More

    ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಜಿ ಪ್ರಧಾನಿ

    ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರು ಭಾಗವಹಿಸಿದ್ದಾರೆ. ಸಂಸತ್ ಭವನ ಉದ್ಘಾಟನೆಯನ್ನು ವಿಪಕ್ಷಗಳು ಬಹಿಷ್ಕರಿಸಿದ್ದವು. ಈ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಮಾತನಾಡುತ್ತಾ, ನಾನು ಖಂಡಿತವಾಗಿಯೂ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದ್ದರು. ಅದರಂತೆ ಇಂದು ಮಾಜಿ ಪ್ರಧಾನಿ ನೂತನ ಸಂಸತ್​ನಲ್ಲಿ ಉಪಸ್ಥಿತರಿದ್ದರು.

    ಇದನ್ನೂ ಓದಿ: ನೂತನ ಸಂಸತ್ ಭವನ ಉದ್ಘಾಟನೆ; ಫೋಟೋ ಝಲಕ್​ ಇಲ್ಲಿದೆ…

    ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಬಳಿಕ ಪವಿತ್ರ ರಾಜದಂಡದೊಂದಿಗೆ ಮೋದಿ ಅವರು ನಾದಸ್ವರ ಮತ್ತು ವೇದ ಮಂತ್ರಗಳ ಪಠಣಗಳ ನಡುವೆ ಮೆರವಣಿಗೆಯಲ್ಲಿ ಹೊಸ ಸಂಸತ್ ಭವನಕ್ಕೆ ಸೆಂಗೋಲ್ ಅನ್ನು ಕೊಂಡೊಯ್ದರು.

    ಕೊಡಗು-ಮೈಸೂರು ಸಂಸದ ಪ್ರತಾಪ್ ಸಿಂಹ ನೂತನ ಸಂಸತ್​ ಭವನದಲ್ಲಿ ಮಾಜಿ ಎಚ್​.ಡಿ.ದೇವೇಗೌಡ ಅವರನ್ನು ಭೇಟಿಯಾಗಿದ್ದಾರೆ. ಈ ಬಗ್ಗೆ ಫೋಟೋ ಹಂಚಿಕೊಂಡು ಸಂತಸ ವ್ಯಕ್ತಪಡಿಸಿರುವ ಪ್ರತಾಪ್ ಸಿಂಹ, ಹೊಸ ಸಂಸತ್ ಭವನದ ಉದ್ಘಾಟನೆ ಸಂದರ್ಭದಲ್ಲಿ ಹಿರಿಯ ಚೇತನ, ಮಾಜಿ ಪ್ರಧಾನಿ ದೇವೇಗೌಡರಿಂದ ಆಶೀರ್ವಾದ ಪಡೆದುಕೊಂಡೆ ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

    ಸಂಸತ್ ಭವನ ಉದ್ಘಾಟನೆಗೆ ಹೋಗದೆ ಇರಲು ಅದೇನು ಬಿಜೆಪಿ, ಆರೆಸ್ಸೆಸ್ ಕಚೇರಿಯೇ?

    ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹಾಜರಾಗುತ್ತಿದ್ದೇನೆ. ಅದು ದೇಶದ ಆಸ್ತಿ. ಯಾರೊಬ್ಬರ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ್ದು ಅದಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಹೇಳಿದ್ದರು.

    ಇದನ್ನೂ ಓದಿ: ಸಂಸತ್ ಭವನ ಉದ್ಘಾಟನೆಯನ್ನು ‘ಪಟ್ಟಾಭಿಷೇಕ’ ಎಂದು ಪರಿಗಣಿಸಿದ ಪ್ರಧಾನಿ: ಕಿಡಿಕಾರಿದ ರಾಹುಲ್ ಗಾಂಧಿ

    ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ. ಅದು ಅವರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ. ಆ ಭವ್ಯ ಕಟ್ಟಡ ದೇಶದ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ. ಅದು ದೇಶಕ್ಕೆ ಸೇರಿದ್ದು. ಅದು ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ. ಸಂಸತ್ ಭವನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಓರ್ವ ಮಾಜಿ ಪ್ರಧಾನಿಯಾಗಿ, ದೇಶದ ಪ್ರಜೆಯಾಗಿ ಭಾಗಿಯಾಗುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದರು.

    ಬಹಿಷ್ಕಾರ ಹೇರಿದ ವಿಪಕ್ಷಗಳು

    ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೆ ಅವರನ್ನು ಅವಮಾನಿಸಲಾಗಿದೆ ಎಂದು ಪ್ರತಿಪಕ್ಷಗಳು ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿದ್ದವು. ನೂತನ ಸಂಸತ್​ ಭವನವನ್ನು ರಾಷ್ಟ್ರೀಯ ಜನತಾ ದಳ (ಆರ್​ಜೆಡಿ)ವು ಶವಪೆಟ್ಟಿಗೆ ಹೋಲಿಸುವ ಮೂಲಕ ಮೂಲಕ ಮತ್ತೊಂದು ವಿವಾದವನ್ನು ಹುಟ್ಟುಹಾಕಿದೆ. ಆರ್​ಜೆಡಿ ಹೇಳಿಕೆ ದೇಶದ್ರೋಹದ ಹೇಳಿಕೆ ಎಂದು ಬಿಜೆಪಿ ಹೇಳಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts