More

    ವೀರಶೈವ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ 15ರಂದು; ಜಿಲ್ಲಾಧ್ಯಕ್ಷ ಎಂ.ಎಸ್.ಕೋರಿಶೆಟ್ಟರ

    ಹಾವೇರಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಹಾಗೂ ತಾಲೂಕು ಘಟಕಗಳ ಸಹಯೋಗದಲ್ಲಿ ಅ.15ರಂದು ಬೆಳಗ್ಗೆ 10.30ಕ್ಕೆ ಇಲ್ಲಿನ ಜೆಎಚ್ ಪಟೇಲ ರಸ್ತೆಯ ಜಿಲ್ಲಾ ಗುರು ಭವನದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಜಿಲ್ಲೆಯ ನೂತನ ಶಾಸಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾ ಜಿಲ್ಲಾಧ್ಯಕ್ಷ ಎಂ.ಎಸ್.ಕೋರಿಶೆಟ್ಟರ ಹೇಳಿದರು.
    ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2022-23ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಜಿಲ್ಲೆಯ ಸಮಾಜದ 231 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ. ಜತೆಗೆ ಜಿಲ್ಲೆಯ ನೂತನ ಶಾಸಕರನ್ನು ಸನ್ಮಾನಿಸಲಾಗುವುದು ಎಂದರು.
    ಸಮಾರಂಭವನ್ನು ಮಹಾಸಭಾದ ಅಧ್ಯಕ್ಷ, ಶಾಸಕ ಶಾಮನೂರ ಶಿವಶಂಕ್ರಪ್ಪ ಉದ್ಘಾಟಿಸುವರು. ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ನೆಗಳೂರಿನ ಶ್ರೀ ಗುರುಶಾಂತೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ಪ್ರತಿಭಾ ಪುರಸ್ಕಾರ ವಿತರಿಸಲಿದ್ದಾರೆ. ಹೊಸಮಠದ ಶ್ರೀ ಬಸವಶಾಂತಲಿಂಗ ಸ್ವಾಮೀಜಿ, ನಿವೃತ್ತ ಡಿಜಿಪಿ ಶಂಕರ ಬಿದರಿ, ಸಂಸದ ಶಿವಕುಮಾರ ಉದಾಸಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
    ಸುದ್ದಿಗೋಷ್ಠಿಯಲ್ಲಿ ಮಹಾಸಭಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿರುಪಾಕ್ಷಪ್ಪ ಕಡ್ಲಿ, ಖಜಾಂಚಿ ವಿಶ್ವನಾಥ ಅಂಕಲಕೋಟಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಟೊಂಕದ, ಪ್ರಧಾನ ಕಾರ್ಯದರ್ಶಿ ಲತಾ ಭರತನೂರಮಠ ಇದ್ದರು.
    ದಾವಣಗೆರೆ ಸಮಾವೇಶ ಡಿ.23ರಂದು
    ಡಿಸೆಂಬರ್ 23, 24ರಂದು ದಾವಣಗೆರೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಬೃಹತ್ ಸಮಾವೇಶ ನಡೆಯಲಿದೆ. ಈ ಸಮಾವೇಶದ ಮೂಲಕ ಕೇಂದ್ರದಲ್ಲಿ ಒಬಿಸಿ ಮೀಸಲಾತಿ, ಸೇರಿದಂತೆ ಇತರ ಮಹತ್ವದ ವಿಷಯಗಳ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ಎಂ.ಎಸ್.ಕೋರಿಶೆಟ್ಟರ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts