More

    ಗೃಹಲಕ್ಷ್ಮೀ ಹಣ ಕೂಡಿಟ್ಟು ಮೊಬೈಲ್​ ಖರೀದಿಸಿ ವಾಲ್​ಪೇಪರ್​ನಲ್ಲಿ ಸಿಎಂ ಸಿದ್ದು ಫೋಟೋ ಇಟ್ಟ ಮಹಿಳೆ!

    ಬೆಂಗಳೂರು: ಕಾಂಗ್ರೆಸ್​ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷ್ಮೀ”ಯಿಂದ ಪ್ರತಿ ತಿಂಗಳು ಸಿಗುವ 2000 ರೂಪಾಯಿ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬಳು ಮೊಬೈಲ್​ ಖರೀದಿಸಿ, ತಮ್ಮ ಫೋಟೋವನ್ನು ವಾಲ್​ಪೇಪರ್​ನಲ್ಲಿ ಅಳವಡಿಸಿಕೊಂಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

    ಮಹಿಳೆಯ ಫೋಟೋವನ್ನು ಎಕ್ಸ್​ ಖಾತೆಯಲ್ಲಿ ಶೇರ್​ ಮಾಡಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಹಾವೇರಿ ಜಿಲ್ಲೆಯ ನಿವಾಸಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯೊಬ್ಬರು ಪ್ರತಿ ತಿಂಗಳ ಹಣವನ್ನು ಕೂಡಿಟ್ಟು, ತಮ್ಮ ಇಷ್ಟದ ಮೊಬೈಲ್ ಖರೀದಿಸಿ, ನನ್ನ ಫೋಟೋವನ್ನು ವಾಲ್ ಪೇಪರ್‌ನಲ್ಲಿರಿಸಿ ಸಂಭ್ರಮಿಸಿದ್ದಾರೆ. ಮೊನ್ನೆ ಹಾವೇರಿಯಲ್ಲಿ ನಡೆದ ಸಮಾವೇಶಕ್ಕೆ ಹೊಸ ಮೊಬೈಲ್‌ನೊಂದಿಗೆ ಬಂದಾಗ ಅವರ ಖುಷಿ ಕ್ಯಾಮರಾದಲ್ಲಿ ಸೆರೆಯಾಗಿದೆ.

    ಗೃಹಲಕ್ಷ್ಮಿ ಯೋಜನೆ ಬಡವರ ಮನೆಯ ಹಸಿವು ನೀಗಿಸುತ್ತಿರುವುದು ಮಾತ್ರವಲ್ಲ, ನಾಡಿನ ಲಕ್ಷಾಂತರ ತಾಯಂದಿರು, ಅಕ್ಕತಂಗಿಯರ ಕನಸುಗಳನ್ನು ನನಸಾಗಿಸಿದೆ. ಕೆಲವರು ಟಿವಿ ಖರೀದಿಸಿದರೆ, ಮತ್ತೆ ಕೆಲವರು ಮೊಬೈಲ್, ಫ್ರಿಡ್ಜ್, ಬಟ್ಟೆ, ಬರೆ ಹೀಗೆ ತಿಂಗಳ ಹಣ ಕೂಡಿಟ್ಟು ಇಷ್ಟದ ವಸ್ತುಗಳನ್ನು ಖರೀದಿಸುತ್ತಿದ್ದಾರೆ.

    ಬಡಜನರ ಬದುಕಿಗೆ ನೆರವಾಗಬೇಕು, ನೊಂದವರ ಬಾಳಲ್ಲಿ ನೆಮ್ಮದಿ ಮೂಡಿಸಬೇಕು ಎಂಬ ತನ್ನ ಉದ್ದೇಶವನ್ನು ಗೃಹಲಕ್ಷ್ಮಿ ಯೋಜನೆ ಈಡೇರಿಸುತ್ತಿದೆ. ಯೋಜನೆ ಜಾರಿಗೆ ಕೊಟ್ಟ ನನ್ನಲ್ಲಿ ಸಾರ್ಥಕಭಾವ ಮೂಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

    ಯುಗಾದಿ ದಿನದಂದು ಫ್ರಿಡ್ಜ್​
    ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ನಿವಾಸಿಯಾದ ಲತಾ ಎಂಬ ಮಹಿಳೆಯೂ ಪ್ರತಿ ತಿಂಗಳು ತಮಗೆ ಬಂದ ಗೃಹಲಕ್ಷ್ಮೀ ಯೋಜನೆಯ ಹಣದಿಂದ ಯುಗಾದಿ ಹಬ್ಬಕ್ಕೆ ಹೊಸ ಫ್ರಿಜ್​ವೊಂದನ್ನು ಖರೀದಿ ಮಾಡಿದ್ದರು. ಇದು ಬಹಳ ಸುದ್ದಿಯಾಗಿತ್ತು. ಬರೊಬ್ಬರಿ 17,500 ರೂಪಾಯಿ ಕೊಟ್ಟು ಫ್ರಿಜ್ ಖರೀದಿಸುವ ಮೂಲಕ ಯುಗಾದಿ ಹಬ್ಬಕ್ಕೆ ಹೊಸ ವಸ್ತುವನ್ನ ಮನೆಗೆ ತಂದರು. ಹಬ್ಬದಂದು ಮನೆಗೆ ಬಂದ ಫ್ರಿಡ್ಜ್​ಗೆ ಲತಾ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ, ಸಂತಸ ವ್ಯಕ್ತಪಡಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿ, ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೂ ಬಂದಿತ್ತು.

    ಗೃಹಲಕ್ಷ್ಮೀ ಹಣದಿಂದ ಯುಗಾದಿ ದಿನವೇ ಫ್ರಿಡ್ಜ್​ ಖರೀದಿಸಿದ ಮಹಿಳೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts