More

    ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಮುಂದಾಗಿತ್ತು, ನರೇಂದ್ರ ಮೋದಿಯೇ ಆಫರ್ ಮಾಡಿದ್ದರು: ಎಚ್​ಡಿಕೆ

    ತುಮಕೂರು: ಬಿಜೆಪಿಯವರು ನನ್ನನ್ನು ಸಿಎಂ ಮಾಡಲು ಮುಂದಾಗಿದ್ದರು ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

    ಶಿರಾದಲ್ಲಿ ಬುಧವಾರ ನಡೆದ ಜೆಡಿಎಸ್​ ಸಭೆಯಲ್ಲಿ ಮಾತನಾಡಿದ ಎಚ್​ಡಿಕೆ, ”ಕೇಂದ್ರದಿಂದ ನರೇಂದ್ರ ಮೋದಿ ಅವರೇ ಆಫರ್ ಮಾಡಿದ್ದರು. ಐದು ವರ್ಷ ನಿನ್ನನ್ನು ಯಾರೂ ಟಚ್ ಮಾಡಲ್ಲ ಅಂದಿದ್ದರು. ಕಾಂಗ್ರೆಸ್​ನವರ ಸಂಕುಚಿತ ಮನೋಭಾವದಿಂದ ರಾಜ್ಯದಲ್ಲಿ ದರಿದ್ರ ಸರ್ಕಾರ ಬಂದಿದೆ. ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ರಾಹುಲ್ ಗಾಂಧಿಯಿಂದಲೇ ಹಾಸನದಲ್ಲಿ ಭಾಷಣ ಮಾಡಿಸಿದ್ದರು” ಎಂದು ಕಾಂಗ್ರೆಸ್ ವಿರುದ್ಧ ಅಸಮಾಧಾನ ಹೊರಹಾಕಿದರು. ಇದನ್ನೂ ಓದಿರಿ ಶಿರಾ, ರಾಜರಾಜೇಶ್ವರಿ ನಗರಕ್ಕೆ ಉಪ ಚುನಾವಣೆ; ಬಿಜೆಪಿ ಅಭ್ಯರ್ಥಿ ಆಯ್ಕೆ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು?

    ”ಕಳೆದ ವಿಧಾನಸಭೆ ಫಲಿತಾಂಶ ನೋಡಿ ರಾಜಕೀಯದಿಂದ ನಿರ್ಗಮಿಸಬೇಕು ಅಂದುಕೊಂಡೆ. ಆದ್ರೆ ಕಾಂಗ್ರೆಸ್​ನವರು ತರಾತುರಿಯಲ್ಲಿ ದೇವೇಗೌಡರಿಗೆ ಫೋನ್ ಮಾಡಿ ಕರೆದ್ರು. ದೇವೇಗೌಡರು ‘ಕುಮಾರಸ್ವಾಮಿ ಆರೋಗ್ಯ ಸರಿ ಇಲ್ಲ. ನಿಮ್ಮಲ್ಲಿ ಯಾರಿಗಾದರೂ ಮುಖ್ಯಮಂತ್ರಿ ಮಾಡಿ’ ಅಂದಿದ್ರು. ಎಷ್ಟೇ ಹೇಳಿದ್ರೂ ಕೇಳದೆ ನನಗೆ ಕಾಂಗ್ರೆಸ್​ನವರು ಮುಖ್ಯಮಂತ್ರಿ ಪಟ್ಟ ಕಟ್ಟಿದ್ರು. ನನಗೆ ಸಿಎಂ ಆಗುವ ಆಸೆ ಇರಲಿಲ್ಲ’ ಎಂದು ಎಚ್​ಡಿಕೆ ಹೇಳಿದರು.

    ಕಾಂಗ್ರೆಸ್​ ಮುಖಂಡನಿಗೆ ‘ಇಡಿ’ ನೋಟಿಸ್​, ಡಿಕೆಶಿಗೆ ಮತ್ತೆ ಸಂಕಷ್ಟ

    ‘ನೀವು ನನಗೆ ವಿಷ ಕೊಡ್ತೀರೋ, ಹಾಲು ಕೊಡ್ತೀರೋ ನಿಮಗೆ ಬಿಟ್ಟದ್ದು…’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts