More

    75ನೇ ಗಣರಾಜ್ಯೋತ್ಸವ ದಿನಾಚರಣೆ ಜ.26ರಂದು

    ಹಾವೇರಿ: ಜಿಲ್ಲಾಡಳಿತದ ವತಿಯಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಜ.26ರಂದು ಬೆಳಗ್ಗೆ 9 ಗಂಟೆಗೆ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
    ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಧ್ವಜಾರೋಹಣ ನೆರವೇರಿಸಲಿದ್ದಾರೆ. ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಸಂಸದ ಶಿವಕುಮಾರ ಉದಾಸಿ, ಜಿಲ್ಲೆಯ ಶಾಸಕರು, ಮತ್ತಿತರರು ಭಾಗವಹಿಸಲಿದ್ದಾರೆ.
    ಮೆರವಣಿಗೆ, ಸಾಂಸ್ಕೃತಿಕ ಕಾರ್ಯಕ್ರಮ
    ಬೆಳಗ್ಗೆ 8 ಗಂಟೆಗೆ ಮೈಲಾರ ಮಹಾದೇವ ವೃತ್ತದಿಂದ ಭಾರತ ಮಾತೆಯ ಭಾವಚಿತ್ರ ಮೆರವಣಿಗೆ ಆರಂಭವಾಗಲಿದೆ. 9 ಗಂಟೆಗೆ ಧ್ವಜಾರೋಹಣ, 9.05ಕ್ಕೆ ಪಥ ಪರಿವೀಕ್ಷಣೆ, 9.15ಕ್ಕೆ ಪಥ ಸಂಚಲನ ಹಾಗೂ 9.30ಕ್ಕೆ ಗಣರಾಜ್ಯೋತ್ಸವ ಸಂದೇಶ, ಸಾಧಕರಿಗೆ ಸನ್ಮಾನ ಕಾರ್ಯಕ್ರಮಗಳು ಜರುಗಲಿವೆ. ಸಂಜೆ 5.30ಕ್ಕೆ ಜಿಲ್ಲಾ ಗುರುಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts