More

    ಮದ್ಯವರ್ತಿಗಳಿಗೆ ಹಣ ಕೊಡಬೇಡಿ; ನ.5ರಂದು ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಎಸ್‌ಪಿ ಡಾ.ಶಿವಕುಮಾರ ಗುಣಾರೆ ಮಾಹಿತಿ

    ಹಾವೇರಿ: ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ (ಕಲ್ಯಾಣ ಕರ್ನಾಟಕ ಪ್ರದೇಶದ) 454 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಲಿಖಿತ ಪರೀಕ್ಷೆ ನವೆಂಬರ್ 5ರಂದು ನಗರದ ಹತ್ತು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ನೇಮಕಾತಿ ಪಾರದರ್ಶಕವಾಗಿ ನಡೆಯಲಿದ್ದು, ಮದ್ಯವರ್ತಿಗಳ ಭರವಸೆಗೆ ಯಾರೂ ಮಾರು ಹೋಗಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶಿವಕುಮಾರ ಗುಣಾರೆ ತಿಳಿಸಿದ್ದಾರೆ.
    ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಗೆ 3,580 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಪರೀಕ್ಷೆಯು ಗಣಕೀಕೃತವಾಗಿ ನಡೆಯಲಿದ್ದು, ಪಾರದರ್ಶಕತೆ ಹಾಗೂ ಸಂಪೂರ್ಣ ವಸ್ತುನಿಷ್ಠೆಯಿಂದ ನಡೆಯಲಿದೆ. ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಯಾವುದೇ ಅಭ್ಯರ್ಥಿಗಳು ಇಲಾಖೆಯ ಹೊರಗಾಗಲಿ ಅಥವಾ ಒಳಗಾಗಲೀ ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಥವಾ ಯಾವುದೇ ವಿಧವಾದ ಪಾರತೋಷಕ ನೀಡುವುದು ಮಾಡಬಾರದು. ಯಾವುದೇ ವಿಧವಾದ ಹಣ ವಸೂಲಾತಿಗೆ ಯಾರಿಗೂ ಅಧಿಕಾರ ನೀಡಿರುವುದಿಲ್ಲ. ಈ ದಿಶೆಯಲ್ಲಿ ಮಧ್ಯವರ್ತಿಗಳ ಭರವಸೆಗಳಿಗೆ ಮಾರು ಹೋಗಬಾರದು ಎಂದು ತಿಳಿಸಿದ್ದಾರೆ.
    ಪರೀಕ್ಷಾ ಕೇಂದ್ರಗಳ ವಿವರ:
    ದೇವಗಿರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್, ಹಾವೇರಿ ನಗರದ ಬಸವೇಶ್ವರ ಬಿ.ಇಡಿ ಕಾಲೇಜ್, ಜ್ಞಾನಗಂಗಾ ಶಿಕ್ಷಣ ಸಮಿತಿಯ ಚನ್ನಬಸಪ್ಪ ಮಾಗಾವಿ ಪ್ರೌಢಶಾಲೆ, ಸಿ.ಬಿ.ಕೊಳ್ಳಿ ಪಾಲಿಟೆಕ್ನಿಕ್ ಕಾಲೇಜ್, ಗುದ್ಲೆಪ್ಪ ಹಳ್ಳಿಕೇರಿ ಮಹಾ ವಿದ್ಯಾಲಯ, ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯ, ಎಸ್.ಎಂ.ಎಸ್ ಬಾಲಕಿಯರ ಪ್ರೌಢಶಾಲೆ ಮತ್ತು ಕಾಲೇಜ್, ಸೇಂಟ್ ಆನ್ಸ್ ಪ್ರಾಥಮಿಕ ಪ್ರೌಢ ಶಾಲೆ ಹಾಗೂ ಎಂ.ಎ.ಇ ಸಂಸ್ಥೆಯ ಬಿ.ಪಿಇಡಿ ಮಹಾ ವಿದ್ಯಾಲಯದಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
    ವೆಬ್‌ಸೈಟ್‌ನಲ್ಲಿ ಪ್ರವೇಶ ಪತ್ರ
    ಲಿಖಿತ ಪರೀಕ್ಷೆಯ ಕರೆ ಪತ್ರವನ್ನು ಇಲಾಖೆಯ ವೆಬ್ ಸೈಟ್ .್ಕಉಇ್ಕಖಿಐಉಘೆ.ಓಖ.ಎಣ್ಖ.ಐಘೆ ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು. ಬೆಳಗ್ಗೆ 11ರಿಂದ ಮದ್ಯಾಹ್ನ 12.30ರವರೆಗೆ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಪರೀಕ್ಷೆಗೆ ಬರುವಾಗ ಮೋಬೈಲ್, ಯಾವುದೇ ಎಲೆಕ್ಟ್ರಾನಿಕ್ ವಸ್ತು, ಸ್ಮಾರ್ಟ್ ವಾಚ್‌ಗಳನ್ನು ತರಬಾರದೆಂದು ಎಸ್‌ಪಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts