More

    ತಂಬಾಕು ಉತ್ಪನ್ನ ಮಾರಾಟದ ಅಂಗಡಿಗಳ ಮೇಲೆ ದಾಳಿ

    ಹಾವೇರಿ: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಆರೋಗ್ಯ, ಆಹಾರ ಹಾಗೂ ವಿವಿಧ ಅಧಿಕಾರಿಗಳನ್ನೊಳಗೊಂಡ ತಂಡ ಗುರುವಾರ ನಗರದ ವಿವಿಧ 29 ಅಂಗಡಿಗಳ ಮೇಲೆ ದಾಳಿ ನಡೆಸಿ, 3,200 ರೂ. ದಂಡ ವಸೂಲಿ ಮಾಡಿದೆ.
    ತಂಬಾಕು ನಿಯಂತ್ರಣ ಕಾಯ್ದೆ-2003ರ ವಿರುದ್ಧವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ, ತಂಬಾಕು ಜಗಿದು ಉಗುಳುವವರ, ನೇರ-ಪರೋಕ್ಷವಾಗಿ ತಂಬಾಕು ಜಾಹೀರಾತು ಪ್ರದರ್ಶನ, ಶಾಲಾ-ಕಾಲೇಜು ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಂಗಡಿ, ಬೇಕರಿ, ಹೋಟೆಲ್ ಮಾಲೀಕರಿಗೆ ನೋಟೀಸ್ ಜಾರಿ ಮಾಡಿ ತಂಬಾಕು ನಿಯಂತ್ರಣ ಕಾಯ್ದೆ-2003ರ ಕಲಂ-4ರ ಮತ್ತು ಕಲಂ 6ರ ಅಡಿಯಲ್ಲಿ 3,400 ರೂ. ದಂಡ ವಸೂಲಿ ಮಾಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts