More

    ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಹೈಕೋರ್ಟ್​ ಗ್ರೀನ್ ಸಿಗ್ನಲ್

    ಬೆಂಗಳೂರು : ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದತಿ ಕೋರಿದ್ದ ರಿಟ್​ ಅರ್ಜಿಯನ್ನು ವಜಾ ಮಾಡಿರುವ ಕರ್ನಾಟಕ ಹೈಕೋರ್ಟ್​, ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರದಂತೆ ಪರೀಕ್ಷೆ ನಡೆಸಲು ಗ್ರೀನ್ ಸಿಗ್ನಲ್ ನೀಡಿದೆ. ಇದೇ 19 ಮತ್ತು 22 ರಂದು ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿವೆ ಎನ್ನಲಾಗಿದೆ.

    ಕರೊನಾ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಿ ಎರಡೇ ದಿನದಲ್ಲಿ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ. ಆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡುವಂತೆ ಕೋರಿ, ನಗರದ ಜ್ಞಾನಮಂದಿರ ಎಜುಕೇಷನ್ ಟ್ರಸ್ಟ್​ನ ಸಿಂಗ್ರೇಗೌಡ ಎಂಬುವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕೋವಿಡ್‌ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೂ ರದ್ದು ಮಾಡಿ, ಎಲ್ಲಾ ವಿದ್ಯಾರ್ಥಿಗಳನ್ನೂ ಉತ್ತೀರ್ಣಗೊಳಿಸುವಂತೆ ಕೋರಿದ್ದರು.

    ಇದನ್ನೂ ಓದಿ: ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 28 ಗೋವುಗಳ ರಕ್ಷಣೆ

    ಇಂದು ಅರ್ಜಿದಾರರ ಹಾಗೂ ಸರ್ಕಾರದ ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಅರ್ಜಿಯನ್ನು ವಜಾ ಮಾಡಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸುವುದಕ್ಕೆ ಅನುವು ಮಾಡಿಕೊಟ್ಟಿದೆ. ರಾಜ್ಯದಲ್ಲಿ ಸದ್ಯ ಕೋವಿಡ್ ಸೋಂಕು ಕಡಿಮೆ ಇರುವುದರಿಂದ ಪರೀಕ್ಷೆ ನಡೆಸುವುದು ಸೂಕ್ತವಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೋರ್ಡ್ ಪರೀಕ್ಷೆ ಬರೆಯಬೇಕಿದೆ. ಅವರ ಭವಿಷ್ಯದ ಆಯ್ಕೆ ದೃಷ್ಟಿಯಿಂದಲೂ ಪರೀಕ್ಷೆ ನಡೆಯುವುದು ಮುಖ್ಯವಾಗುತ್ತದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

    ಕರೊನಾ ಹಿನ್ನೆಲೆಯಲ್ಲಿ 6 ದಿನಗಳ ಬದಲಿಗೆ ಈ ವರ್ಷ 2 ದಿನಗಳ ಪರೀಕ್ಷೆ ನಡೆಯುತ್ತಿದೆ. ಜುಲೈ 19 ರಂದು ಸಮಾಜ ವಿಜ್ಞಾನ, ವಿಜ್ಞಾನ ಹಾಗೂ ಗಣಿತ ಪರೀಕ್ಷೆ ಹಾಗೂ 22 ರಂದು ಭಾಷಾ ಪರೀಕ್ಷೆಗಳು ನಡೆಯಲಿವೆ ಎನ್ನಲಾಗಿದೆ.

    ಬೇಬಿ ವಮಿಕಾ ಜೊತೆ ವಿರುಷ್ಕಾ ದಂಪತಿಯ ಪಿಕ್​ನಿಕ್!

    ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ 28 ಗೋವುಗಳ ರಕ್ಷಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts