More

    ರಾಮ ಮಂದಿರ: ಎಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದ ಡಿಸಿಎಂ ಅಶ್ವತ್ಥ ನಾರಾಯಣ

    ಬೆಂಗಳೂರು: ಶ್ರೀರಾಮ ಮಂದಿರಕ್ಕೆ ನಿಧಿ ಸಮರ್ಪಣಾ ಅಭಿಯಾನ ಹಾಗೂ ತಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಟೀಕೆಗಳಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಡಾ.ಅಶ್ವತ್ಥನಾರಾಯಣ; ”ಕುಮಾರಸ್ವಾಮಿ ಅವರು ಮೊದಲು ಕನ್ನಡಿ ಮುಂದೆ ನಿಂತು ತಮ್ಮನ್ನು ತಾವು ನೋಡಿಕೊಳ್ಳಲಿ. ಯಾರು ಹೇಗೆ ಎನ್ನುವುದು ಗೊತ್ತಾಗುತ್ತದೆ. ಯಾವ ರೀತಿ ಇವರು  ವ್ಯವಸ್ಥೆಯನ್ನು ನಡೆಸಿಕೊಂಡು ಬಂದಿದ್ದಾರೆ. ಯಾವ ರೀತಿ ಬದುಕಿ ಬಾಳಿದ್ದಾರೆ ಅಂತ ಗೊತ್ತಾಗುತ್ತದೆ. ಅನಗತ್ಯವಾಗಿ ನನ್ನ ಬಗ್ಗೆ ಮಾತಾಡುವುದು ಬೇಡ. ನಾವು ಸಮಾಜದ ಮಧ್ಯೆ ಬೆಳೆದು ಬಂದವರು ಎಂದರು.

    ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ಗುರುವಾರ ನೂತನ ಜಿಮ್‌ ಹೌಸ್‌ ಹಾಗೂ ವಾರ್ಷಿಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಡಿಸಿಎಂ, ಕಾನೂನಿನ ಅಡಿಯಲ್ಲಿ ನಾವೆಲ್ಲ ಇದ್ದೇವೆ. ನಾವೆಲ್ಲ ಜನತೆಗೆ ಲೆಕ್ಕ ನೀಡಬೇಕು ಎಂಬುದನ್ನು ಮರೆಯಬಾರದು ಎಂದು ಟಾಂಗ್‌ ಕೊಟ್ಟರು.

    ಇನ್ನು ರಾಮ ಮಂದಿರ ನಿಧಿ ಸಂಗ್ರಹವನ್ನು ಪುಂಡ ಪೋಕರಿಗಳು ಮಾಡುತ್ತಿಲ್ಲ. ಸಂಗ್ರಹವಾಗುತ್ತಿರುವ ಪ್ರತಿ ಪೈಸೆಗೂ ಲೆಕ್ಕವಿದೆ. ಪಾರದರ್ಶಕತೆ ಇದೆ. ಅನಗತ್ಯವಾಗಿ ಜನರನ್ನು ದಿಕ್ಕು ತಪ್ಪಿಸಿ ಗೊಂದಲ ಉಂಟು ಮಾಡುವುದು ಬೇಡ ಎಂದು ಡಿಸಿಎಂ ಅವರು ಎಚ್‌ಡಿಕೆಯನ್ನು ತರಾಟೆಗೆ ತೆಗೆದುಕೊಂಡರು.

    ನೂತನ ಪಾರ್ಕಿಂಗ್‌ ನೀತಿ ಬಗ್ಗೆ ನಿರ್ಧಾರವಿಲ್ಲ: ದುಬಾರಿ ಪಾರ್ಕಿಂಗ್‌ ಶುಲ್ಕ ವಿಧಿಸಿ ನಗರದಲ್ಲಿ ವಾಹನ ಸಂಚಾರ ಪ್ರಮಾಣವನ್ನು ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆಯನ್ನು ಉತ್ತೇಜಿಸುವ ಪ್ರಸ್ತಾವನೆಯ ಬಗ್ಗೆ ಸರಕಾರ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು. ತಜ್ಞರ ಸಮಿತಿಯಿಂದ ಈ ಬಗ್ಗೆ ಸಲಹೆಯಷ್ಟೇ ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸರಕಾರ ತಾನೆ ನಿರ್ಧಾರ ಕೈಗೊಳ್ಳಬೇಕಲ್ಲವೆ ಎಂದ ಅವರು, ಈ ಬಗ್ಗೆ ಇನ್ನೂ ಯಾವ ರೀತಿಯ ಚರ್ಚೆ ಅಥವಾ ಪರಿಶೀಲನೆ ನಡೆದಿಲ್ಲ. ಮುಂದಿನ ದಿಗಳಲ್ಲಿ ಸಮಾಜಕ್ಕೆ ಒಳ್ಳೆಯದಾಗುವ, ಸಮಗ್ರವಾಗಿ ಎಲ್ಲ ಅಂಶಗಳನ್ನು ಪರಿಗಣಿಸಿ ನಿರ್ಧಾರ ಕೈಗೊಳ್ಳವುದು ಆಗುತ್ತದೆ ಎಂದರು.

    ಖಾಲಿ ಹುದ್ದೆ ಭರ್ತಿಗೆ ಕ್ರಮ: ಖಾಲಿ ಇರುವ ಪ್ರಾಂಶುಪಾಲರು ಹಾಗೂ ಪದವಿ ಕಾಲೇಜು ಬೋಧಕರ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಬಜೆಟ್‌ ಪೂರ್ವ ಸಭೆಯಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿಗಳಗೆ ಮನವಿ ಸಲ್ಲಿಸಲಾಗಿದೆ. ಅವರೂ ಈ ಬಗ್ಗೆ ಪೂರಕವಾಗಿ ಸ್ಪಂದಿಸಿದ್ದಾರೆಂದು ಡಿಸಿಎಂ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

    ಒಕ್ಕಲಿಗರ ಮೀಸಲು ಹೆಚ್ಚಳ ಬೇಡಿಕೆಗೆ ಪ್ರತಿಕ್ರಿಯಿಸಿದ ಡಾ.ಅಶ್ವತ್ಥನಾರಾಯಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts