ಬಿಜೆಪಿಯನ್ನು ದೂರವಿಡಲು ಅಗತ್ಯವಿರುವೆಡೆ ಕಾಂಗ್ರೆಸ್​-ಜೆಡಿಎಸ್​ ಮೈತ್ರಿ: ದೇವೇಗೌಡ

ಚಿಕ್ಕಮಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದೆ. ಅಗತ್ಯವಿರುವೆಡೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುತ್ತೇವೆ ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಹೇಳಿದ್ದಾರೆ.

ಚಿಕ್ಕಮಗಳೂರಿನ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ಇಂದು ನಡೆದ ವೈ.ಎಸ್​.ವಿ. ದತ್ತಾ ಅವರ ಪತ್ನಿ ದಿ. ನಿರ್ಮಲಾ ಅವರ ತರ್ಪಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೇವೇಗೌಡ ಅವರು, ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಚಿಕ್ಕಮಗಳೂರಿನ ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿ ಇಂದು ನಡೆದ ವೈ.ಎಸ್​.ವಿ. ದತ್ತಾ ಅವರ ಪತ್ನಿ ದಿ. ನಿರ್ಮಲಾ ಅವರ ತರ್ಪಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ದೇವೇಗೌಡ

“ರಾಜ್ಯದಲ್ಲಿ ಜೆಡಿಎಸ್​ ಮತ್ತು ಕಾಂಗ್ರೆಸ್​ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. ಈ ಸನ್ನಿವೇಶದಲ್ಲಿ ಅತಂತ್ರ ಪರಿಸ್ಥಿತಿ ಏರ್ಪಟ್ಟಿರುವ ಕಡೆಗಳಲ್ಲಿ ಅಗತ್ಯವಿದ್ದಲ್ಲಿ ಮೈತ್ರಿ ಮಾಡಿಕೊಳ್ಳುವ ಮುಖೇನ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲಾಗುವುದು,” ಎಂದರು.

ಹಾಸನ ನಗರದಲ್ಲಿ ಬಿಜೆಪಿ ಗಮನಾರ್ಹ ಸಾಧನೆ ಮಾಡಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಅವರು ಎಷ್ಟು ಸ್ಥಾನಗಳಿಗೆ ಎಷ್ಟು ಸ್ಥಾನಗಳಿಸಿದೆ ಎಂದು ಪ್ರಶ್ನಿಸಿದರು. ಹಾಸನ ನಗರವನ್ನು ನೋಡುವುದನ್ನು ಬಿಟ್ಟು ಇಡೀ ಜಿಲ್ಲೆಯಲ್ಲಿ ಜೆಡಿಎಸ್​ ಮಾಡಿರುವ ಸಾಧನೆಯನ್ನು ನೋಡಿ ಎಂದು ತಿಳಿಸಿದರು. ಅಲ್ಲದೆ, ಒಟ್ಟಾರೆ ಫಲಿತಾಂಶದ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.