ಹಾವೇರಿ: ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಬೆಳೆಸಾಲ ನೀಡುತ್ತಿಲ್ಲ ಎಂಬ ದೂರುಗಳು ಬರುತ್ತಿದ್ದು, ಇನ್ನು ಮುಂದೆ ದೂರು ಬಾರದಂತೆ ಅವರಿಗೆ ಬೆಳೆಸಾಲ ನೀಡಬೇಕು ಎಂದು ಡಿಸಿಸಿ ಬ್ಯಾಂಕ್ ಅಧಿಕಾರಿಗಳಿಗೆ ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಐದು ಎಕರೆಗಿಂತ ಕಡಿಮೆ ಜಮೀನು ಹೊಂದಿದ ರೈತರಿಗೆ ನೀವು ಸಾಲ ನೀಡಲಿಲ್ಲ ಎಂದರೆ ಸಣ್ಣ ರೈತರು ಎಲ್ಲಿಗೆ ಹೋಗಬೇಕು. ಖಾಸಗಿ ಬ್ಯಾಂಕ್‌ಗಳಲ್ಲಿ ಬಡ್ಡಿ ಸಾಲ ಮಾಡಬೇಕಾಗುತ್ತದೆ ಎಂದರು.
ರೈತರು ತಮ್ಮ ಬೆಳೆ ಉಳಿಸಿಕೊಳ್ಳಲು ಯುಟಿಪಿ ಕಾಲುವೆಗಳ ಗೇರ್‌ವಾಲ್ ಒಡೆದು ಜಮೀನುಗಳಿಗೆ ನೀರು ಹಾಯಿಸುತ್ತಿದ್ದು, ಇದರಿಂದ ಕೆರೆ ತುಂಬಿಸುವ ಯೋಜನೆಗಳಿಗೆ ಹಿನ್ನಡೆಯಾಗುತ್ತಿದೆ. ಕಾರಣ ಪೊಲೀಸ್ ಬಂದೋಬಸ್ತ್‌ನಲ್ಲಿ ಅವುಗಳನ್ನು ಬಂದ್‌ಮಾಡಿ ಸಂಬಂಧಿಸಿದವರ ಮೇಲೆ ಸೂಕ್ತ ಕ್ರಮಗೊಳ್ಳುವಂತೆ ತಹಸೀಲ್ದಾರರು ಕ್ರಮವಹಿಸಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಸಚಿವರ ಗಮನಕ್ಕೆ ತಂದರು. ಕೂಡಲೇ ಸರಿಪಡಿಸಿ ಎಂದು ಡಿಸಿ ಅವರಿಗೆ ಸೂಚಿಸಿದರು.
ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳಡಿ ಆಯ್ಕೆಯಾಗುವ ಫಲಾನುಭವಿಗಳಿಗೆ ಬ್ಯಾಂಕ್‌ಗಳಲ್ಲಿ ಸಿಬಿಲ್ ಸ್ಕೋರ್ ಕಾರಣದಿಂದ ಸಾಲ ದೊರೆಯದ ಕಾರಣ ಆಯಾ ಸಾಲಿನ ಅನುದಾನ ಸರ್ಕಾರಕ್ಕೆ ಮರಳಿ ಹೋಗುತ್ತದೆ. ಇದು ಕಡ್ಡಾಯವೇ ಎಂದು ಪ್ರಶ್ನಿಸಿದ ಸಂದರ್ಭದಲ್ಲಿ, ಆರ್.ಬಿ.ಐ. ಮಾರ್ಗಸೂಚಿನ್ವಯ ಸಿಬಿಲ್ ಸ್ಕೋರ್ ನೋಡಲಾಗುತ್ತದೆ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅಣ್ಣಯ್ಯ ಆರ್., ಮಾಹಿತಿ ನೀಡಿದರು.
ಸಭೆಯಲ್ಲಿ ಶಾಸಕ ರುದ್ರಪ್ಪ ಲಮಾಣಿ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ, ಎಸ್‌ಪಿ ಅಂಶುಕುಮಾರ, ಇತರರು ಉಪಸ್ಥಿತರಿದ್ದರು.
ಸಣ್ಣ, ಅತಿ ಸಣ್ಣ ರೈತರಿಗೆ ಬೆಳೆಸಾಲ ನೀಡಿ; ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೂಚನೆ
You Might Also Like
ನಿಮ್ಮ ಅಂಗೈನಲ್ಲಿ ಈ ಚಿಹ್ನೆ ಇದೆಯಾ ನೋಡಿ… ಇದ್ರೆ ಎಂದಿಗೂ ಹಣಕಾಸಿನ ಸಮಸ್ಯೆಗಳು ಎದುರಾಗಲ್ಲ | Palmistry
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Honey: ಜೇನಿನೊಂದಿಗೆ ಈ ಆರು ಆಹಾರ ಬೆರೆಸಿ ತಿನ್ನಬೇಡಿ..ಹಾಗೆ ಮಾಡಿದರೆ ವಿಷವಾಗುತ್ತದೆ!
ಜೇನು(Honey) ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಕೆಲವು ಪದಾರ್ಥಗಳೊಂದಿಗೆ ಬೆರೆಸಿ ಸೇವಿಸಬಾರದು. ಈ 6 ಪದಾರ್ಥಗಳೊಂದಿಗೆ…
ಅಕ್ಕಿ ತೊಳೆದ ನೀರನ್ನು ಚೆಲ್ಲಬೇಡಿ.. ಈ ನೀರಿನಿಂದ ದೇಹದ ತೂಕ ಇಳಿಸಿಕೊಳ್ಳಬಹುದು! Interesting information
ಬೆಂಗಳೂರು: ಅಕ್ಕಿ ತೊಳೆದರೆ ಬರುವ ನೀರನ್ನು ( rice washed water) ಅನೇಕರು ಬಿಸಾಡುತ್ತಾರೆ. ಆದರೆ…