More

    ಆಪತ್ಬಾಂಧವ ಉದ್ಯೋಗ ಖಾತ್ರಿ ಯೋಜನೆ * ಸಿಇಒ ಮಹಮ್ಮದ ರೋಷನ್

    ಹಾವೇರಿ: ಕೋವಿಡ್-19 ಸಮಯದ ಸಂಕಷ್ಟದ ಪರಿಸ್ಥಿತಿಯಲ್ಲಿ ಪ್ರತಿ ವ್ಯಕ್ತಿಗೂ ಉದ್ಯೋಗ ನೀಡಿದ ಏಕೈಕ ಯೋಜನೆ ಉದ್ಯೋಗ ಖಾತ್ರಿ ಯೋಜನೆಯಾಗಿದೆ. ಈ ಮೂಲಕ ಸಂಕಷ್ಟದ ಸಂದರ್ಭದಲ್ಲಿ ಆಪತ್ಬಾಂಧವನಂತೆ ಈ ಯೋಜನೆ ಜನರ ಕೈಹಿಡಿದಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ ರೋಷನ್ ಹೇಳಿದರು.
    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ಕರ್ನಾಟಕ ರಾಜ್ಯ ಮಹತ್ಮಾಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ‘ನರೇಗಾ ಹಬ್ಬ-2023’ ಉದ್ಘಾಟಿಸಿ ಅವರು ಮಾತನಾಡಿದರು.
    ಐದು ವರ್ಷದಲ್ಲಿ ಉದ್ಯೋಗ ಖಾತ್ರಿ ಕೂಲಿಯ ದರ ನೂರು ರೂಪಾಯಿ ಹೆಚ್ಚಾಗಿದೆ ಜತೆಗೆ ನರೇಗಾ ಯೋಜನೆ ವ್ಯಾಪ್ತಿ ಹೆಚ್ಚಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಏನು ಅಭಿವೃದ್ಧಿ ಕೆಲಸ ಮಾಡಬೇಕು. ಪಟ್ಟಣದಿಂದ ಗ್ರಾಮಗಳಿಗೆ ಮರಳಿದ ಜನರಿಗೆ ಉದ್ಯೋಗ ನೀಡುವುದು ಹೇಗೆ ಎಂಬ ಪ್ರಶ್ನೆ ಉಂಟಾದ ಸಂದರ್ಭದಲ್ಲಿ ಜನರಿಗೆ ಭರವಸೆಯಾಗಿ, ಆಪತ್ಬಾಂಧವನಂತೆ ಹೆಗಲಿಗೆ ಹೆಗಲಾಗಿ, ಉದ್ಯೋಗವನ್ನು ನೀಡಿದ ಏಕೈಕ ಯೋಜನೆ ಉದ್ಯೋಗ ಖಾತ್ರಿ ಯೋಜನೆಯಾಗಿದೆ ಎಂದರು.
    ಜಿ.ಪಂ. ಉಪ ಕಾರ್ಯದರ್ಶಿ ಎಸ್.ಬಿ.ಮುಳ್ಳಳ್ಳಿ ಮಾತನಾಡಿ, ಸದ್ಯ ನರೇಗಾ ಕೆಲಸಕ್ಕೆ ಬೇಡಿಕೆ ಇದ್ದು, ಕೆಲವು ಗ್ರಾಮಗಳಲ್ಲಿ ಕೆಲಸ ನೀಡಬೇಕಾದರೆ, ಹುಡುಕಬೇಕಾದ ಅನಿವಾರ್ಯತೆ ಬಂದಿದೆ. ಉದ್ಯೋಗ ಖಾತ್ರಿ ಯೋಜನೆ ಬಂದ ನಂತರ ಗ್ರಾಮೀಣ ಪ್ರದೇಶದಲ್ಲಿ ಮಹತ್ತರ ಬದಲಾವಣೆಯಾಗಿದೆ. ಕಳೆದ ಎರಡು ವರ್ಷದಿಂದ ಜಿಲ್ಲೆಯಲ್ಲಿ 60 ಲಕ್ಷ ಮಾನವ ದಿನಗಳು ಸೃಜನೆಯಾಗಿವೆ. ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದರು.
    ಕಾರ್ಯಕ್ರಮದಲ್ಲಿ ಜಿ.ಪಂ. ಯೋಜನಾ ನಿರ್ದೇಶಕ ಎಸ್.ಜಿ. ಕೊರವರ, ಮುಖ್ಯ ಯೋಜನಾಧಿಕಾರಿ ಸಿ.ವೈ.ಮೀಸಿ, ಸಹಾಯಕ ಕಾರ್ಯದರ್ಶಿ ಜಾಫರಶರೀಫ್ ಸುತಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ, ಪಿಡಿಒ ನೌಕರರ ಸಂಘದ ಜಿಲ್ಲಾಧ್ಯಕ್ಷ ವಿಶ್ವನಾಥ ಕಟ್ಟೆಗೌಡ, ನರೇಗಾ ನೌಕರರ ಸಂಘದ ಅಧ್ಯಕ್ಷ ಸಿದ್ಧನಗೌಡ ಕರಬಸಳ್ಳವರ, ಜಿಲ್ಲಾ ಸಹಾಯಕ ಕಾರ್ಯಕ್ರಮ ಸಂಯೋಜಕ ಮಹಾಂತೇಶ ನರೇಗಲ್, ಜಿಲ್ಲಾ ಐಇಸಿ ಸಂಯೋಜಕ ಚನ್ನವೀರಸ್ವಾಮಿ ಹಿರೇಮಠ ಹಾಗೂ ಜಿಲ್ಲೆಯ ಎಲ್ಲ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಪಿಡಿಓ, ನರೇಗಾ ಸಂಯೋಜಕರು, ತಾಂತ್ರಿಕ ಸಹಾಯಕರು, ಬಿಎಪ್ಟಿ, ಗ್ರಾಮ ಕಾಯಕ ಮಿತ್ರ ಸಿಬ್ಬಂದಿ ಉಪಸ್ಥಿತರಿದ್ದರು.
    ರಾಜ್ಯಕ್ಕೆ ಮಾದರಿ ಕೆಲಸ
    ಜಿಲ್ಲೆಯಾದ್ಯಂತ ನರೇಗಾ ಯೋಜನೆಯಡಿ ಕೈಗೊಂಡ ಬೂದು ನಿರ್ವಹಣಾ ಘಟಕ ಕಾಮಗಾರಿ ಸೇರಿದಂತೆ ಕೆರೆ, ಕುಂಟೆ, ಗೋಕಟ್ಟೆಗಳ ಅಭಿವೃದ್ಧಿ ಕಾರ್ಯಗಳು, ಪೌಷ್ಟಿಕ ತೋಟ ನಿರ್ಮಾಣ ಕಾರ್ಯ, ವಾತ್ಸಲ್ಯ ಕಾರ್ಯಕ್ರಮದ ಪೌಷ್ಟಿಕ ಆಹಾರವನ್ನು ಒದಗಿಸುವುದು ಸೇರಿದಂತೆ ಅನೇಕ ಕೆಲಸ, ಕಾರ್ಯಗಳು ರಾಜ್ಯಕ್ಕೆ ಮಾದರಿಯಾಗಿವೆ. ಹಾವೇರಿ ಜಿಲ್ಲೆಯನ್ನು ಮಾದರಿಯಾಗಿ ತೆಗೆದುಕೊಂಡು, ರಾಜ್ಯದ ಎಲ್ಲ ಜಿಲ್ಲೆಗಳ ಕ್ರಿಯಾಯೋಜನೆಯಲ್ಲಿ ಮಾದರಿ ಕಾಮಗಾರಿ ಅಳವಡಿಸಿಕೊಳ್ಳಲಾಗಿದೆ. ಅದು ನಮ್ಮೆಲ್ಲರ ಹೆಮ್ಮೆಯಾಗಿದೆ ಎಂದು ಸಿಇಒ ಮಹಮ್ಮದ ರೋಷನ ಹೇಳಿದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts