More

    ಸಾಲಮನ್ನಾ ಯೋಜನೆಯಿಂದ ಲಕ್ಷಕ್ಕೂ ಹೆಚ್ಚು ರೈತರನ್ನು ಕೈಬಿಡುವ ಮೂಲಕ ಸರ್ಕಾರದಿಂದ ರೈತರಿಗೆ ದೋಖಾ: ಮಾಜಿ ಸಿಎಂ ಎಚ್​ಡಿಕೆ

    ಬೆಂಗಳೂರು: ಸೂಕ್ತ ದಾಖಲೆಗಳಿಲ್ಲದ ಕಾರಣ ಸಾಲಮನ್ನಾದಿಂದ ರೈತರನ್ನು ಕೈ ಬಿಡುವ ಸರ್ಕಾರದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

    ಟ್ವೀಟ್​ ಮೂಲಕ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಎಚ್​ಡಿಕೆ, ಸಾಲಮನ್ನಾ ಬಗ್ಗೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿರುವ ಬಿಜೆಪಿ ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ. ರೈತರ ಪರವಾಗಿ ನಿಲ್ಲುತ್ತೇನೆ ಎಂದು ಸಂದೇಶ ರವಾನಿಸಿದ್ದಾರೆ.

    ಸಾಲಮನ್ನಾ ಬಗ್ಗೆ ಬಿಜೆಪಿಯ ಯಾರೊಬ್ಬರು ತಲೆ ಕೆಡಿಸಿಕೊಳ್ಳುತ್ತಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದಾಗ ಮೀಸಲಿಟ್ಟಿದ್ದ ಇಪ್ಪತ್ತೈದು ಸಾವಿರ ಕೋಟಿ ರೂಪಾಯಿ ಹಣವನ್ನು ಬಿಜೆಪಿ ಸರ್ಕಾರ ಬೇರೆಡೆಗೆ ವರ್ಗಾಯಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಿಂದಲೂ ರಾಜ್ಯದ ಒಂದು ಲಕ್ಷದ ಐವತ್ತ್ಮೂರು ಸಾವಿರ ರೈತರಿಗೆ ವಂಚಿಸಲಾಗಿದೆ ಎಂದು ದೂರಿದ್ದಾರೆ.

    ‘ರೈತರ ಸಾಲ ಮನ್ನಾ’ ಯೋಜನೆಗೆ ತಿಲಾಂಜಲಿ ಇಡಲು ಬಿಜೆಪಿ ಸರ್ಕಾರ ಅಡ್ಡ ದಾರಿ ತುಳಿಯುತ್ತಿರುವುದು ಖಂಡನೀಯ. ರೈತರ ಬಾಳಿಗೆ ರಾಜ್ಯ ಬಿಜೆಪಿ ಸರ್ಕಾರ ಕೊಳ್ಳಿ ಇಡಲು ಮುಂದಾಗಿದೆ. ದಾಖಲೆಗಳ ನೆಪವೊಡ್ಡಿ ಸಾಲಮನ್ನಾ ಯೋಜನೆಯಿಂದ ಒಂದು ಲಕ್ಷಕ್ಕೂ ಹೆಚ್ಚು ರೈತರನ್ನು ಕೈ ಬಿಡುವ ಮೂಲಕ ಬಿಜೆಪಿ ಸರ್ಕಾರ ರೈತರಿಗೆ ದೋಖಾ ಮಾಡುತ್ತಿದೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts