ಕರೊನಾದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕೇರಳ ಸರ್ಕಾರದ ನಡೆ ನಮಗೆ ಮಾದರಿಯಾಗಬಾರದೇಕೆ?: ಮಾಜಿ ಸಿಎಂ ಎಚ್​ಡಿಕೆ

blank

ಬೆಂಗಳೂರು: ಕರೊನಾ ವೈರಸ್​ನಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಕೇರಳ ಸರ್ಕಾರ ತೆಗೆದುಕೊಂಡಿರುವ ಕ್ರಮಗಳು ನಮಗೇಕೆ ಮಾದರಿಯಾಗಬಾರದು ಎಂದು ಮಾಜಿ ಮುಖ್ಯಮಂತ್ರಿ ಎಚ್​. ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಸರಣಿ ಟ್ವೀಟ್​ ಮಾಡಿರುವ ಎಚ್​ಡಿಕೆ, ಕರೊನಾ ವೈರಸ್​ನಿಂದ ಹದಗೆಟ್ಟಿರುವ ಆರ್ಥಿಕತೆಗೆ ಚೈತನ್ಯ ನೀಡಲು ಕೇರಳ ಅಲ್ಲಿನ ಜನರಿಗೆ 20,000 ಕೋಟಿ ರೂ. ಪ್ಯಾಕೇಜ್ ಘೋಷಿಸಿದೆ. ಇದರಲ್ಲಿ, ಆರೋಗ್ಯ ಸೇವೆ, ಸಾಲಕ್ಕೆ ನೆರವು, ಮಾಸಾಶನ, ನರೇಗಾಗೆ ಅನುದಾನ, ಉಚಿತ ದಿನಸಿ, ಕಡಿಮೆ ದರದಲ್ಲಿ ಊಟ, ಬಾಕಿ ಮರುಪಾವತಿ ಹಾಗೂ ಪರಿಹಾರ ಮೊತ್ತಗಳು ಸೇರಿವೆ. ಕೇರಳದ ಈ ನಡೆ ನಮಗೆ ಮಾದರಿಯಾಗಬಾರದೇಕೆ? ಎಂದಿದ್ದಾರೆ.

ಕೇರಳದಲ್ಲಿ 26 ಕರೊನಾ ಪ್ರಕರಣ ವರದಿಯಾಗಿದ್ದರೆ, ಕರ್ನಾಟಕದಲ್ಲಿ 15 ಪ್ರಕರಣಗಳು ವರದಿಯಾಗಿವೆ. ಅಂದರೆ ರಾಜ್ಯದಲ್ಲಿ ಮಹಾಮಾರಿಯ ಬಗೆಗಿನ ಆತಂಕ, ಭೀತಿ ಕೇರಳಕ್ಕಿಂತಲೂ ಭಿನ್ನವೇನಲ್ಲ. ಇದು ರಾಜ್ಯದ ಆರ್ಥಿಕತೆಗೂ ಪೆಟ್ಟು ನೀಡುತ್ತಿದೆ. ಸದ್ಯ ಬಡ ವರ್ಗದ ಮೇಲೆ ಇದು ನೇರ ಪರಿಣಾಮ ಬೀರುತ್ತಿದೆ. ರಾಜ್ಯವೂ ಕೇರಳ ಮಾದರಿಯ ನಿರ್ಧಾರಕ್ಕೆ ಬರಬೇಕು ಎಂದು ಒತ್ತಾಯಿಸಿದ್ದಾರೆ.

ಆರೋಗ್ಯ ಸೇವೆಗೆ ಹೆಚ್ಚಿನ ಹಣ, ಬ್ಯಾಂಕ್ ಸಾಲಗಳ ತಿಂಗಳ ಕಂತು ಮುಂದೂಡಿಕೆ, ಬಡ್ಡಿ ಮನ್ನ, ಮಾಸಾಶನ, ನರೇಗಾಗೆ ಅನುದಾನ, ಪರಿಹಾರ ಘೋಷಣೆಯಂಥಹ ನಿರ್ಧಾರಗಳನ್ನು ನಾವೂ ಕೈಗೊಳ್ಳಬೇಕು. ಆರ್ಥಿಕ ದುರ್ಬಲರಿಗೆ ನೆರವಾಗುವ ಮೂಲಕ‌ ಆರ್ಥಿಕತೆಗೆ ಚೈತನ್ಯ ತುಂಬಬೇಕು. ಜತೆಗೆ ಕರೊನಾ ವೈರಸ್ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕು ಎಂದು ಸಲಹೆ ನೀಡಿದ್ದಾರೆ.

ಕರೊನಾ ವೈರಸ್​ನಿಂದ ಎದುರಾದ ನಿರ್ಬಂಧಗಳಿಂದಾಗಿ ದಿನಗೂಲಿ ನೌಕರರು, ಬೀದಿ ಬದಿ ವ್ಯಾಪಾರಿಗಳು ಹೆಚ್ಚು ಬಾಧಿತರಾಗಿದ್ದಾರೆ. 2 ತಿಂಗಳ ಅವರ ಬದುಕಿಗೆ ನೆರವಾಗುವಂತೆ ಸರ್ಕಾರ ಕಾರ್ಯಕ್ರಮ ರೂಪಿಸಬೇಕು. ಆಟೋ, ಕ್ಯಾಬ್ ಚಾಲಕರ ಬ್ಯಾಂಕ್ ಲೋನ್ ಕಂತು ಪಾವತಿಗೆ 2 ತಿಂಗಳ ವಿನಾಯಿತಿ ಕಲ್ಪಿಸಬೇಕು. ಈ ಮೂಲಕ ಸರ್ಕಾರ ಬಡವರ ಪರ ನಿಲುವು ತಾಳಬೇಕು ಎಂದು ಸರ್ಕಾರವನ್ನು ಕೇಳಿದ್ದಾರೆ.

ಕರೊನಾ ಸೋಂಕಿನ ಬಗ್ಗೆ ಭಯವೇ?: ವೃಷಭ ರಾಶಿಯವರು ಹೀಗೆ ಮಾಡಿದರೆ ಬೇಸರದೊಂದಿಗೆ ಕಷ್ಟವೂ ಕರಗಲಿದೆ ನೋಡಿ…

ಕರೊನಾ ಸೋಂಕಿನ ತಾತ್ಕಾಲಿಕ ಬಂದ್​ನಿಂದ ಬೇಸರವೇ? ಮೇಷ ರಾಶಿಯವರು ಹೀಗೆ ಮಾಡಿದರೆ ಬೋರ್​ ಆಗುವುದಿಲ್ಲ

ಡೆಡ್ಲಿ ಕರೊನಾ ವೈರಸ್​ಗೆ ದೇಶದಲ್ಲಿ 5ನೇ ಬಲಿ: ಜೈಪುರದಲ್ಲಿ ಇಟಲಿ ಪ್ರವಾಸಿಗ ಮೃತ

Share This Article

ನಿದ್ರೆಯಲ್ಲಿದ್ದಾಗ ಎದೆ ಮೇಲೆ ಕೂತು ಯಾರೋ ಕತ್ತು ಹಿಸುಕಿದಂತೆ ಅನುಭವ ಆಗಿದೆಯೇ? ಕಾರಣವೇನು? ಇಲ್ಲಿದೆ ಮಾಹಿತಿ… Sleep Paralysis

Sleep Paralysis: ರಾತ್ರಿ ಮಲಗಿರುವಾಗ ದುಃಸ್ವಪ್ನಗಳು ಬರುವುದು ಸಾಮಾನ್ಯ. ಕೆಲವೊಮ್ಮೆ ಯಾರೋ ನಿಮ್ಮ ಎದೆಯ ಮೇಲೆ…

ಹೊಸ ಚಿಕನ್​ ರೆಸಿಪಿ ಟ್ರೈ ಮಾಡಲು ಬಯಸುತ್ತಿದ್ದೀರಾ? ಹಾಗಾದ್ರೆ ಇಲ್ಲಿದೆ ರುಚಿಕರ ನೇಪಾಳಿ ಸ್ಟೈಲ್​ ಚಿಕನ್​ ಕರಿ! Sunday Special

Sunday Special : ಸಾಮಾನ್ಯವಾಗಿ ರಜೆಯ ದಿನಗಳಲ್ಲಿ ಎಲ್ಲರೂ ರುಚಿಕರವಾದ ಊಟ ಮಾಡಿದ ಬಳಿಕ ವಿಶ್ರಾಂತಿ…