More

  ನಿಯಮ ಉಲ್ಲಂಘಿಸುವ ಧೂಮಪಾನಿಗಳಿಗೆ ದಂಡ ವಿಧಿಸಿ; ನಗರ ತಂಬಾಕು ನಿಯಂತ್ರಣ ಕೋಶ ಸಮಿತಿ ರಚಿಸಿ; ಡಿಸಿ ರಘುನಂದನ ಮೂರ್ತಿ ಸೂಚನೆ

  ಹಾವೇರಿ: ಸರ್ಕಾರದ ಆದೇಶದಂತೆ ಜಿಲ್ಲೆಯ ನಗರಸಭೆ ಪ್ರದೇಶಗಳಲ್ಲಿ ಆಯಾ ನಗರಸಭೆ ಪೌರಾಯುಕ್ತರ ಅಧ್ಯಕ್ಷತೆಯಲ್ಲಿ ನಗರ ತಂಬಾಕು ನಿಯಂತ್ರಣ ಕೋಶ ಸಮಿತಿ ರಚನೆ ಮಾಡಿ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಸೂಚನೆ ನೀಡಿದರು.
  ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಶನಿವಾರ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ದಂಡ ವಿಧಿಸುವ ಮೂಲಕ ತಂಬಾಕು ನಿಯಂತ್ರಣ ಕಾಯ್ದೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು.
  ಮೇ 31ರಂದು ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಎಲ್ಲ ತಾಲೂಕುಗಳಲ್ಲಿ ಶಾಲಾ ವಿದ್ಯಾರ್ಥಿಗಳು ಹಾಗೂ ಆಶಾ ಕಾರ್ಯಕರ್ತೆಯರಿಂದ ಜಾಗೃತಿ ಜಾಥಾ ಆಯೋಜಿಸಬೇಕು ಎಂದು ಸಲಹೆ ನೀಡಿದರು.
  ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ಆರ್.ಹಾವನೂರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಮಹೇಶಪ್ಪ, ಡಾ.ನಿಲೇಶ ಎಂ.ಎನ್., ಡಾ.ಜಗದೀಶ ಕುಂದೂರ, ಡಾ.ಪ್ರಭಾಕರ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಡಾ.ಸಂತೋಷ ದಡ್ಡಿ, ಕಾರ್ಮಿಕ ಇಲಾಖೆ ಅಧಿಕಾರಿ ಮಹೇಶ ಕುಳಲಿ, ವಿವಿಧ ತಾಲೂಕುಗಳ ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts