More

    ಶೇ.25ರಷ್ಟು ಮಧ್ಯಂತರ ವೆಳೆ ವಿಮೆಗೆ ಆಗ್ರಹ; ಹಾವೇರಿ ತಾಲೂಕು ರೈತ ಸಂಘದಿಂದ ಮನವಿ

    ಹಾವೇರಿ: ಹಾವೇರಿ ತಾಲೂಕನ್ನು ರಾಜ್ಯ ಸರ್ಕಾರ ಬರಗಾಲ ಎಂದು ಘೋಷಣೆ ಮಾಡಿದ್ದು, ಈ ಕೂಡಲೇ ಪ್ರತಿ ಎಕರೆಗೆ 25 ಸಾವಿರ ರೂ. ಮಧ್ಯಂತರ ಬೆಳೆ ವಿಮೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ತಾಲೂಕು ರೈತ ಸಂಘದ ಪದಾಧಿಕಾರಿಗಳು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
    ನಗರದ ತಹಶೀಲ್ದಾರ್ ಕಚೇರಿ ಬಳಿ ಶುಕ್ರವಾರ ಪ್ರತಿಭಟನೆ ನಡೆಸಿದ ರೈತ ಸಂಘದ ಸದಸ್ಯರು, ಅಪರ ತಹಶೀಲ್ದಾರ್ ಅಮೃತಗೌಡ ಪಾಟೀಲ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಪತ್ರ ಸಲ್ಲಿಸಿದರು. ಐದು ತಾಲೂಕುಗಳನ್ನು ಬರಪಟ್ಟಿಗೆ ಸೇರಿಸಿದ್ದರೂ ಈವರೆಗೆ ಕೇಂದ್ರ ಬರ ಅಧ್ಯಯನ ತಂಡ ಜಿಲ್ಲೆಗೆ ಆಗಮಿಸಿಲ್ಲ. ಈ ಕೂಡಲೇ ಕೇಂದ್ರ ತಂಡ ಆಗಮಿಸಿ ವರದಿ ಸಲ್ಲಿಸಬೇಕು. ಶೀಘ್ರದಲ್ಲೇ ಪರಿಹಾರ ಬಿಡುಗಡೆ ಮಾಡಬೇಕು. ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
    ತಾಲೂಕು ರೈತ ಸಂಘದ ಅಧ್ಯಕ್ಷ ದಿಳ್ಳೆಪ್ಪ ಮಣ್ಣೂರ, ಕಾರ್ಯದರ್ಶಿ ಶಿವಯೋಗಿ ಹೊಸಗೌಡ್ರ, ಶಿವಬಸಪ್ಪ ಗೋವಿ, ಸುರೇಶ ಚಲವಾದಿ, ರಘುನಾಥ ಹಿರೆಕ್ಕನವರ, ಬಸವರಾಜ ನಿವಾಳಕರ, ಎಂ.ಎಂ.ಮುಲ್ಲಾ, ಕರಿಬಸಪ್ಪ ನಾಗಮ್ಮನವರ, ವೀರನಗೌಡ ಪಾಟೀಲ, ಚಂದ್ರಶೇಖರ ಮೂಲಿಮನಿ, ಕೊಟ್ರೇಶ ಕರ್ಜಗಿ, ಮಂಜುನಾಥ ನೆಗಳೂರ, ಅಡಿವೆಪ್ಪ ಹಾವಕ್ಕನವರ, ಇತರರಿದ್ದರು.
    ಹಾಲು ಒಕ್ಕೂಟದಲ್ಲಿ ಅಕ್ರಮ ನೇಮಕಾತಿ ಆರೋಪ
    ಹಾವೇರಿ ಹಾಲು ಒಕ್ಕೂಟದಲ್ಲಿ ಸ್ಥಳೀಯ ರೈತರ ಮಕ್ಕಳನ್ನು ಕಡೆಗಣಿಸಿ ತಮಗೆ ಅನುಕೂಲ ಆಗುವವರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಲಂಚದ ಬೇಡಿಕೆ ಇಡುತ್ತಿರುವುದು ಬೆಳಕಿಗೆ ಬಂದಿದೆ. ಇದರ ಬಗ್ಗೆ ಸರ್ಕಾರ ತನಿಖೆ ಮಾಡಬೇಕು. ಅರಬಗೊಂಡ ಮೆಗಾ ಡೇರಿಯಲ್ಲಿ ಸ್ಥಳೀಯರಿಗೆ ಕೆಲಸ ನೀಡಬೇಕು. ಜಂಗಮನಕೊಪ್ಪ ಹಾಲು ಪ್ಯಾಕಿಂಗ್ (ಯುಎಚ್‌ಟಿ) ಘಟಕದಲ್ಲಿ ಕೆಲಸಗಾರರಿಗೆ ಕಿರುಕುಳ ನೀಡಲಾಗುತ್ತಿದೆ. ಹೆಚ್ಚುವರಿ ಕೆಲಸ ಮಾಡಿಸಿಕೊಂಡು ಸರಿಯಾಗಿ ಸಂಬಳ ನೀಡುತ್ತಿಲ್ಲ ಈ ಕುರಿತು ಕ್ರಮ ಜರುಗಿಸಬೇಕು ಎಂದು ರೈತ ಸಂಘ ಆಗ್ರಹಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts