More

    ನೀರು ಪೂರೈಸುವುದು ಗ್ರಾಪಂನ ಆದ್ಯ ಕರ್ತವ್ಯ; ನಿರ್ಲಕ್ಷೃ ತೋರಿದರೆ ನಿರ್ದಾಕ್ಷಿೃಣ್ಯ ಕ್ರಮ; ಇಒ, ಪಿಡಿಒ ಸಭೆಯಲ್ಲಿ ಜಿಪಂ ಸಿಇಒ ಅಕ್ಷಯ ಎಚ್ಚರಿಕೆ

    ಹಾವೇರಿ: ಬೇಸಿಗೆ ಅವಧಿಯಲ್ಲಿ ಯಾವುದೇ ಗ್ರಾಮಗಳಲ್ಲಿ ಜನರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೀರು ಪೂರೈಸುವ ಹೊಣೆಗಾರಿಕೆ ಆಯಾ ಗ್ರಾಮ ಪಂಚಾಯಿತಿಗಳ ಆದ್ಯ ಕರ್ತವ್ಯವಾಗಿದೆ. ಕುಡಿಯುವ ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಅಕ್ಷಯ ಶ್ರೀಧರ ಎಚ್ಚರಿಕೆ ನೀಡಿದರು.
    ಇಲ್ಲಿನ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಈಗಾಗಲೇ ಕುಡಿಯುವ ನೀರು ಪೂರೈಕೆಯಾಗುತ್ತಿರುವ ಕೊಳವೆಬಾವಿಗಳಿಂದ ಅಗತ್ಯಕ್ಕೆ ತಕ್ಕಂತೆ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ, ಅಂತರ್ಜಲಮಟ್ಟ ಕುಸಿದು ಕೊಳವೆಬಾವಿಗಳ ನೀರಿನ ಮಟ್ಟ ಕಡಿಮೆಯಾದಲ್ಲಿ ಸರ್ಕಾರ ನಿಗದಿಪಡಿಸಿದ ದರದಲ್ಲಿ ಬಾಡಿಗೆ ಪಡೆದು ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸಬೇಕು. ಬಾಡಿಗೆ ಹಣ ಸಂದಾಯ ಮಾಡಲು ತಾಲೂಕು ಟಾಸ್ಕ್‌ಫೋರ್ಸ್ ಸಮಿತಿಯಲ್ಲಿ ಅನುಮೋದನೆ ಪಡೆದುಕೊಳ್ಳಬೇಕು. ಖಾಸಗಿ ಕೊಳವೆಬಾವಿ ಮಾಲೀಕರಿಂದ ಕರಾರುಪತ್ರ ಮಾಡಿಕೊಂಡು ನೀರು ಪೂರೈಸಬೇಕು. ನೀರಿನಮಟ್ಟ ಕಡಿಮೆ ಇರುವ ಕೊಳವೆಬಾವಿಗಳಿಗೆ ಫ್ಲಶಿಂಗ್‌ಮಾಡಿಸಿ ಕುಡಿಯುವ ನೀರು ಪೂರೈಸಬೇಕು ಎಂದು ಸೂಚಿಸಿದರು.
    ತೆರಿಗೆ ವಸೂಲಾತಿ :
    ಗ್ರಾಮ ಪಂಚಾಯಿತಿ ತೆರಿಗೆ /ಬೇಡಿಕೆಯನ್ನು ಡಿಜಿಟಲ್ ವಿಧಾನದ ಮೂಲಕ ತೆರಿಗೆ ವಸೂಲಾತಿ ಕೈಗೊಳಬೇಕು. ತೆರಿಗೆದಾರರ ಮನವೊಲಿಸಿ ಬಾಕಿ ತೆರಿಗೆ ವಸೂಲಾತಿಗೆ ಕ್ರಮವಹಿಸುವುದರೊಂದಿಗೆ ಆಸ್ತಿಗಳ ದಾಖಲೀಕರಣ ಮಾಡುವಂತೆ ಸೂಚನೆ ನೀಡಿದರು.
    ಇ-ಹಾಜರಾತಿ ಕಡ್ಡಾಯ :
    ತಾಲೂಕು ಮತ್ತು ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ಕಡ್ಡಾಯವಾಗಿ ಇ-ಹಾಜರಾತಿ ತಂತ್ರಾಂಶದ ಮೂಲಕ ಹಾಜರಾತಿ ದಾಖಲಿಸಬೇಕು. ಆದರೆ, ಹಲವು ಗ್ರಾಪಂಗಳಲ್ಲಿ ಅಧಿಕಾರಿ, ಸಿಬ್ಬಂದಿ ಪಾಲಿಸದಿರುವುದು ಕಂಡು ಬಂದಿದೆ. ಇ- ಹಾಜರಾತಿ ಮೂಲಕವೇ ವೇತನ ಸಂದಾಯ ಮಾಡಲಾಗುವುದು ಎಂದರು.
    ಪಿಡಿಒಗಳಿಗೆ ಸೂಚನೆ
    ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾ.ಪಂ ಸಿಬ್ಬಂದಿ ಗ್ರಾಮ ಪಂಚಾಯಿತಿ ಕಚೇರಿಗೆ ಸಮಯಕ್ಕೆ ಸರಿಯಾಗಿ ಹಾಜರಿದ್ದು, ಸಾರ್ವಜನಿಕರ ಕುಂದುಕೊರತೆ ನಿವಾರಿಸುವುದು ಹಾಗೂ ಸರ್ಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು. ಆದರೆ, ಜಿಲ್ಲೆಯಲ್ಲಿ ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಾರ್ವಜನಿಕರ ಹಾಗೂ ಚುನಾಯಿತ ಪ್ರತಿನಿಧಿಗಳ ಕರೆಗಳನ್ನು ಸ್ವೀಕರಿಸದಿರುವ ಕುರಿತು ದೂರುಗಳ ಬಂದಿವೆ. ಹಾಗಾಗಿ, ಇನ್ನು ಮುಂದೆ ಕಡ್ಡಾಯವಾಗಿ ಎಲ್ಲ ಕರೆಗಳನ್ನು ಸ್ವೀಕರಿಸಿ ಸೂಕ್ತ ಪರಿಹಾರಕ್ಕೆ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಇಂತಹ ದೂರುಗಳು ಕಂಡು ಬಂದಲ್ಲಿ ಎಚ್ಚರಿಕೆ ನೀಡದೇ ಶಿಸ್ತುಕ್ರಮ ಜರುಗಿಸಲಾಗುವುದು ಎಂದರು.
    ಸಾರ್ವಜನಿಕ ಕುಂದು ಕೊರತೆ ನೀಗಿಸಿ
    ಗ್ರಾಮ ಪಂಚಾಯಿತಿಗಳಲ್ಲಿ ಸಕಾಲ, ಪಿಗಿಜಿಆರ್‌ಎಸ್, ಸಿಪಿ ಗ್ರಾಮ್ಸ್, ಸಿಎಂಜೆಡಿ, ಡಿಜೆಡಿ ಹಾಗೂ ಇತರೆ ದೂರು ಅರ್ಜಿಗಳು ದಿನಂಪ್ರತಿ ಸ್ವೀಕೃತಿಯಾಗುತ್ತಿವೆ. ಈ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ವಿಲೇವಾರಿ ಮಾಡುವುದರೊಂದಿಗೆ ಅರ್ಜಿದಾರರಿಗೆ ಸೂಕ್ತ ಹಿಂಬರಹ ನೀಡುವುದು ಕಡ್ಡಾಯವಾಗಿದೆ. ಎಲ್ಲ ಪಿಡಿಒಗಳು ಇದನ್ನು ಆದ್ಯತೆಯ ಮೇರೆಗೆ ಪರಿಗಣಿಸಬೇಕು ಎಂದು ಸಿಇಒ ಸೂಚನೆ ನೀಡಿದರು.
    ಮನರೇಗಾ ಕ್ರಿಯಾ ಯೋಜನೆ
    ಮನರೇಗಾ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಬರಗಾಲ ಸಂದರ್ಭದಲ್ಲಿ ಗ್ರಾಮೀಣ ಭಾಗದಲ್ಲಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವ ಮೂಲಕ ಕೂಲಿ ಅರಸಿ ಬರುವ ಜನರಿಗೆ ಉದ್ಯೋಗ ಒದಗಿಸಲು ಬರಗಾಲ ತಡೆಗಟ್ಟುವ ಶೀರ್ಷಿಕೆಯಡಿ ಮುಂದಿನ ಆರು ತಿಂಗಳು ಅವಧಿಗೆ ಸಮಗ್ರ ಕ್ರಿಯಾಯೋಜನೆ ಅನುಮೋದಿಸಿಕೊಳ್ಳಲಾಗಿರುತ್ತದೆ. ಮಹಿಳಾ ಕೂಲಿಕಾರ್ಮಿಕರ ಮಕ್ಕಳನ್ನು ಆರೈಕೆ ಮಾಡುವ ನಿಟ್ಟಿನಲ್ಲಿ 162 ಕೂಸಿನ ಮನೆ (ಶಿಶು ಪಾಲನಾ ಕೇಂದ್ರ) ಗಳನ್ನು ಗುರುತಿಸಿ ಸ್ಥಾಪಿಸಲಾಗಿದೆ.
    ಮುಂದಿನ ಸಾಲಿನಲ್ಲಿ ಜಿಲ್ಲೆಯಿಂದ ಪ್ರಮುಖವಾಗಿ ಐದು ಅಂಶಗಳಡಿ ಸಮಗ್ರವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನನಗೊಳಿಸುವ ನಿಟ್ಟಿನಲ್ಲಿ ಶಾಲಾ ಶೌಚಗೃಹ, ಶಾಲಾ ಕಂಪೌಂಡ್ ನಿರ್ಮಾಣ ಮತ್ತು ಆಟದ ಮೈದಾನದ ಅಭಿವೃದ್ಧಿಪಡಿಸುವುದು, ವೈಯಕ್ತಿಕ ದನದ ದೊಡ್ಡಿ ನಿರ್ಮಾಣ, ಸ್ಮಶಾನ ಅಭಿವೃದ್ಧಿ ಹಾಗೂ ನಿರುಗಾಲುವೆ ಹೂಳೆತ್ತುವುದು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಹಾಗೂ ಈ ಯೋಜನೆಯಡಿ ಮಹಿಳಾ ಕೂಲಿ ಕಾರ್ಮಿಕರಿಗೆ ಹೆಚ್ಚು ಕೆಲಸ ನೀಡುವ ಮೂಲಕ ಮಹಿಳಾ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts