18.5 C
Bangalore
Monday, December 16, 2019

ಮಾಲೇಗಾಂವ್​ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್‌ಗೆ ನೋಟಿಸ್‌ ನೀಡಿದ ಹೈಕೋರ್ಟ್‌

Latest News

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಜಬಲಾಪುರ: 2008ರ ಮಾಲೇಗಾಂವ್​ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮತ್ತು ಬಿಜೆಪಿಯ ಭೋಪಾಲ್‌ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ಗೆ ಮಧ್ಯಪ್ರದೇಶ ಹೈಕೋರ್ಟ್ ನೋಟಿಸ್‌ ನೀಡಲಾಗಿದೆ.

ಭೋಪಾಲ್‌ನಲ್ಲಿ ಮತದಾನದ ಹಕ್ಕನ್ನು ಹೊಂದಿರುವ ಪತ್ರಕರ್ತ ರಾಕೇಶ್‌ ದೀಕ್ಷಿತ್‌, ಅವರು ಲೋಕಸಭಾ ಚುನಾವಣೆಯಲ್ಲಿ ಪ್ರಜ್ಞಾ ಸಿಂಗ್‌ ಠಾಕೂರ್‌ “ಭ್ರಷ್ಟ ಅಭ್ಯಾಸಗಳನ್ನು” ಅಳವಡಿಸಿಕೊಂಡಿದ್ದಾರೆ ಮತ್ತು ಪ್ರಚಾರದ ವೇಳೆಯಲ್ಲಿ ಕೋಮು ಭಾವನೆ ಕೆರಳಿಸುವಂತ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ನೋಟಿಸ್‌ ನೀಡಿದ್ದಾರೆ.

ಅರ್ಜಿದಾರರ ಪರ ವಕೀಲ ಅರವಿಂದ್‌ ಶ್ರೀವಾತ್ಸವ್‌ ಮಾತನಾಡಿ, 2008ರ ಮಾಲೇಗಾಂವ್​ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪ್ರಜ್ಞಾ ಠಾಕೂರ್‌ ಅವರಿಗೆ ನೋಟಿಸ್‌ ಜಾರಿ ಮಾಡಿದ್ದು, ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ನ್ಯಾಯಾಲಯ ತಿಳಿಸಿದೆ ಎಂದಿದ್ದಾರೆ.

ಠಾಕೂರ್‌ ಅವರು ಸೆಕ್ಷನ್‌ 123(3) (ಧರ್ಮದ ಆಧಾರದಲ್ಲಿ ಮತ ಕೇಳುವುದು) ಅನ್ವಯ ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಿದ್ದರು ಎಂದು ಅರ್ಜಿಯಲ್ಲಿ ದೂರಲಾಗಿದೆ.

ಅಲ್ಲದೆ ತನ್ನ ಎದುರಾಳಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ದಿಗ್ವಿಜಯ್‌ ಸಿಂಗ್‌ ಅವರ ವಿರುದ್ಧ ತಪ್ಪು ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಇತರೆ ಅಭ್ಯರ್ಥಿಗಳ ವಿರುದ್ಧ ಮಾನಹಾನಿಯಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಬಾಬರಿ ಮಸೀದಿ ಧ್ವಂಸ ಮಾಡಿದ್ದವರಲ್ಲಿ ಒಬ್ಬಳಾಗಿದ್ದಕ್ಕೆ ನನಗೆ ಹೆಮ್ಮೆಯಿದೆ. ದೇವರೇ ನನ್ನನ್ನು ಹಿಂದುಗಳನ್ನು ರಕ್ಷಿಸಲು ಕಳುಹಿಸಿದ್ದಾನೆ. ಸಿಂಗ್‌ ಅವರಿಗೆ ಮತ ಹಾಕಿ ಈ ಹಿಂದೆ ಮಾಡಿದ್ದ ತಪ್ಪನ್ನೇ ಮಾಡದಿರಿ ಎಂದು ಪ್ರಚಾರದ ವೇಳೆ ಹೇಳಿದ್ದರು ಎಂದು ದೂರಲಾಗಿದೆ.

ಇದರೊಂದಿಗೆ ಹೇಮಂತ್‌ ಕರ್ಕರೆ ಮತ್ತು ನಾಥೂ ರಾಮ್‌ ಗೂಡ್ಸೆ ವಿಚಾರವಾಗಿಯೂ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು ಎಂದು ದೂರಿದ್ದರು.

ಮಧ್ಯ ಪ್ರದೇಶದ ಭೂಪಾಲ್‌ನಿಂದ ಸ್ಪರ್ಧಿಸಿದ್ದ ಪ್ರಜ್ಞಾ ಸಿಂಗ್‌ ಠಾಕೂರ್‌ ಅವರು ಕಾಂಗ್ರೆಸ್‌ನ ದಿಗ್ವಿಜಯ್‌ ಸಿಂಗ್‌ ಅವರ ವಿರುದ್ಧ ಸುಮಾರು 3 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ವಿಜಯ ಸಾಧಿಸಿದ್ದರು. (ಏಜೆನ್ಸೀಸ್)

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...