

ರಾಯಚೂರು: ಈ ಬಾರಿಯ ಉಪ ಚುನಾವಣೆಗಳಿಗೆ ಜೆಡಿಎಸ್ನಿಂದ ಅಭ್ಯರ್ಥಿಗಳನ್ನು ಹಾಕುತ್ತಿಲ್ಲ, ನಮ್ಮ ಬಳಿ ಚುನಾವಣೆಗೆ ಹಣ ಇಲ್ಲ. ಬೆಳಗಾವಿ ಲೋಕಸಭಾ, ಮಸ್ಕಿ, ಸಿಂದಗಿ ಹಾಗೂ ಬಸವ ಕಲ್ಯಾಣ ಕ್ಷೇತ್ರಗಳ ಬೈ ಎಲೆಕ್ಷನ್ಗೆ ಜೆಡಿಎಸ್ ಸ್ಪರ್ಧಿಸಲ್ಲ ಎಂದು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವೇಗೌಡ, 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ತಳಮಟ್ಟದಿಂದ ಪಕ್ಷ ಸಂಘಟಿಸುವಲ್ಲಿ ನಿರತನಾಗಿದ್ದೇನೆ. ಕುಮಾರಸ್ವಾಮಿ ಸರ್ಕಾರ ಮುಗಿದ ಮೇಲೆ ನಾನ್ಯಾರಿಗೂ ನಿಂದನೆ ಮಾಡಿಲ್ಲ. ಪಕ್ಷ ಕಟ್ಟುವುದರಲ್ಲೇ ಸಂಪೂರ್ಣ ಭಾಗಿಯಾಗ್ತೇನೆ. ಅಸ್ಥಿರತೆಗೆ ನಾನು ಅವಕಾಶ ನೀಡಲ್ಲ ಎಂದರು. ಇದನ್ನೂ ಓದಿರಿ ತಾಲೂಕು ಪಂಚಾಯಿತಿಯನ್ನೇ ರದ್ದು ಮಾಡಲು ಸಿದ್ಧತೆ! ಕರ್ನಾಟಕದಲ್ಲಿ ಜಿಪಂ, ಗ್ರಾಪಂ ಮಾತ್ರ ಇರುತ್ತೆ…
ಇನ್ನು ನಾಳೆ ಬೆಳಗ್ಗೆ ದೆಹಲಿಗೆ ಹೋಗಿ ಬಜೆಟ್ ಚರ್ಚೆಯಲ್ಲಿ ಪಾಲ್ಗೊಳ್ಳುವುದಿದೆ. ದೇವದುರ್ಗದ ಗಾಣಧಾಳ ಗ್ರಾಮದಲ್ಲಿ ರೈತನೊಬ್ಬ 2 ಗುಂಟೆ ಜಮೀನಿನಲ್ಲಿ ಎಚ್ಡಿಡಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಅವರ ಮನೆಗೆ ಭೇಟಿ ನೀಡುವುದಿದೆ ಎಂದರು.