More

    ದೇಶ ಕಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ; ಜಿಪಂ ಉಪ ಕಾರ್ಯದರ್ಶಿ ಎಸ್.ಜಿ.ಮುಳ್ಳಳ್ಳಿ

    ಹಾವೇರಿ: ದೇಶ ಕಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯವಾಗಿದೆ. ರಾಷ್ಟ್ರದ ಏಕತೆ ಹಾಗೂ ಅಖಂಡತೆ ಕಾಯ್ದುಕೊಳ್ಳುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಸ್.ಜಿ.ಮುಳ್ಳಳ್ಳಿ ಹೇಳಿದರು.
    ನಗರದ ಕೆಎಲ್‌ಇ ಜಿಎಚ್ ಕಾಲೇಜ್‌ನಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ, ನೆಹರು ಯುವ ಕೇಂದ್ರ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ‘ನನ್ನ ದೇಶ ನನ್ನ ಮಣ್ಣು’ (ಅಮೃತ ಕಳಶ) ಯಾತ್ರೆ ಕಾರ್ಯಕ್ರಮಕ್ಕೆ ಕಳಸಕ್ಕೆ ಮಣ್ಣು ಹಾಕುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
    ದೇಶಾಭಿಮಾನ ಜಾಗೃತಿಗೊಳಿಸಲು ಈ ಕಾರ್ಯಕ್ರಮವನ್ನು ದೇಶಾದ್ಯಂತ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇಲ್ಲಿ ಸಂಗ್ರಹಿಸಲಾದ ಮಣ್ಣು ನವದೆಹಲಿ ತಲುಪಲಿದೆ. ಪ್ರತಿಯೊಬ್ಬರೂ ರಾಷ್ಟ್ರದ ಬಗ್ಗೆ ಅಭಿಮಾನ ಹೊಂದಬೇಕು. ಸಹೋದರ ಭಾವನೆ ಬೆಳೆಸಿಕೊಳ್ಳಬೇಕು ಹಾಗೂ ದೇಶವಿರೋಧಿ ಚಟುವಟಿಕೆಗಳನ್ನು ವಿರೋಧಿಸಬೇಕು. ಎನ್.ಎಸ್.ಎಸ್. ಹಾಗೂ ಎನ್.ಸಿ.ಸಿ. ಘಟಕಗಳು ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಗೆ ಜತೆಗೆ ಆಧುನಿಕ ತಂತ್ರಜ್ಞಾದ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
    ನಾವು ಇಂದು ಸುರಕ್ಷಿತವಾಗಿ ಬದಕು ಸಾಗಿಸಲು ನಮ್ಮ ದೇಶ ಕಾಯುವ ಯೋಧರ ಪಾತ್ರ ಬಹಳ ಪ್ರಮುಖವಾಗಿದೆ. ದೇಶದ ಉಜ್ವಲ ಭವಿಷ್ಯ ರೂಪಿಸಲು ಯುವ ಸಮೂಹ ಚಿಂತನೆ ಮಾಡಬೇಕು. ತಮ್ಮ ಜವಾಬ್ದಾರಿಗಳನ್ನು ಅರಿತು ಜಾಗೃತರಾಗಬೇಕು ಎಂದರು.
    ಮಾಜಿ ಯೋಧರಾದ ಮಹ್ಮದ ಜಾಗೀರ್ ಹಾಗೂ ಶರಣಪ್ಪ ಹೊಂಬಾಳಿ ಅವರನ್ನು ಸನ್ಮಾನಿಸಲಾಯಿತು. ಶಿವಾನಂದ ಪಾಯಮಲ್ಲಿ ಪ್ರತಿಜ್ಞಾವಿಧಿ ಬೋಧಿಸಿದರು.
    ಕಾರ್ಯಕ್ರಮದಲ್ಲಿ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭರತ ಹೆಗಡೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಲತಾ, ಅಂಚೆ ಅಧೀಕ್ಷಕ ಜಿ.ಎಸ್.ಕಡಗಿ, ನಬಾರ್ಡ್ ಅಧಿಕಾರಿ ರಂಗನಾಥ, ನೆಹರು ಯುವ ಕೇಂದ್ರ ಅಧಿಕಾರಿ ಸಂಜೀವ ಭುಕ್ಯಾ, ಕೆಎಲ್‌ಇ ಆಡಳಿತ ಮಂಡಳಿ ಸದಸ್ಯ ಎಂ.ಸಿ.ಕೊಳ್ಳಿ, ಕಾಲೇಜು ಪ್ರಾಚಾರ್ಯೆ ಡಾ.ಸಂಧ್ಯಾ ಕುಲಕರ್ಣಿ, ಸಂತೋಷ ಆದಲದಕಟ್ಟಿ, ಇತರರು ಉಪಸ್ಥಿತರಿದ್ದರು.
    ಅಮೃತ ಕಳಶ ಯಾತ್ರೆ
    ನಗರದ ಗುದ್ಲೆಪ್ಪ ಹಳ್ಳಿಕೇರಿ ಕಾಲೇಜ್‌ನಿಂದ ವಿವಿಧ ಕಲಾ ತಂಡಗಳೊಂದಿಗೆ ನನ್ನ ದೇಶ ನನ್ನ ಮಣ್ಣು(ಅಮೃತ ಕಳಶ) ಯಾತ್ರೆ ತಾ.ಪಂ. ಕಚೇರಿವರೆಗೆ ನಡೆಯಿತು. ಬಳಿಕ ಅಮೃತ ಕಳಶವನ್ನು ನೆಹರು ಯುವ ಕೇಂದ್ರದ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts