ಎಚ್.ಡಿ.ಕೋಟೆಯಲ್ಲಿ ವೈದ್ಯರ ಮುಷ್ಕರ

ಎಚ್.ಡಿ.ಕೋಟೆ: ಕೋಲ್ಕತದಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘವು ಸೋಮವಾರ ದೇಶಾದ್ಯಂತ ಕರೆ ನೀಡಿದ್ದ ಮುಷ್ಕರ ಬೆಂಬಲಿಸಿ ತಾಲೂಕಿನ ವೈದ್ಯರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ತಾಲೂಕಿನ ಎಲ್ಲ ಆಸ್ಪತ್ರೆಗಳಲ್ಲಿಯೂ ವೈದ್ಯರು ಕಪ್ಪು ಪಟ್ಟಿ ಧರಿಸಿ ಸೇವೆ ಮಾಡಿ ನಂತರ ಮಿನಿವಿಧಾನಸೌಧಕ್ಕೆ ಆಗಮಿಸಿ ತಹಸೀಲ್ದಾರ್ ಆರ್.ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು.

ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ಮಾತನಾಡಿ, ನಿತ್ಯವೂ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ವೈದ್ಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕೋಲ್ಕತದ ಎನ್.ಆರ್.ಎನ್.ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ನಡೆದಿರುವ ಹಲ್ಲೆ ಖಂಡನೀಯ. ವೈದ್ಯರು ಭಯದ ವಾತಾವರಣದಲ್ಲಿ ಸೇವೆ ಮಾಡುವಂತಾಗಿದೆ. ಇದು ನಿಲ್ಲಬೇಕು. ಕರ್ತವ್ಯನಿರತ ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.

ವೈದ್ಯರಾದ ಡಾ.ಉದಯಕಮಾರ್, ದಿನಕರ್, ವೀಣಾ, ಕಿರಣ್ ಕುಮಾರ್, ಶ್ರೀನಿವಾಸ ಮೂರ್ತಿ, ಷರೀಫ್ ಹಿಲ್ಡಾ, ಜ್ಯೋತಿ ಇತರರು ಇದ್ದರು.

Leave a Reply

Your email address will not be published. Required fields are marked *