ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಸ್ಥಾನ ಪಡೆದಿದ್ದಾರೆ.
ಸಮಿತಿಯಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್, ಗೃಹ ಸಚಿವ ಅಮಿತ್ ಶಾ,ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿದೇಶಾಂಗ ಸಚಿವ ಜೈ ಶಂಕರ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಾಣಿಜ್ಯ ಸಚಿವ ಪಿಯೂಶ್ ಗೋಯಲ್, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪಂಚಾಯತ್ ರಾಜ್ ಮತ್ತು ಮೀನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ಇದ್ದಾರೆ.
ಭದ್ರತೆ, ಆರ್ಥಿಕ ಮತ್ತು ರಾಜಕೀಯ ವ್ಯವಹಾರಗಳ ಕುರಿತಂತೆ ದೇಶದ ಅತ್ಯುನ್ನತ ಮಟ್ಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಎಂಟು ವಿವಿಧ ಸಂಪುಟ ಸಮಿತಿಗಳನ್ನು ಮೋದಿ ಸರ್ಕಾರ ರಚನೆ ಮಾಡಿದೆ.