More

    ಎಚ್.ಡಿ.ಕುಮಾರಸ್ವಾಮಿ ಸತ್ಯಹರಿಶ್ಚಂದ್ರರೇ?

    ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಸತ್ಯ ಹರಿಶ್ಚಂದ್ರನ ಮೊಮ್ಮಗ. ನಾನೇನು ಎನ್ನುವುದು ಜನಕ್ಕೆ ಗೊತ್ತಿದೆ. ನಾನು ಕಂಡಿತವಾಗಿಯೂ ಸತ್ಯ ಹರಿಶ್ಚಂದ್ರ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
    ಮತದಾನಕ್ಕೆ ಮುನ್ನ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಕೂಪನ್ ಕಾಡ್‌ರ್ ಹಂಚಿದೆ ಎಂಬ ಕುಮಾರಸ್ವಾಮಿಯವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದೆಯೇ ಹೇಳಿ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿಯವರು ಏನನ್ನು ಹಂಚಿದ್ದಾರೆ ಎಂದು ತೋರಿಸಲೆ. ಮುನಿರತ್ನ, ಕುಮಾರಸ್ವಾಮಿ ಸೇರಿದಂತೆ ಎಲ್ಲರೂ ಹಂಚಿದ್ದಾರೆ. ನಾವು ಹಂಚುತ್ತಿರುವುದು ನಮ್ಮ ಪ್ರಣಾಳಿಕೆ ಕಾರ್ಡ್ ಎಂದರು.
    ಕುಮಾರಸ್ವಾಮಿ ಹೆದರಿಕೊಂಡು ರಣ ಹೇಡಿತರ ಬೇರೆ ಕಡೆ ಹೋಗಿದ್ದಾರೆ. ಗ್ರಾಮಾಂತರದಲ್ಲಿ ಅವರೇ ಚುನಾವಣೆಗೆ ನಿಂತುಕೊಳ್ಳಬೇಕಿತ್ತು. ಅಮಾಯಕರನ್ನು ನಿಲ್ಲಿಸಿ ಮಂಡ್ಯಕ್ಕೆ ಓಡಿ ಹೋಗಿದ್ದಾರೆ. ಕುಮಾರಸ್ವಾಮಿ ಏನೇನು ಮಾಡುತ್ತಿದ್ದಾರೆ, ಏನೇನು ಹಂಚುತ್ತಿದ್ದಾರೆ ಎನ್ನುವುದು ನಮಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದರು.
    ಮುನಿರತ್ನನ ಮೂಲಕ ಗೋಲ್ಡ್ ಕಾರ್ಡ್ ಮಾಡಿ ಹಂಚುತ್ತಿದ್ದಾರೆ. ಸಿನಿಮಾ ಸ್ಟೈಲ್‌ನಲ್ಲಿ ಈ ಕೆಲಸ ಮಾಡಿದ್ದಾರೆ ಅವರೇಕೆ ಇಷ್ಟೊಂದು ಹತಾಶರಾಗಿದ್ದಾರೆ? ಹರಿಶ್ಚಂದ್ರನ ಮೊಮ್ಮಗ ಏನು ಹಂಚಿದ್ದಾನೆ ಎಂದು ಕುಟುಕಿದರು.
    ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಹೇಳಿ, ಹೆಣ್ಣು ಮಕ್ಕಳನ್ನು ಅಗೌರವದಿಂದ ಕಂಡಿದ್ದಾರೆ. ಮಾಧ್ಯಮಗಳಲ್ಲಿ ಅವರ ಕರ್ಮಕಾಂಡ ತೋರಿಸುತ್ತಿದ್ದರು. ಇದರ ವಿರುದ್ದ ಹೊಸ ಕಾನೂನು ಮಾಡಬೇಕು ಎಂದು ಯಾರೋ ಹೇಳುತ್ತಿರುವುದನ್ನು ನಾನು ಕೇಳಿದೆ ಎಂದರು.
    ಸಂಸದನೊಬ್ಬ ಹೆಣ್ಣುಮಕ್ಕಳ ಜತೆ ಅಗೌರವದಿಂದ ನಡೆದುಕೊಂಡಿದ್ದಾರೆ ಎಂದಾಗ ಇದರ ಬಗ್ಗೆ ದೇವೇಗೌಡರು, ಕುಮಾರಸ್ವಾಮಿ, ಡಾ.ಮಂಜುನಾಥ್, ರೇವಣ್ಣ ಅವರನ್ನು ಕೇಳಿ. ನಾನು ಉತ್ತರ ಕೊಡಲು ಆಗುವುದಿಲ್ಲ. ಅವರ ಆಚಾರ ವಿಚಾರ ಎಲ್ಲವೂ ಅವರೇ. ನನಗೆ ಇದನ್ನು ನೋಡಿ ಅವಮಾನವಾಗುತ್ತಿದೆ ಎಂದು ಹೇಳಿದರು.
    ಕೆಪಿಸಿಸಿ ಅಧ್ಯಕ್ಷರು ಬುದ್ಧಿವಂತರೇ, ಅವರು ಏನು ಮಾಡಿದ್ದಾರೆ? ಎನ್ನುವ ಕುಮಾರಸ್ವಾಮಿ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿ, ನಾವು ಮಾಡಿರುವುದಕ್ಕೆ, ಮಾಡುತ್ತೇವೆ ಎಂದು ಹೇಳಿದ್ದಕ್ಕೆ ಜನ ಈಚೆ ಬಂದು ನಮಗೆ 136 ಸ್ಥಾನ ಕೊಟ್ಟಿದ್ದಾರೆ. ನೀನೇನು ಮಾಡಲಿಲ್ಲ ಅದಕ್ಕೆ ಜನ 18 ಸ್ಥಾನಗಳನ್ನು ಕೊಟ್ಟಿರುವುದು ಎಂದು ವಾಗ್ದಾಳಿ ನಡೆಸಿದರು.
    ಮೊದಲ ಹಂತದ 14 ಕ್ಷೇತ್ರದಲ್ಲಿ 10 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಒಟ್ಟು 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಇದು ಜ್ಯೋತಿಷ್ಯವಲ್ಲ, ರಾಜಕೀಯ ಪಾಂಡಿತ್ಯ. ಗೌಡರ ಕುಟುಂಬ ಸೇರಿದಂತೆ 4 ಸ್ಥಾನವೂ ಬರುವುದಿಲ್ಲ ಎಂದರು.
    ಬಿಜೆಪಿ ಗೊಂದಲದಲ್ಲಿ ಮುಳುಗಿದೆ. ರೈತರು, ತಾಯಂದಿರು, ಯುವ ಸಮುದಾಯ, ಎಲ್ಲಾ ವರ್ಗದ ಜನರು ಹಾಗೂ ದಳ- ಬಿಜೆಪಿ ಮತದಾರರು ಕಾಂಗ್ರೆಸ್‌ಗೆ ಮತದಾನ ಮಾಡಬೇಕು ಎಂದು ತೀರ್ಮಾನ ಮಾಡಿದ್ದಾರೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts