More

    ನರೇಂದ್ರ ಮೋದಿ ಜೊತೆ ಹೋದಾಗಲೂ ಪಕ್ಷದ ಶಾಲು ಹಾಕುತ್ತೇನೆ; ಎಚ್​ಡಿಕೆ ವಿರುದ್ಧ ಅಸಮಾಧಾನ ಹೊರಹಾಕಿದ ಎಚ್​ಡಿಡಿ

    ನವದೆಹಲಿ: ಮಂಡ್ಯ ತಾಲ್ಲೂಕಿನ ಕೆರೆಗೋಡು ಗ್ರಾಮದಲ್ಲಿ ಹನು ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ವೇಳೆ ಜೆಡಿಎಸ್​ ರಾಜ್ಯಾಧ್ಯಕ್ಷ ಎಚ್​.ಡಿ. ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಮಾಜಿ ಪ್ರಧಾನಿ ಎಚ್​ಡಿಡಿ ಕೇಸರಿ ಬದಲು ನಮ್ಮ ಪಕ್ಷದ ಶಾಲನ್ನು ಧರಿಸಬಹುದಿತ್ತು ನಾನು ಮಾತ್ರ ಎಲ್ಲೇ ಹೋದರೂ ನಮ್ಮ ಪಕ್ಷದ ಶಾಲನ್ನು ಧರಿಸುತ್ತೇನೆ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಪ್ರತ್ಯೇಕ ರಾಷ್ಟ್ರದ ಕುರಿತು ಹೇಳಿಕೆ; ಯಾರೇ ಆದರೂ ದೇಶ ಒಡೆಯುವ ಮಾತು ಸಹಿಸಲ್ಲ: ಮಲ್ಲಿಕಾರ್ಜುನ ಖರ್ಗೆ

    ಕುಮಾರಸ್ವಾಮಿ ಕೇಸರಿ ಶಾಲು ಧರಿಸಬಾರದಿತ್ತು. ಕೇಸರಿ ಬದಲು ನಮ್ಮ ಪಕ್ಷದ ಶಾಲು ಧರಿಸಬಹುದಿತ್ತು. ನಾಳೆ ನರೇಂದ್ರ ಮೋದಿ ಜೊತೆಗೆ ಹೋದಾಗಲೂ ನನ್ನ ಪಕ್ಷದ ಶಾಲು ಹಾಕುತ್ತೇನೆ. ನಾನು ಖಂಡಿತವಾಗಿ ಕೇಸರಿ ಶಾಲು ಹಾಕುವುದಿಲ್ಲ. ಪ್ರತಿಭಟನೆಯ ವೇಳೆ ಯಾರೋ ಬಂದು ಕೇಸರಿ ಶಾಲು ಹಾಕಿರುತ್ತಾರೆ. ಆಯಾ ಸಂದರ್ಭಕ್ಕೆ ಹಾಕಿರುತ್ತಾರೆ, ದೊಡ್ಡ ವ್ಯಾಖ್ಯಾನ ಮಾಡುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಹೇಳಿದ್ದಾರೆ.

    ಸಂಸದ ಡಿ.ಕೆ ಸುರೇಶ್ ಅವರ ʻಪ್ರತ್ಯೇಕ ರಾಷ್ಟ್ರʼದ ಹೇಳಿಕೆ ಸಂಬಂಧ ಮಾತನಾಡಿ, ಡಿ.ಕೆ ಸುರೇಶ್ ಅವರು ಪ್ರತ್ಯೇಕ ರಾಷ್ಟ್ರ ಮಾಡುವ ಬಗ್ಗೆ ಮಾತನಾಡಿದ್ದಾರೆ, ಯಾವ ಉದ್ದೇಶದಲ್ಲಿ ಮಾತನಾಡಿದ್ದಾರೆ ಗೊತ್ತಿಲ್ಲ. ಈ ವಿಷಯದಲ್ಲಿ ಮಾತನಾಡುವುದಕ್ಕೆ ನನಗೆ ಇಷ್ಟವಿಲ್ಲ ಅವರು ವ್ಯಕ್ತಿಗತವಾಗಿ ಹೇಳಿರಬಹುದು, ಅದು ಪಕ್ಷದ ನಿರ್ಣಯ ಅಲ್ಲ ಎಂದು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ ಪ್ರತಿಕ್ರಿಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts