More

    ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ದೋಸ್ತಿಗಳ ‘ಹೊಸ ತೊಡಕು’; ಹೆಚ್‍ಡಿಕೆ ತೋಟದ ಮನೆಯಲ್ಲಿ ಆಯೋಜಿಸಿದ್ದ ಔತಣಕೂಟ ರದ್ದು

    ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ದೋಸ್ತಿ ನಾಯಕರು ‘ ಹೊಸ ತೊಡಕು’ ನೆಪದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಬಿಡದಿ ಸಮೀಪದ ಕೇತಗಾನಹಳ್ಳಿ ತೋಟದಲ್ಲಿ ಸ್ನೇಹಸಮ್ಮಿಲನ ಔತಣಕೂಟ‌ ಏರ್ಪಡಿಸಿದ್ದರು.

    ಯುಗಾದಿ ಹಬ್ಬದ ಮರುದಿನ ಆಚರಿಸುವ ಹೊಸ ತೊಡಕು ಅದರದ್ದೇ ಖದರ್, ಬಾಡೂಟದ ಸೆಳೆತವಿದೆ. ಇದನ್ನು ಪರಿಗಣಿಸಿ ದೋಸ್ತಿ ನಾಯಕರು ಹೊಸ ತೊಡಕು ಮುಂದಿಟ್ಟುಕೊಂಡು ಔತಣಕೂಟದ ದಾಳ ಉರುಳಿಸಿದ್ದರು.

    ಹೆಚ್‍ಡಿಕೆ ಬಿಡದಿ ತೋಟದ ಮನೆಯಲ್ಲಿ ಔತಣಕೂಟದ ಜೊತೆಗೆ ಒಕ್ಕಲಿಗ ನಾಯಕರ ಸಭೆಯನ್ನು ಇಂದು ಕರೆಯಲಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆಯೇ ಚುನಾವಣಾಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಊಟದ ವ್ಯವಸ್ಥೆ, ಚೇರ್, ಪೆಂಡಾಲ್ ಪರಿಶೀಲನೆ ನಡೆಸಿದರು. ಅಲ್ಲದೇ 50ಕ್ಕೂ ಹೆಚ್ಚು ಮಂದಿ ಸೇರಿದ್ರೆ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆಗುತ್ತೆ. ಕುಟುಂಬಸ್ಥರಿಗೆ ಮಾತ್ರ ಊಟದ ವ್ಯವಸ್ಥೆ ಮಾಡಬಹುದು. ಆದರೆ ರಾಜಕೀಯ ನಾಯಕರು, ಮುಖಂಡರು ಬರುವ ಹಾಗಿಲ್ಲ ಎಂದು ಎಚ್ಚರಿಕೆ ನೀಡಿದರು.

    ಸದ್ಯ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರು ಸಭೆ ರದ್ದು ಮಾಡಲಾಗಿದೆ. ಎಂಸಿಸಿ ಟೀಂ ಇಲ್ಲೇ ಇದ್ದು ಎಲ್ಲವನ್ನೂ ಪರಿಶೀಲನೆ ನಡೆಸಲಿದೆ. ನೀತಿ ಸಂಹಿತೆ ಉಲ್ಲಂಘನೆ ಆದ್ರೆ ಕಾನೂನು ರೀತಿಯ ಕ್ರಮವಹಿಸುತ್ತೇವೆ ಎಂದು ಸಹಾಯಕ ಚುನಾವಣಾ ಅಧಿಕಾರಿ ರಮೇಶ್ ಹೇಳಿದ್ದಾರೆ.

    ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ದಂಡು ಬುಧವಾರ ಒಗ್ಗಟ್ಟು ಪ್ರದರ್ಶಿಸಿತು. ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಪೀಠಾಧಿಪತಿ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

    ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿ ಆಶೀರ್ವಾದ ಪಡೆದವರಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಿಎಂ ಮತ್ತು ಮಂಡ್ಯ ಲೋಕಸಭಾ ಅಭ್ಯರ್ಥಿ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವಥನಾರಾಯಣ್, ಕೇಂದ್ರ , ಜೆಡಿಎಸ್ ನಾಯಕ, ಮಾಜಿ ಸಚಿವ ಜಿ.ಟಿ. ದೇವೇಗೌಡ, ಬಿಜೆಪಿ ಮಾಜಿ ಸಚಿವ ಸಿ.ಟಿ. ರವಿ, ಮೊದಲ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಿರುವ ಎನ್.ಡಿ.ಎ ಅಭ್ಯರ್ಥಿಗಳಾದ ಯದುವೀರ ಒಡೆಯರ್, ವಿ.ಸೋಮಣ್ಣ, ಶೋಭಾ‌ ಕರಂದ್ಲಾಜೆ, ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ,‌ಡಾ.ಸಿ.ಎನ್.ಮಂಜುನಾಥ ಇದ್ದರು.

    ನಿಮ್ಮ ಗಂಡನ ಗೊರಕೆಯಿಂದ ಕಿರಿಕಿರಿ ಆಗ್ತಿದ್ಯಾ? ಹಾಗಿದ್ರೆ ಈ ಟಿಪ್ಸ್​​ ನಿಮಗಾಗಿ….

    2nd PUC ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ಫಸ್ಟ್, ಉಡುಪಿ ಸೆಕೆಂಡ್.. ಬಾಲಕಿಯರೇ ಮೇಲುಗೈ

    ಮಕ್ಕಳನ್ನ ಸಾಕುವುದಕ್ಕೆ ಕಷ್ಟವಾಗುತ್ತಿದೆ ಎಂದು ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆಗೈದ ತಾಯಿ

    ಅಮಾಯಕ ಪತಿಗೆ ಯಾಕೆ ಮೋಸ ಮಾಡಿದ್ದೀರಿ? ಮುಟ್ಟಿ ನೋಡಿ ಕೊಳ್ಳುವ ಉತ್ತರ ಕೊಟ್ರು ಸಮಂತಾ

    ದ್ವಿತೀಯ ಪಿಯುಸಿ ಮರು ಮೌಲ್ಯಮಾಪನ, ಮರು ಎಣಿಕೆ ದಿನಾಂಕ ಫಿಕ್ಸ್;‌ ಈಗಲೇ ಅರ್ಜಿ ಸಲ್ಲಿಸಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts