ಎಚ್.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ; ಐಸಿಯುನಿಂದ ವಾರ್ಡ್​​​ಗೆ ಶಿಫ್ಟ್

hdk
Published on

ಬೆಂಗಳೂರು: ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಆರೋಗ್ಯ ಸ್ಥಿತಿ ಕುರಿತಾಗಿ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್ ಆಗಿದೆ.

ನಿನ್ನೆಯಿಂದ ಎಚ್​​ಡಿಕೆ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಅವರನ್ನು ಐಸಿಯು ನಿಂದ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ತಜ್ಞ ವೈದ್ಯ ತಂಡ ದಿಂದ ಎಚ್​​ಡಿಕೆ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ ಎಂದು ಅಪೋಲೋ ಆಸ್ಪತ್ರೆಯಿಂದ ರಿಲೀಸ್ ಆಗಿರುವ ಹೆಲ್ತ್ ಬುಲೆಟಿನ್​ನಲ್ಲಿ ತಿಳಿಸಲಾಗಿದೆ.

ಕುಮಾರಸ್ವಾಮಿ ಅವರನ್ನು ನೋಡಲು ತಾಯಿ ಚೆನ್ನಮ್ಮ ಅಪೋಲೋ ಆಸ್ಪತ್ರೆಗೆ ಬಂದಿದ್ದರು. ಇತ್ತ ತಂದೆ ಅವರ ಆರೋಗ್ಯ ಸ್ಥಿತಿ ಕುರಿತಾಗಿ ಪುತ್ರ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಂದೆಯವರು ಈಗ ಉತ್ತಮವಾಗಿ ಚೇತರಿಸಿಕೊಂಡಿದ್ದಾರೆ. ಅವರನ್ನು ಈಗ ವಾರ್ಡ್ ಗೆ ಸ್ಥಳಾಂತರ ಮಾಡಲಾಗಿದ್ದು, ಶೀಘ್ರವೇ ಮನೆಗೆ ಮರಳಲಿದ್ದಾರೆ. ಕೆಲ ದಿನ ವಿಶ್ರಾಂತಿ ತೆಗೆದುಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ. ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು, ಅಭಿಮಾನಿಗಳು ಯಾರು ಕೂಡ ಆತಂಕ ಪಡಬೇಕಿಲ್ಲ. ತಂದೆಯವರು ಕ್ಷೇಮವಾಗಿದ್ದು, ಕೆಲ ದಿನಗಳಲ್ಲಿಯೇ ಪಕ್ಷದ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂದಿದ್ದಾರೆ.

ತಂದೆಯವರ ಆರೋಗ್ಯ ಚೇತರಿಕೆಗಾಗಿ ಪ್ರೀತಿ, ವಾತ್ಸಲ್ಯದಿಂದ ಪ್ರಾರ್ಥನೆ ಮಾಡಿದ ಎಲ್ಲ ಕಾರ್ಯಕರ್ತ ಬಂಧುಗಳು, ನಾಡಿನ ಜನರಿಗೆ ನನ್ನ ವಂದನೆಗಳು. ಹಾಗೆಯೇ, ತಂದೆಯವರ ಆರೋಗ್ಯ ವಿಚಾರಿಸಿದ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಗಳವರಿಗೆ ಹಾಗೂ ಕ್ಷೇಮ ವಿಚಾರಿಸಿದ ಹಲವಾರು ಪಕ್ಷಗಳ ಹಿರಿಯ ನಾಯಕರಿಗೆ ನನ್ನ ತುಂಬು ಹೃದಯದ ಕೃತಜ್ಞತೆಗಳು ಎಂದು ಟ್ವೀಟ್​​​ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net