಗೈದು ಬೃಹತ್ ಮೆರವಣಿಗೆ ನಡೆಸಲಾಗುವುದು. ನಂತರ ನಗರದ ಅಂಬೇಡ್ಕರ್ ಭವನದಲ್ಲಿ ಸಮಾವೇಶ ನಡೆಸಲಾಗುವುದು. ರಾಜ್ಯದ ಎಲ್ಲ ಜಿಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘದ ರಾಜ್ಯ ಕಾರ್ಯದರ್ಶಿ ಅನ್ನಪೂರ್ಣ ಪಾಟೀಲ, ಜಿಲ್ಲಾಧ್ಯಕ್ಷ ಹನುಮಂತಪ್ಪ ದೀವಿಗಿಹಳ್ಳಿ, ಸಿ.ಎಂ.ಪ್ರಕಾಶ, ಶಂಕರಗೌಡ ಪಾಟೀಲ, ಹನುಮಂತಪ್ಪ ಕರೆಣ್ಣನವರ, ಕಸ್ತೂರಿ ಅಕ್ಕಿವಾತೆ, ಇತರರಿದ್ದರು.

    ಬರಗಾಲ ಘೋಷಿಸಿ

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ರೈತರಿಗೆ ಯಾವುದೇ ವಿಶೇಷ ಘೋಷಣೆ ಘೋಷಿಸಿಲ್ಲ. ನೀರಾವರಿ ಯೋಜನೆಗಳಿಗೆ ಹಣ ಕೊಟ್ಟಿಲ್ಲ. ಉಚಿತ ಗ್ಯಾರಂಟಿ ಯೋಜನೆಗಳಿಂದಾಗಿ ರೈತರಿಗೆ ಅಗತ್ಯ ಯೋಜನೆಗಳನ್ನು ಕೈಬಿಟ್ಟಿದ್ದಾರೆ. ರಾಜ್ಯದಲ್ಲಿ ಬರ ಆವರಿಸಿದ್ದು, ಅಗತ್ಯಕ್ಕೆ ತಕ್ಕಷ್ಟು ಮಳೆ ಇಲ್ಲದೇ ರೈತರು ತತ್ತರಿಸಿದ್ದಾರೆ. ಹಾಗಾಗಿ, ಸರ್ಕಾರ ಈ ಕೂಡಲೇ ಬರಗಾಲ ಎಂದು ಘೋಷಿಸಿ ವಿಸೇಷ ಪ್ಯಾಕೇಜ್ ನೀಡಬೇಕು. ಚುನಾವಣೆ ಸಂದರ್ಭದಲ್ಲಿ ಘೋಷಿಸಿದಂತೆ ಉಚಿತವಾಗಿ ಬೀಜ, ಗೊಬ್ಬರ ಕೊಡಬೇಕು. ಇಲ್ಲದಿದ್ದರೆ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ವಾಸುದೇವ ಮೇಟಿ ಎಚ್ಚರಿಕೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts