11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ 21ರಂದು

Published on

ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜೂ.21ರಂದು ಬೆಳಗ್ಗೆ 6.30ಕ್ಕೆ ನಗರದ ರಜನಿ ಸಭಾಂಗಣದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಯೋಗ ದಿನಾಚರಣೆ ಆಯೋಜಿಸಲಾಗಿದೆ. ಬೆಳಗ್ಗೆ 6.15ಕ್ಕೆ ಸಾಮೂಹಿಕ ಯೋಗ ಕಾರ್ಯಕ್ರಮ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಉದ್ಘಾಟಿಸಲಿದ್ದು, ಸಚಿವ ದಿನೇಶ ಗುಂಡೂರಾವ್, ಸಂಸದ ಬಸವರಾಜ ಬೊಮ್ಮಾಯಿ, ಶಾಸಲ ರುದ್ರಪ್ಪ ಲಮಾಣಿ, ಇತರ ಗಣ್ಯರು ಭಾಗವಹಿಸಲಿದ್ದಾರೆ.

ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಯೋಗಾಸಕ್ತರು ಯೋಗ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಜಿ.ಸಿ ನಿಡಗುಂದಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net