More

    ಶ್ರೀರಾಮನ ಪಟ್ಟಾಭಿಷೇಕಕ್ಕೆ ಯಾಲಕ್ಕಿ ನಾಡು ಸಜ್ಜು; ಮಠ- ಮಂದಿರಗಳಲ್ಲಿ ವಿಶೇಷ ಪೂಜೆ, ಹೋಮ, ಹವನ; ವಿವಿಧೆಡೆ ಅನ್ನಪ್ರಸಾದ ವ್ಯವಸ್ಥೆ

    ಹಾವೇರಿ: ಅಯೋಧ್ಯೆಯಲ್ಲಿ ಬಾಲ ರಾಮ ದೇವರ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ಶುರುವಾಗಿದ್ದು, ಈ ಕ್ಷಣವನ್ನು ಕಣ್ತುಂಬಿಕೊಳ್ಳಲು ಜಿಲ್ಲೆಯ ರಾಮಭಕ್ತರು ಸಜ್ಜಾಗಿದ್ದಾರೆ. ಸೋಮವಾರ ಅಯೋಧ್ಯೆಯಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಜಿಲ್ಲೆಯ ಮಠ- ಮಂದಿರ, ದೇಗುಲಗಳಲ್ಲಿ ವಿಶೇಷ ಪೂಜೆ, ಪುನಸ್ಕಾರ, ಹೋಮ, ಹವನಗಳನ್ನು ಹಮ್ಮಿಕೊಂಡಿದ್ದಾರೆ.
    ಜಿಲ್ಲೆಯ ಹಲವು ಕಡೆಗಳಲ್ಲಿ ಭಕ್ತರು ಸಿಹಿ ವಿತರಣೆ, ಎಲ್‌ಇಡಿ ಪರದೆಯಲ್ಲಿ ಅಯೋಧ್ಯೆಯ ನೇರ ಪ್ರಸಾರ ವೀಕ್ಷಣೆಯ ವ್ಯವಸ್ಥೆ, ಅನ್ನಪ್ರಸಾದ ಸೇವೆ ಕೈಗೊಂಡಿದ್ದಾರೆ. ರಾಮ ಮಂದಿರಗಳು, ಹನುಮಾನ್ ಮಂದಿರಗಳಲ್ಲಿ ವಿಶೇಷವಾಗಿ ಹೋಮ, ವಿಶೇಷ ಅಲಂಕಾರ, ಅಭಿಷೇಕ, ಮತ್ತಿತರ ಕಾರ್ಯಕ್ರಮಗಳು ಜರುಗಲಿವೆ.
    ತಾರಕ ಯಾಗ, ಹೋಮ
    ಹಾವೇರಿಯ ಎಂಜಿ ರಸ್ತೆಯ ಶ್ರೀರಾಮ ದೇವಸ್ಥಾನದಲ್ಲಿ ಜ.22ರಂದು ವಿವಿಧ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 8 ಗಂಟೆಗೆ ಶ್ರೀರಾಮನಿಗೆ ಅಭಿಷೇಕ, ಶ್ರೀರಾಮ ತಾರಕ ಯಾಗದ ಪುಣ್ಯಾಹ ವಾಚನ, ತ್ರಯೋದಶ ಸಹಸ್ರ ಹೋಮ, 12.35ಕ್ಕೆ ಪೂರ್ಣಾಹುತಿ ನಂತರ ಮಹಾಪ್ರಸಾದ ಜರುಗಲಿದೆ. ಸಂಜೆ 6.30ಕ್ಕೆ ಮಹಿಳಾ ಮಂಡಳದವರಿಂದ ರಾಮಾಯಣದ ಆಯ್ದ ಭಾಗ, ‘ಸೀತೆ ಪುನೀತೆ’ ನಾಟಕ, ರಾಮಜನ್ಮದ ಗೀತೆಯೊಂದಿಗೆ ಕೋಲಾಟ, ಅಷ್ಟಾವಧಾನ, ಮಹಾಮಂಗಳಾರತಿ ಜರುಗಲಿವೆ. ಕಾರಣ ರಾಮಭಕ್ತರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ದೇಗುಲದ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts