More

    ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶುಚಿ ಕಿಟ್ ವಿತರಿಸಿ; ಎಸ್‌ಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ

    ಹಾವೇರಿ: ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶುಚಿ ಸಂಭ್ರಮ ಕಿಟ್ ವಿತರಣೆ ವಿಳಂಬ ವಿರೋಧಿಸಿ ಹಾಗೂ ಶೀಘ್ರದಲ್ಲೇ ಕಿಟ್ ವಿತರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಜಿಲ್ಲಾ ಸಮಿತಿ ವತಿಯಿಂದ ನಗರದ ವಿವಿಧ ಹಾಸ್ಟೆಲ್‌ಗಳಲ್ಲಿ ಪ್ರತಿಭಟನೆ ನಡೆಸಲಾಯಿತು.
    ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ವಿವಿಧ ವಸತಿ ನಿಲಯದ ಎದುರು ವಿದ್ಯಾರ್ಥಿಗಳು ಹಾಸ್ಟೆಲ್ ಮೇಲ್ವಿಚಾರಕರ ಮೂಲಕ ಬಿಸಿಎಂ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
    ಪ್ರತಿ ತಿಂಗಳು ವಿದ್ಯಾರ್ಥಿಗಳಿಗೆ ಬ್ರಶ್, ಪೇಸ್ಟ್, ಮೈಸೂರು ಸ್ಯಾಂಡಲ್ ಸೋಪು, 2 ಬಟ್ಟೆ ಸೋಪು, ಕೊಬ್ಬರಿ ಎಣ್ಣೆ, ಪೌಡರ್, ಇತರೆ ವಸ್ತುಗಳಿರುವ ಕಿಟ್ ವಿತರಿಸಬೇಕೆಂಬ ನಿಯಮವಿದೆ. ಆದರೆ, 2023-24ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಿ ಐದಾರು ತಿಂಗಳು ಕಳೆದರೂ ಈವರೆಗೆ ಕಿಟ್ ವಿತರಿಸದಿರುವುದನ್ನು ಪ್ರತಿಭಟನಾಕಾರರು ಖಂಡಿಸಿದರು.
    ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅಭ್ಯಾಸಕ್ಕಾಗಿ ವಸತಿ ನಿಲದ ಆಸರೆಯೊಡ್ಡಿ ವಿದ್ಯಾರ್ಥಿಗಳು ಬಂದಿರುತ್ತಾರೆ. ವಿದ್ಯಾರ್ಥಿಗಳಿಗೆ ನೀಡಬೇಕಾದ ಸೌಲಭ್ಯಗಳನ್ನು ಸಮಯಕ್ಕೆ ಸರಿಯಾಗಿ ನೀಡಬೇಕು. ಬೇರೆ ಬೇರೆ ಇಲಾಖೆಗಳ ರೀತಿಯಲ್ಲಿ ವಿಳಂಬ ಮಾಡದೆ ಮುಂಚಿತವಾಗಿ ವಿತರಣೆ ಮಾಡಬೇಕು ಉತ್ತಮ ಗುಣಮಟ್ಟದ ಸೌಲಭ್ಯಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.
    ಎಸ್‌ಎಫ್‌ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಭೋವಿ, ಶಿವಪ್ಪ ಪಾಟೀಲ, ಪೃಥ್ವಿ ಬೆಟಗೇರಿ, ಬಸವರಾಜ ಕೋರಿ, ಮಾಲತೇಶ ಕಂಬಳಿ, ಭರತ ಮೂಲಿಮನಿ, ಪ್ರವೀಣ ಎಲ್., ಹರೀಶ ಬಿ.ಆರ್., ಆಕಾಶ ಎಚ್., ಪ್ರಕಾಶ ಲಮಾಣಿ, ಲಕ್ಷ್ಮೀ ಕೆ.ಆರ್., ಸುಮಾ ಡಿ.ಎಸ್., ಭಾಗ್ಯಲಕ್ಷ್ಮೀ ಎಲ್.ಡಿ., ಸೇರಿ ಇತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts