More

    ನರೇಗಾ ಉದ್ಯೋಗ ರಥ ಪ್ರಚಾರ ವಾಹಿನಿಗೆ ಚಾಲನೆ

    ಹಾವೇರಿ: ಹಾವೇರಿ ತಾಲೂಕು ಪಂಚಾಯಿತಿ ವತಿಯಿಂದ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಉದ್ಯೋಗ ರಥ ಪ್ರಚಾರ ವಾಹಿನಿಗೆ ತಾಪಂ ಕಾರ್ಯ ನಿರ್ವಹಣಾಧಿಕಾರಿ ಭರತ ಹೆಗಡೆ ಇತ್ತೀಚೆಗೆ ಚಾಲನೆ ನೀಡಿದರು.
    ನಂತರ ಮಾತನಾಡಿದ ಭರತ ಹೆಗಡೆ, 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ಒಂದು ತಿಂಗಳ ಕಾಲ ತಾಲೂಕಿನ 33 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಉದ್ಯೋಗ ನಡಿಗೆ ಸುಸ್ತಿರತೆ ಎಡೆಗೆ’ ಅಭಿಯಾನ ಹಮ್ಮಿಕೊಳ್ಳಲಾಗಿದೆ.
    ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಪ್ರತಿಯೊಂದು ಮನೆಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ದೊರೆಯುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯಗಳು ಹಾಗೂ ವೈಯಕ್ತಿಕ ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆಗಳು, ಯೋಜನೆಯಡಿ ದೊರೆಯುವ ಕೂಲಿಯ ಮೊತ್ತ, ಗಂಡು ಹೆಣ್ಣಿಗೆ ಸಮಾನ ಕೂಲಿ, ಒಂದು ದಿನದ ಕೂಲಿ ಪಡೆಯಲು ಮಾಡಬೇಕಾದ ಕೆಲಸದ ಪ್ರಮಾಣ ಮತ್ತು ಕೆಲಸದ ಅವಧಿಯ ಕುರಿತು ಜನರಿಗೆ ಮಾಹಿತಿ ನೀಡಲಾಗುವುದು ತಿಳಿಸಿದರು.
    ಕೆಲಸದ ಪ್ರಮಾಣದಲ್ಲಿ ಹಿರಿಯ ನಾಗರಿಕರಿಗೆ ಮತ್ತು ವಿಶೇಷ ಚೇತನರಿಗೆ ಶೇ.50ರಷ್ಟು ರಿಯಾಯ್ತಿ, ಕಾಮಗಾರಿ ಸ್ಥಳದಲ್ಲಿ ಒದಗಿಸಲಾಗುವ ಸೌಲಭ್ಯಗಳು, ಅಕುಶಲ ಮಹಿಳೆಯರು ಮತ್ತು ನಿರ್ವಹಿಸುವ ಕೆಲಸಕ್ಕೆ ಕಾರ್ಮಿಕರಿಗೆ ಶೇ.20ರಷ್ಟು ಕೆಲಸದ ಪ್ರಮಾಣದಲ್ಲಿ ರಿಯಾಯ್ತಿ ಸಿಗಲಿದೆ ಎಂದು ತಿಳಿಸಿದರು.
    ನರೇಗಾ ಸಹಾಯಕ ನಿರ್ದೇಶಕ ಪ್ರದೀಪ ಗಣೇಶಕರ, ತಾಲೂಕು ಪಂಚಾಯಿತಿ ವ್ಯವಸ್ಥಾಪಕ ರಮೇಶ ಅಕ್ಕಿ, ಸಂದೀಪ ಎಸ್.ಡಿ., ಗಿರೀಶ ಬೆನ್ನೂರು, ಮತ್ತಿತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts