More

    ಮತದಾನ ಜಾಗೃತಿಗಾಗಿ ಬೃಹತ್ ತೋರು ಬೆರಳಾಕೃತಿ; ಜಿಲ್ಲಾ ಕ್ರೀಡಾಂಗಣದಲ್ಲಿ ಎರಡು ಸಾವಿರ ವಿದ್ಯಾರ್ಥಿಗಳಿಂದ ಮಾನ ಸರಪಳಿ ನಿರ್ಮಾಣ

    ಹಾವೇರಿ: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ ಹಾಗೂ ಸ್ವೀಪ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಎರಡು ಸಾವಿರ ವಿದ್ಯಾರ್ಥಿಗಳು ತೋರುಬೆರಳಿನ ಆಕೃತಿಯ ಮಾನವ ಸರಪಳಿ ರಚಿಸುವ ಮೂಲಕ ಗಮನ ಸೆಳೆದರು.
    ನಗರದ ವಿವಿಧ ಪ್ರೌಢಶಾಲೆಗಳಿಂದ ಆಗಮಿಸಿದ್ದ ಎರಡು ಸಾವಿರಕ್ಕೂ ಅಧಿಕ ಸಮವಸ್ತ್ರಧಾರಿ ವಿದ್ಯಾರ್ಥಿಗಳು ಮತದಾನದ ನಂತರ ಎಡಗೈ ತೋರು ಬೆರಳಿಗೆ ಶಾಹಿ ಹಾಕುವ ಗುರುತಾಗಿ ತೋರು ಬೆರಳಿನಾಕೃತಿಯಲ್ಲಿ ಮಾನವ ಸರಪಳಿ ರಚಿಸಿದರು. ಈ ಮೂಲಕ ಮತದಾನದ ಹಕ್ಕು ಮತ್ತು ಅರಿವು ಕುರಿತಂತೆ ಜಾಗೃತಿ ಮೂಡಿಸಿದರು.

    ನೂರರಷ್ಟು ಮತದಾನದ ಗುರಿ
    ಪ್ರಜಾಪ್ರಭುತ್ವ ಗಟ್ಟಿಗೊಳಿಸಲು 18 ವರ್ಷ ಪೂರೈಸಿದ ಪ್ರತಿಯೊಬ್ಬ ಪ್ರಜೆಯೂ ಮತದಾನ ಮಾಡಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶೇ.ನೂರರಷ್ಟು ಮತದಾನದ ಗುರಿಯೊಂದಿಗೆ ಜಿಲ್ಲೆಯಲ್ಲಿ ವಿಶಿಷ್ಟ ಮತದಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ ಶ್ರೀಧರ ಹೇಳಿದರು.
    ಜಿಲ್ಲೆಯಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ 75ರಷ್ಟು ಮತದಾನವಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ‘ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ’ ಎಂಬ ಘೋಷ ವ್ಯಾಕದೊಂದಿಗೆ ನೂರಕ್ಕೆ ನೂರರಷ್ಟು ಮತದಾನ ಗುರಿ ಹಾಕಿಕೊಂಡರೆ ಶೇ.90ರಷ್ಟು ಪ್ರಗತಿ ಸಾಧಿಸಬಹುದಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts