More

    ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಮತ್ತೊಮ್ಮೆ ಶಾಕ್ ನೀಡಿದ ಕೋರ್ಟ್​; ಧಾರವಾಡಕ್ಕೆ ನೋ ಎಂಟ್ರಿ

    ಬೆಂಗಳೂರು: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ವಿನಯ್​ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್​ ಶಾಕ್​ ನೀಡಿದ್ದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಎತ್ತಿ ಹಿಡಿದಿದೆ.

    ಧಾರವಾದ ಪ್ರವೇಶಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾ ಮಾಡಿದೆ. ಬಿಜೆಪಿ ಮುಖಂಡ ಯೋಗೇಸ್​ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಿಸದಂತೆ ವಿನಯ್​ ಕುಲಕರ್ಣಿಗೆ ಸುಪ್ರೀಂ ಕೋರ್ಟ್​ ಈ ಹಿಂದೆ ನಿರ್ಬಂಧ ಹೇರಿತ್ತು.

    ಅರ್ಜಿ ವಜಾ

    ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ವಿನಯ್​ ಕುಕಲರ್ಣಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ವಿನಯ್​ ಅವರ ಅರ್ಜಿಯನ್ನು ತಿರಸ್ಕರಿಸಿತ್ತು.

    Vinay Kulkarni

    ಇದನ್ನೂ ಓದಿ: ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೋರ್ಟ್​ ಶಾಕ್​: ಧಾರವಾಡಕ್ಕೆ ನೋ ಎಂಟ್ರಿ, ಅರ್ಜಿ ವಜಾ

    ಜನಪ್ರತಿನಿಧಿಗಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ವಿನಯ್​ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು ವಿನಯ್​ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಅನುಮತಿ ನಿರಾಕರಿಸುವ ಮೂಲಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿ ಹಿಡಿದಿದೆ.

    ಟಿಕೆಟ್​ ಏಕೆ ಕೊಟ್ಟಿದೆ

    ಈ ವೇಳೆ ಮಾತನಾಡಿದ ನ್ಯಾಯಾಧೀಶರು ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಧಾರವಾಡಕ್ಕೆ ಪ್ರವೇಶಿಸದಂತೆ ನಿರ್ಬಂಧಿಸಿದೆ.‌ ಹಾಗಿದ್ದಾಗ ಹೈಕಮಾಂಡ್ ಇವರಿಗೆ ಟಿಕೆಟ್ ಏಕೆ ಕೊಟ್ಟಿದೆ ಎಂದು ಅರ್ಜಿದಾರರ ಪರ ವಕೀಲರನ್ನು ಪ್ರಶ್ನಿಸಿದೆ.

    ಸುಪ್ರೀಂ ಕೋರ್ಟ್ ಕೂಡಾ ಜಾಮೀನು ಷರತ್ತು ಸಡಿಲಿಸಿಲ್ಲ ಎಂದು ಹೇಳಿ ವಿನಯ್ ಕುಲಕರ್ಣಿ ಸಲ್ಲಿಸಿದ ಎರಡೂ ಅರ್ಜಿಯನ್ನು ಹೈಕೋರ್ಟ್​ ವಜಾ ಮಾಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts