More

    ವಾಲ್ಮೀಕಿ ನಿಗಮದಿಂದ ಅರ್ಜಿ ಆಹ್ವಾನ

    ಹಾವೇರಿ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
    ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ, ಮೈಕ್ರೋ ಕ್ರೆಡಿಟ್ ಯೋಜನೆ, ಭೂಒಡೆತನ ಯೋಜನೆ ಹಾಗೂ ಗಂಗಾಕಲ್ಯಾಣ ಯೋಜನೆಗಳ ಸೌಲಭ್ಯಕ್ಕೆ ಆನ್‌ಲೈನ್ ಮೂಲಕ ನ.29ರೊಳಗಾಗಿ ವೆಬ್‌ಸೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಮಂಡಳಿ ವಿವೇಚನಾ ಕೋಟಾ ಅಥವಾ ಸರ್ಕಾರದ ಸಾಂಸ್ಥಿಕ ಕೋಟಾದಡಿ ಸ್ವೀಕರಿಸುವ ಅರ್ಜಿಗಳನ್ನು ಸಹ ಸೇವಾ ಸಿಂಧು ಪೋರ್ಟಲ್ ಮೂಲಕವೇ ಸಲ್ಲಿಸಬೇಕು.
    ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ, ನೀಲನಗೌಡ್ರ ಕಾಂಪ್ಲೆಕ್ಸ್, ಎಲ್‌ಐಸಿ ಎದುರು ಹಾವೇರಿ ಈ ವಿಳಾಸದಲ್ಲಿ ಅಥವಾ https://kmvstdcl..karnataka.gov.in ವೆಬ್‌ಸೈಟ್ ಸಂಪರ್ಕಿಸಲು ಕೋರಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts