20.4 C
Bangalore
Monday, December 9, 2019

ಅರ್ಧ ವರ್ಷ ಇಲ್ಲ ಹರ್ಷ

Latest News

ಬೈ ಎಲೆಕ್ಷನ್ ರಿಸಲ್ಟ್​| ವಿಜಯನಗರ ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದಾರೆ ಬಿಜೆಪಿಯ ಆನಂದ್ ಸಿಂಗ್​…

ಬಳ್ಳಾರಿ: ಗಣಿನಾಡಿನ ವಿಜಯನಗರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು, ಮೊದಲ ಸುತ್ತಿನ ಮತ ಎಣಿಕೆ ಮುಗಿದಾಗ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ...

ಮೊದಲ ಸುತ್ತಿನ ಮತಎಣಿಕೆ: ಹೊಸಕೋಟೆಯಲ್ಲಿ ಪಕ್ಷೇತರ ಶರತ್​ ಬಚ್ಚೇಗೌಡ, ಯಶವಂತಪುರದಲ್ಲಿ ಜೆಡಿಎಸ್​ ಜವರಾಯಿಗೌಡ ಮುನ್ನಡೆ

ಬೆಂಗಳೂರು: ಹೊಸಕೋಟೆ ವಿಧಾನಸಭಾ ಹಾಗೂ ಯಶವಂತಪುರ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತಎಣಿಕೆ ಪಕ್ರಿಯೆ ಮುಗಿದಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್​ ವಿರುದ್ಧ ಪಕ್ಷೇತರ...

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ರಾಣೇಬೆನ್ನೂರಿನಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...
<< ಎಚ್​ಡಿಕೆ ರಾಜ್ಯಭಾರದ ಸಿಕ್ಸರ್ >>

ಬೆಂಗಳೂರು: ಹನ್ನೆರಡು ವರ್ಷದ ಹಿಂದೆ ಅಚಾನಕ್ಕಾಗಿ ಸಿಎಂ ಆಗಿದ್ದಾಗಿನ ವರ್ಚಸ್ವೀ ಅಧ್ಯಾಯವನ್ನೇ ಮುಂದುವರಿಸಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಡೆಸುತ್ತಿರುವ ಕಸರತ್ತು ಆರು ತಿಂಗಳು ಪೂರೈಸಿದೆ.

ಸರ್ಕಾರ ಇನ್ನೇನು ಎರಡೇ ದಿನದಲ್ಲಿ, ಒಂದೇ ವಾರದಲ್ಲಿ ಬಿದ್ದು ಹೋಗುತ್ತದೆ ಎನ್ನುವ ಮಾತಿನ ನಡುವೆಯೇ 45 ಸಾವಿರ ಕೋಟಿ ರೂಪಾಯಿ ಮೊತ್ತದ ಬೃಹತ್ ಸಾಲಮನ್ನಾ ಯೋಜನೆಯನ್ನು ಸಾಕಾರಗೊಳಿಸಲು ನಿರಂತರ ಪ್ರಯತ್ನ ನಡೆದೇ ಇದೆ.

ರಾಜ್ಯದ ರೈತರ, ಬಡವರ, ಕಾರ್ವಿುಕರ, ಮಹಿಳೆಯರ ಎಲ್ಲ ಸಮಸ್ಯೆ ಬಗೆಹರಿಸುತ್ತೇನೆ, ಸಾಲಮನ್ನಾ ಮಾಡುತ್ತೇನೆ ಎನ್ನುತ್ತ ರಾಜ್ಯ ಬಜೆಟ್​ನ ಸರಿಸುಮಾರು ಶೇ.25ರಷ್ಟು ಬೃಹತ್ ಮೊತ್ತದ ಸಾಲಮನ್ನಾ ಘೋಷಣೆಯನ್ನೂ ಮಾಡಿದ್ದಾರೆ. ಇನ್ನೂ ಈಗಷ್ಟೇ ಅಧಿಕಾರಕ್ಕೆ ಬಂದಿದ್ದೇನೆ ಸಮಯಾವಕಾಶ ನೀಡಿ ಎನ್ನುತ್ತಲೇ ಉತ್ತರ ಕರ್ನಾಟಕ ವಿರೋಧಿ ಹಣೆಪಟ್ಟಿ ಜತೆಗೆ ಇತ್ತೀಚೆಗಷ್ಟೆ ಕಬ್ಬು ಬೆಳೆಗಾರರ ಆಕ್ರೋಶಕ್ಕೂ ಸಿಎಂ ಈಡಾಗಿದ್ದಾರೆ.

ಜನತಾ ದರ್ಶನದಲ್ಲಿ ಅಂಗವಿಕಲರು, ಮಹಿಳೆಯರು, ಬಡವರ ಅಹವಾಲನ್ನು ಗಂಟೆಗಟ್ಟಲೆ ನಿಂತೇ ಕೇಳುವ ತಾಳ್ಮೆ, ಅಧಿಕಾರಿಗಳ ಜಡ್ಡುಗಟ್ಟಿದ ಸ್ವಭಾವವನ್ನು ತಿದ್ದಿ ಹೊಸ ಯುಗಕ್ಕೆ ಸಜ್ಜುಗೊಳಿಸುವ, ಸರ್ಕಾರದ ವ್ಯವಸ್ಥೆಯನ್ನು ಆಳವಾಗಿ ಅಧ್ಯಯನ ನಡೆಸುವ ಸಿಎಂ ಕುಮಾರಸ್ವಾಮಿ ನಡೆ, ‘ಸಾಲಮನ್ನಾ ಆಗಿಲ್ಲ’ ಎಂಬ ಪ್ರವಾಹದ ಎದುರು ಗೌಣವಾಗಿರುವುದಂತೂ ಸತ್ಯ. ತಾನು ಪ್ರಾಮಾಣಿಕವಾಗಿ, ಆಗಿಂದಾಗ್ಗೆ ಎದುರಾಗುವ ಅನಾರೋಗ್ಯವನ್ನೂ ಲೆಕ್ಕಿಸದೆ ಕೆಲಸ ಮಾಡುತ್ತಿದ್ದರೂ ಕೆಲವರ ರಾಜಕೀಯ ನಡೆಗಳು, ಯಾವುದೇ ಯೋಜನೆಗಳು ಜನರ ಮನಸ್ಸು ತಟ್ಟುವಷ್ಟು ಹರಳುಗಟ್ಟದೆ ಇರುವುದು ಸಹಜವಾಗಿ ಸಿಎಂ ತಾಳ್ಮೆಗೆಡಿಸಿದ್ದು, ಆಗಿಂದಾಗ್ಗೆ ಬಹಿರಂಗವಾಗಿಯೇ ರೈತರು, ಹೋರಾಟಗಾರರು, ಪ್ರತಿಪಕ್ಷಗಳು, ಮಾಧ್ಯಮಗಳ ವಿರುದ್ಧ ಸ್ಪೋಟಗೊಳ್ಳುತ್ತಲೇ ಸಾಗಿದೆ.

ಈ ನಡುವೆ ಟಿಪ್ಪು  ಜಯಂತಿ ವಿವಾದ, ಸರ್ಕಾರದ ಒತ್ತಡವನ್ನು ನಿಭಾಯಿಸಲಾಗದೆ ಅನವಶ್ಯಕವಾಗಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನವನ್ನು ಬರೊಬ್ಬರಿ ಒಂದು ತಿಂಗಳು ಮುಂದೂಡಿದ್ದು, ಖಾತೆಯೇ ಬೇಡವೆನ್ನುವ ಸಚಿವರು, ಸಂಪುಟಕ್ಕೇ ಗೈರಾಗುವ ಸಹೋದ್ಯೋಗಿ ಸೇರಿ ಅನೇಕ ವಿಷಯಗಳಲ್ಲಿ ದೃಢ ನಿರ್ಧಾರ ಕೈಗೊಳ್ಳುವಲ್ಲಿ ಸರ್ಕಾರ ಹಿಂದೆ ಬಿದ್ದಿದೆ. ಬಜೆಟ್​ನಲ್ಲಿ ಘೋಷಿಸಿ ಈಗಾಗಲೆ ಸಣ್ಣ ಪ್ರಮಾಣದಲ್ಲಿ ಚಾಲನೆ ಪಡೆದಿರುವ ಇಸ್ರೇಲ್ ಮಾದರಿ ಕೃಷಿ, ಶೂನ್ಯ ಬಂಡವಾಳ ಕೃಷಿ ಪ್ರಾಯೋಗಿಕ ಜಾರಿ, ಆರು ತಿಂಗಳಿನ ಸಮೀಪದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಘೋಷಿಸಿದ ಬಡವರ ಬಂಧು ಕಾರ್ಯಕ್ರಮ, ಸ್ತ್ರೀಯರಿಗೆ ಸಾಲ ನೀಡಲು ಡಿಸೆಂಬರ್​ನಲ್ಲಿ ಘೋಷಣೆಯಾಗಲಿರುವ ಕಾಯಕ ಯೋಜನೆಗಳು ಹರಳುಗಟ್ಟಿ, ಸಿಎಂ ಶ್ರಮಕ್ಕೆ ತಕ್ಕ ಫಲ ಹಾಗೂ ಸರ್ಕಾರದ ಮೇಲಿನ ನಕಾರಾತ್ಮಕತೆಯನ್ನು ತೊಡೆಯುತ್ತದೆಯೇ ಕಾದುನೋಡಬೇಕು.

ತಿಂಗಳಿನ್ನೂ ಆರು ಸಮಸ್ಯೆ ನೂರಾರು

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...