ಮಂಚದ ಮೇಲೆ ನೇಣಿಗೆ ಶರಣಾದ ಮಹಿಳೆ! ಗಂಡನೇ ಕೊಲೆ ಮಾಡಿರುವ ಶಂಕೆ

mysuru
Published on

ಮೈಸೂರು: ಮದುವೆಯಾಗಿ ವೈವಾಹಿಕ ಜೀವನ ನಡೆಸುತ್ತಿದ್ದ ಹೆಣ್ಣು ಮಗಳೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಕೈಲಾಸಪುರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಯ ಹಿಂದೆ ಗಂಡನ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.

ಬಿಂದು (24) ಆತ್ಮಹತ್ಯೆಗೆ ಶರಣಾದ ಮಹಿಳೆ. ಪತ್ನಿಯ ಸಾವಿನ ಮಾಹಿತಿಯನ್ನು ಗಂಡ ಚೇತನ್​ ಪೊಲೀಸರಿಗೆ ನೀಡಿದ್ದಾನೆ. ಆತನೇ ಆಕೆಯನ್ನು ಕೊಲೆ ಮಾಡಿ ನೇಣು ಬಿಗಿದಿದ್ದಾನೆ ಎಂದು ಮಹಿಳೆಯ ಪೋಷಕರು ಆರೋಪಿಸಿದ್ದಾರೆ. ಮನೆಯಲ್ಲಿದ್ದ ಮಂಚದ ಮೇಲೆ ನಿಂತ ಸ್ಥಿತಿಯಲ್ಲೇ ಆಕೆ ಸಾವನ್ನಪ್ಪಿದ್ದು ಅನೇಕ ಅನುಮಾನಗಳು ಹುಟ್ಟಿಕೊಂಡಿವೆ. ಈ ಕುರಿತಾಗಿ ಎಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.

ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net