More

    ಲೋಕಸಭಾ ಚುನಾವಣೆಗೆ ನಾನೂ, ನಿಖಿಲ್‌ ಇಬ್ಬರೂ ಸ್ಪರ್ಧೆ ಮಾಡಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

    ಬೆಂಗಳೂರು:  ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಚರ್ಚಿಸಲು ಹೆಚ್​ಡಿ ದೇವೇಗೌಡರ ನೇತೃತ್ವದ ಜೆಡಿಎಸ್ ನಿಯೋಗವು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ.  ಈ ವೇಳೆ ನವದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಎಚ್​ಡಿ ಕುಮಾರಸ್ವಾಮಿ ಅವರು  ಕೊನೆಗೂ ಮೌನ ಮುರಿದಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2024ರ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಹಾಗೂ ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಕೂಡ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ. ಆದರೆ, 20 ಲೋಕಸಭಾ ಕ್ಷೇತ್ರಗಳಲ್ಲಿಯೂ ಪ್ರಚಾರ ಕಾರ್ಯಗಳಲ್ಲಿ ಇಬ್ಬರೂ ಭಾಗಿಯಾಗುತ್ತೇವೆ ಎಂದು ಹೇಳಿದ್ದಾರೆ.

    ನಿಖಿಲ್ 28 ಲೋಕಸಭಾ ಕ್ಷೇತ್ರದಲ್ಲಿ ಸಂಚಾರ ಮಾಡ್ತಾರೆ. ಯಾವುದೇ ಕಾರಣಕ್ಕೂ ಚುನಾವಣೆಗೆ ನಿಲ್ಲಲ್ಲ. ಆದರೆ, ಜನರೇ ನಿಲ್ಲಬೇಕು ಅಂತ ಹೇಳುತ್ತಿದ್ದಾರೆ. ನಿಖಿಲ್ 2ನೇ ಬಾರಿ ಚುನಾವಣೆಯಲ್ಲಿ ಸೋತಿದ್ದಾರೆಂಬ ಅನುಕಂಪದ ಅಲೆಯಿದ್ದು, ಮಂಡ್ಯದಲ್ಲಿ ಸ್ಪರ್ಧೆ ಮಾಡಲಿ ಎಂದು ಹೇಳುತ್ತಿದ್ದಾರೆ. ಜನರಿಗೆ ನಿಖಿಲ್ ಬಗ್ಗೆ ಅನುಕಂಪ ಇದೆ. ಆದ್ರೆ ನಿಖಿಲ್ ಅಭ್ಯರ್ಥಿ ಆಗೋ ಬಗ್ಗೆ ಪಕ್ಷದಲ್ಲಿ ತೀರ್ಮಾನ ಆಗಿಲ್ಲವೆಂದು ತಿಳಿಸಿದ್ದಾರೆ.

    ಸೀಟ್ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ ಇಲ್ಲ. ಯಾವ ಯಾವ ಕ್ಷೇತ್ರದಲ್ಲಿ ಯಾರ್ಯಾರು ನಿಲ್ತಾರೆ ಅಂತ ನಾವು ಫೈನಲ್ ಮಾಡುತ್ತೇವೆ. ಅದರ ಬಗ್ಗೆ ಯಾವುದೇ ಸಮಸ್ಯೆಯಿಲ್ಲ. ಒಂದು ಸೀಟ್ ಹೆಚ್ಚು ಕಮ್ಮಿ ಆಗುತ್ತದೆ, ಅದರಲ್ಲಿ ಏನು ಸಮಸ್ಯೆ ಇಲ್ಲ. ವಿಶ್ವಾಸ ಬೇಕು ಅಷ್ಟೇ, ಅದನ್ನ ನಾವು ಉಳಿಸಿಕೊಳ್ಳಬೇಕು. ಜನವರಿ ಅಂತ್ಯದ ಒಳಗೆ ನಾವು ಎಲ್ಲಾ ನಿರ್ಧಾರ ಮಾಡುತ್ತೇವೆಂದು ತಿಳಿಸಿದರು.

    ಪ್ರಧಾನಿ ಮೋದಿಯನ್ನು ಭೇಟಿಯಾದ ಹೆಚ್​ಡಿ ದೇವೇಗೌಡ, ಕುಮಾರಸ್ವಾಮಿ, ರೇವಣ್ಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts