More

  ಮಾತದಾನ ಮಾಡುವಂತೆ ಅಂಚೆ ಪತ್ರ ಮುಖೇನ ಮನವಿ; ಪಾಲಕರಿಗೆ ಮನವಿ ಮಾಡಿದ ವಿದ್ಯಾರ್ಥಿಗಳು

  ಹಾವೇರಿ: ಹಾವೇರಿ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಮೇ 7ರಂದು ಮತದಾನ ನಡೆಯಲಿದೆ. ಆ ದಿನ ಮನೆಯ ಎಲ್ಲ ಸದಸ್ಯರು ತಪ್ಪದೇ ಮತದಾನ ಮಾಡಿ ಎಂದು ಸಾವಿರಾರು ವಿದ್ಯಾರ್ಥಿಗಳು ಅಂಚೆ ಪತ್ರದ ಮೂಲಕ ತಮ್ಮ ಪಾಲಕರಿಗೆ ಮನವಿ ಮಾಡಿಕೊಂಡಿದ್ದಾರೆ.
  ಅಂಚೆ ಪತ್ರದ ಮೂಲಕ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳು ಮನವಿ ಸಂದೇಶ ಹೊತ್ತ ಅಂಚೆ ಪತ್ರಗಳನ್ನು ಪೋಸ್ಟ್ ಮಾಡಿದ್ದಾರೆ.
  ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿಗಾಗಿ ಜಿ.ಪಂ. ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಅಕ್ಷಯ ಶ್ರೀಧರ ಅವರ ಮಾರ್ಗದರ್ಶನದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಜಿಲ್ಲೆಯ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳ ಮೂಲಕ ಪಾಲಕರಿಗೆ ಮತದಾನದ ಜಾಗೃತಿ ಕುರಿತಂತೆ ಪತ್ರ ಬರೆದು ಪೋಸ್ಟ್ ಮಾಡುವ ವಿಶಿಷ್ಟ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
  ಹಾವೇರಿ ನಗರ ಸೇರಿದಂತೆ ತಾಲೂಕಿನ ವಿವಿಧ ಪ್ರೌಢಶಾಲಾ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಪೋಸ್ಟ್ ಕಾರ್ಡ್ ಮೂಲಕ ಸಾಮೂಹಿಕ ಪತ್ರ ಬರೆಯುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts