ಮುಖ್ಯಮಂತ್ರಿ ಕುಮಾರಸ್ವಾಮಿ ಹ್ಯಾಪಿ ಆಗಿದ್ದಾರೆ: ಪರಮೇಶ್ವರ್‌

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಖುಷಿಯಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಪರಮೇಶ್ವರ್‌ ಹೇಳಿದ್ದಾರೆ.

ನಾನು ಸಿಎಂ ಆಗಿ ಖುಷಿಯಾಗಿಲ್ಲ ಎಂದು ಎಚ್‌ ಡಿ ಕುಮಾರಸ್ವಾಮಿ ಹೇಳಿದ್ದ ವಿಚಾರಕ್ಕೆ ಪ್ರತಿಕ್ರಿಯಿಸಿ, ಹಾಗೇನೂ ಇಲ್ಲವಲ್ಲಾ, ಸಿಎಂ ಹ್ಯಾಪಿಯಾಗಿದ್ದಾರೆ ಎಂದಿದ್ದಾರೆ.

ಕಾಂಗ್ರೆಸ್ ಸರ್ಕಾರದ ಎಲ್ಲ ಯೋಜನೆಗಳು ಮುಂದುವರಿಯುತ್ತೆ ಅದರಲ್ಲಿ ಯಾವುದೇ ಅನುಮಾನವಿಲ್ಲ. ಅಕ್ಕಿ ಪ್ರಮಾಣವನ್ನು ಏಳು ಕೆಜಿಗೆ ಏರಿಸುವ ಬಗ್ಗೆ ಕ್ರಮಕೈಗೊಳ್ಳುವುದಾಗಿ ಸಿಎಂ ಹೇಳಿದ್ದಾರೆ. ಸಿಎಂ ಮೇಲೆ ಯಾವುದೇ ಒತ್ತಡ ಇಲ್ಲ. ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದರು ಅಷ್ಟೆ ಎಂದು ತಿಳಿಸಿದ್ದಾರೆ.

ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ನೇಮಕ ವಿಚಾರಕ್ಕೆ ಇದೇ 18 ರಂದು ದೆಹಲಿಗೆ ತೆರಳುತ್ತಿದ್ದು, ಹೈಕಮಾಂಡ್ ಭೇಟಿ ಮಾಡಿ ತೀರ್ಮಾನಿಸಲಾಗುತ್ತದೆ. ಈಗಾಗಲೇ ಜೆಡಿಎಸ್, ಕಾಂಗ್ರೆಸ್‌ಗೆ ನಿಗಮ ಹಂಚಿಕೆ ಮಾಡಿಕೊಂಡಿದ್ದೇವೆ. ಆದರೆ ಯಾರಿಗೆ ನೀಡಬೇಕು ಎನ್ನುವುದರ ಬಗ್ಗೆ ತೀರ್ಮಾನವಾಗಬೇಕಿದೆ ಎಂದರು.

ಬೀದರ್‌ನಲ್ಲಿ ನಡೆದ ಹೆಣ್ಣುಮಕ್ಕಳ ಹಾಗೂ ಮಕ್ಕಳ ಅಪಹರಣ‌ ಹಾಗೂ ಹಲ್ಲೆ ಪ್ರಕರಣದ ವಿಚಾರ ಗಂಭೀರವಾಗಿದ್ದು, ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.