ಹಾವೇರಿ: ತನ್ನ ವರ್ಗಾವಣೆಗೆ ನ್ಯಾಯಾಲಯ ನೀಡಿರುವ ತಡೆಯಾಜ್ಞೆ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರದೆ ಕರ್ತವ್ಯಕ್ಕೆ ಹಾಜರಾದ ಕಾರಣ ಹಾಗೂ ಕರ್ತವ್ಯ ಲೋಪ ಆರೋಪದ ಹಿನ್ನೆಲೆಯಲ್ಲಿ ಇಲ್ಲಿಯ ತಾಪಂ ಇಒ ಭರತ ಹೆಗಡೆ ಅವರನ್ನು ಅಮಾನತು ಮಾಡಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧೀನ ಕಾರ್ಯದಶಿರ್ ಬಾಲಪ್ಪ ಶನಿವಾರ ಆದೇಶಿಸಿದ್ದಾರೆ.
ಭರತ ಹೆಗಡೆ ಅವರನ್ನು ಉತ್ತರ ಕನ್ನಡ ಜಿಲ್ಲೆ ಡಾಂಡೇಲಿ ತಾಪಂಗೆ ವರ್ಗಾವಣೆ ಮಾಡಲಾಗಿತ್ತು. ಅವರ ಜಾಗಕ್ಕೆ ಸವಣೂರಿನ ತಾಪಂ ನವೀನಪ್ರಸಾದ ಕಟ್ಟಿಮನಿ ಅವರನ್ನು ಹೆಚ್ಚುವರಿ ಪ್ರಭಾರದಲ್ಲಿ ನೇಮಕ ಮಾಡಿ ಆದೇಶಿಸಲಾಗಿತ್ತು. ಇಬ್ಬರಿಗೂ ವರ್ಗಾವಣೆ ಆದೇಶ ಪ್ರತಿ ನೀಡಿ ಪ್ರಸ್ತುತ ಹುದ್ದೆಯಿಂದ ಬಿಡುಗಡೆ ಮಾಡಲಾಗಿತ್ತು.
ಇದನ್ನು ಪ್ರಶ್ನಿಸಿ ಭರತ ಹೆಗಡೆ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯಿಂದ ತಡೆಯಾಜ್ಞೆ ತಂದಿದ್ದರು. ಆದರೆ, ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರದೆ ಹಾಗೂ ಅನುಮತಿ ಪಡೆಯದೆ ಆ. 1ರಂದು ಹಾವೇರಿ ತಾಪಂ ಇಒ ಹುದ್ದೆಯ ಕರ್ತವ್ಯಕ್ಕೆ ಮರು ಹಾಜರಾಗಿದ್ದರು.
ಅಲ್ಲದೆ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿದು ಪ್ರಕೃತಿ ವಿಕೋಪ ಉಂಟಾಗಿ ಸುಮಾರು ಮನೆಗಳು ಹಾಗೂ ರೈತರ ಬೆಳೆ ಹಾಳಾಗಿದ್ದರೂ ಭರತ ಹೆಗಡೆ ಕೇಂದ್ರ ಸ್ಥಾನದಲ್ಲಿ ಇಲ್ಲದ ಕಾರಣ ಜಿಲ್ಲಾ ಉಸ್ತುವಾರಿ ಸಚಿವರು ವಿಷಾದ ವ್ಯಕ್ತಪಡಿಸಿದ್ದರು.
ಭರತ ಹೆಗಡೆ 2023 ನವೆಂಬರ್ 7ರಂದು ಆಯೋಜಿಸಿದ್ದ ತೆಮಾಸಿಕ ಕೆ.ಡಿ.ಪಿ. ಸಭೆಗೆ ಪೂರ್ವಾನುಮತಿ ಪಡೆಯದೆ ಗೈರು ಹಾಜರಾಗಿದ್ದರು. ಇವರ ಕಾರ್ಯವೈಖರಿ ಕುರಿತು ಕಾರಣ ಕೇಳಿ ನೊಟೀಸ್ ಜಾರಿ ಮಾಡಲಾಗಿತ್ತು. ಅದಕ್ಕೆ ಸಮಂಜಸ ಉತ್ತರ ನೀಡಿಲ್ಲ. ಇವರ ಈ ಬೇಜವಾಬ್ದಾರಿ ವರ್ತನೆ ಹಾಗೂ ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವತಿರ್ಸಿ ದುರ್ನಡತೆ ಎಸಗಿರುವುದರಿಂದ ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಜಿಪಂ ಸಿಇಒ ಅಕ್ಷಯ್ ಶ್ರೀಧರ ಪ್ರಸ್ತಾವನೆ ಸಲ್ಲಿಸಿದ್ದರು. ಈ ಕುರಿತು ಪರಿಶೀಲಿಸಲಾಗಿದ್ದು, ಇವರ ವಿರುದ್ಧ ಮೇಲ್ನೋಟಕ್ಕೆ ತಪು$್ಪ ಕಂಡು ಬಂದಿದ್ದರಿಂದ ಇಲಾಖೆ ವಿಚಾರಣೆ ಬಾಕಿಯಿರಿಸಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಮೇಲಧಿಕಾರಿಗಳಿಗೆ ತಿಳಿಸದೆ ಕರ್ತವ್ಯಕ್ಕೆ ಹಾಜರಾದ ತಾಪಂ ಇಒ; ನಾನಾ ಕಾರಣವೊಡ್ಡಿ ಭರತ ಹೆಗಡೆ ಅಮಾನತು
You Might Also Like
ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….
ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…
ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್!
ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…
ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ
ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…