

ಮೈಸೂರು: ಪ್ರತಿವರ್ಷ ವಿಜೃಂಭಣೆಯಿಂದ ನಡೆಯುವ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಈ ಬಾರಿ ಸರಳವಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಸಾಂಸ್ಕೃತಿಕ ನಗರಿಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದ್ದಾರೆ.
ಇದನ್ನೂ ಓದಿ: ನೀರು ಬಿಡಿ ಇಲ್ಲವೇ ಪರಿಹಾರ ಕೊಡಿ
ಈ ಬಗ್ಗೆ ಮಾತನಾಡಿದ ಸಚಿವರು, "ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ ಕುಠಿತಗೊಂಡ ಹಿನ್ನೆಲೆ ರೈತಾಪಿ ವರ್ಗವು ತೀರ ಸಂಕಷ್ಟದಲ್ಲಿದೆ. ಈ ಕಾರಣಗಳಿಂದ 2023ರ ಮೈಸೂರು ದಸರಾ ಮಹೋತ್ಸವವನ್ನು ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸಿಲು ನಮ್ಮ ಸರ್ಕಾರ ನಿರ್ಧರಿಸಿದೆ" ಎಂದು ಹೇಳಿದರು.
ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು ಈ ಭಾರಿ ಸರಳ ದಸರಾ ಆಚರಿಸಲಿದೆ ಎಂದು ಎಚ್.ಸಿ. ಮಹದೇವಪ್ಪ ಹೇಳಿದ್ದು, ಇದರ ಕುರಿತಂತೆ ಟ್ವೀಟ್ ಕೂಡ ಮಾಡಿ ತಿಳಿಸಿದ್ದಾರೆ.