More

    ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ: ಬಿಜೆಪಿ ವಿರುದ್ಧ ಜೆಡಿಎಸ್​ ವಾಗ್ದಾಳಿ

    ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಪ್ರತಿಮೆ (Kempegowda Statue) ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ (HD Deve Gowda) ಅವರಿಗೆ ಆಹ್ವಾನ ನೀಡಿಲ್ಲ ಎಂದು ಜೆಡಿಎಸ್ ಮಾಡಿದ್ದ​ ಆರೋಪಕ್ಕೆ ಆಹ್ವಾನ ಪತ್ರದ ಮೂಲಕ ಬಿಜೆಪಿ (BJP) ತಿರುಗೇಟು ನೀಡಿತ್ತು. ಇದೀಗ ಮತ್ತೊಮ್ಮೆ ಸರಣಿ ಟ್ವೀಟ್​ ಮೂಲಕ ಬಿಜೆಪಿ ವಿರುದ್ಧ ಜೆಡಿಎಸ್ (JDS)​ ವಾಗ್ದಾಳಿ ನಡೆಸಿದೆ.

    ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಎಚ್​.ಡಿ. ದೇವೇಗೌಡರನ್ನು ಆಹ್ವಾನಿಸಿದ್ದಾರೆ ಎಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರ್ಕಾರ (BJP Govt), ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ.

    ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ (Invitation Letter) ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ. ಸರಿ, ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಎಂದು ಜೆಡಿಎಸ್​ ಪ್ರಶ್ನಿಸಿದೆ.

    ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಮಾನ್ಯ ಮುಖ್ಯಮಂತ್ರಿಗಳು ಬರೆದ ಪತ್ರವನ್ನೊಮ್ಮೆ ‘ಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ? ಮರುದಿನ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ? ಎಂದು ಜಡಿಎಸ್​ ಟೀಕಿಸಿದೆ.

    ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ಧಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ ಎಂದು ಸವಾಲು ಎಸೆದಿದ್ದಾರೆ.

    ಇನ್ನು ಕನ್ನಡ (Kannada)ದ ಅಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ, ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು? ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’, ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

    ಕುಟುಂಬ ರಾಜಕಾರಣ (Dynasty Politics) ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ? ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ? ಎಂದು ಜೆಡಿಎಸ್​ ಕಿಡಿಕಾರಿದೆ.

    ಮೋದಿ ಕಾರ್ಯಕ್ರಮಕ್ಕೆ ದೇವೇಗೌಡರನ್ನು ಕರೀಲಿಲ್ಲ ಅನ್ನೋದು ಹಸಿ ಸುಳ್ಳು! ಆಮಂತ್ರಣದ ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

    ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಜೆಡಿಎಸ್​: ಸಮಸ್ತ ಕನ್ನಡಿಗರು-ನಾಡಪ್ರಭು ಕೆಂಪೇಗೌಡರಿಗೂ ಅವಮಾನಿಸಿದ ಬಿಜೆಪಿ…

    ಪುಷ್ಪ ಚಿತ್ರದ​ ಕಲೆಕ್ಷನ್​​ ರೆಕಾರ್ಡ್​ ಬ್ರೇಕ್ ಮಾಡಿದ ಕಾಂತಾರ: ಪುಷ್ಪರಾಜ್ ಎದುರು ಗೆದ್ದು ಬೀಗಿದ ಡಿವೈನ್​​​​ ಸ್ಟಾರ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts